Mohammed Shami: ಮೊಹಮ್ಮದ್ ಶಮಿ ರೀ ಎಂಟ್ರಿಗೆ ಮುಹೂರ್ತ ಫಿಕ್ಸ್
Mohammed Shami: ಟೀಂ ಇಂಡಿಯಾ ಸೆಪ್ಟೆಂಬರ್‌ನಲ್ಲಿ ಬಾಂಗ್ಲಾದೇಶ ವಿರುದ್ಧ ತವರಿನಲ್ಲಿ ಟೆಸ್ಟ್ ಸರಣಿಯನ್ನು ಆಡಲಿದೆ. ಈ ಸರಣಿಯೊಂದಿಗೆ ಪ್ರಮುಖ ಬೌಲರ್ಗಳು ತಂಡವನ್ನು ಸೇರಿಕೊಳ್ಳುವ ವರದಿ ಇದೆ. ಅದರಲ್ಲೂ ಏಕದಿನ ವಿಶ್ವಕಪ್ ಬಳಿಕ ಇಂಜುರಿಯಿಂದಾಗಿ ತಂಡದಿಂದ ಹೊರಗುಳಿದಿರುವ ವೇಗಿ ಮೊಹಮ್ಮದ್ ಶಮಿ, ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯನ್ನು ಆಡುವ ಸಾಧ್ಯತೆಗಳು ಹೆಚ್ಚಾಗಿವೆ.
1 / 6
ಇತ್ತೀಚೆಗೆ ಶ್ರೀಲಂಕಾ ಪ್ರವಾಸ ಕೈಗೊಂಡಿದ್ದ ಟೀಂ ಇಂಡಿಯಾ, ಏಕದಿನ ಮತ್ತು ಟಿ20 ಸರಣಿಗಳನ್ನು ಆಡಿತ್ತು. ಇದರಲ್ಲಿ ಟಿ20 ಸರಣಿಯಲ್ಲಿ ಗೆದ್ದುಬೀಗಿದ್ದ ಟೀಂ ಇಂಡಿಯಾ, ಏಕದಿನ ಸರಣಿಯಲ್ಲಿ ಸೋಲನ್ನು ಎದುರಿಸಬೇಕಾಗಿತ್ತು. ಇದಕ್ಕೆ ಪ್ರಮುಖ ಕಾರಣ ತಂಡದ ಬ್ಯಾಟ್ಸ್‌ಮನ್‌ಗಳ ಕಳಪೆ ಪ್ರದರ್ಶನ ಎನ್ನಲಾಗುತ್ತಿದೆಯಾದರೂ, ಪ್ರಮುಖ ಬೌಲರ್ಗಳ ಅಲಭ್ಯತೆಯೂ ಒಂದು ಕಾರಣವಾಗಿತ್ತು.
2 / 6
ಈ ಸರಣಿಯಿಂದ ತಂಡದ ಪ್ರಮುಖ ಬೌಲರ್ ಜಸ್ಪ್ರೀತ್ ಬುಮ್ರಾ ಹೊರಗುಳಿದಿದ್ದರು. ಮತ್ತೊಬ್ಬ ಅನುಭವಿ ವೇಗಿ ಮೊಹಮ್ಮದ್ ಶಮಿ ಕೂಡ ಇಂಜುರಿಯಿಂದಾಗಿ ಈಗಾಗಲೇ ತಂಡದಿಂದ ಹೊರಗುಳಿದಿದ್ದಾರೆ. ಆಲ್ರೌಂಡರ್ ರವೀಂದ್ರ ಜಡೇಜಾ ಹಾಗೂ ಹಾರ್ದಿಕ್ ಪಾಂಡ್ಯ ಕೂಡ ಸಹ ಸರಣಿಗೆ ಆಯ್ಕೆಯಾಗಿರಲಿಲ್ಲ. ಈ ಅನುಭವಿಗಳ ಅಲಭ್ಯತೆ ತಂಡವನ್ನು ಏಕದಿನ ಸರಣಿ ಸೋಲುವಂತೆ ಮಾಡಿತ್ತು.
3 / 6
ಇದೀಗ ಟೀಂ ಇಂಡಿಯಾ ಸೆಪ್ಟೆಂಬರ್‌ನಲ್ಲಿ ಬಾಂಗ್ಲಾದೇಶ ವಿರುದ್ಧ ತವರಿನಲ್ಲಿ ಟೆಸ್ಟ್ ಸರಣಿಯನ್ನು ಆಡಲಿದೆ. ಈ ಸರಣಿಯೊಂದಿಗೆ ಪ್ರಮುಖ ಬೌಲರ್ಗಳು ತಂಡವನ್ನು ಸೇರಿಕೊಳ್ಳುವ ವರದಿ ಇದೆ. ಅದರಲ್ಲೂ ಏಕದಿನ ವಿಶ್ವಕಪ್ ಬಳಿಕ ಇಂಜುರಿಯಿಂದಾಗಿ ತಂಡದಿಂದ ಹೊರಗುಳಿದಿರುವ ವೇಗಿ ಮೊಹಮ್ಮದ್ ಶಮಿ, ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯನ್ನು ಆಡುವ ಸಾಧ್ಯತೆಗಳು ಹೆಚ್ಚಾಗಿವೆ.
4 / 6
ಭಾರತ ಮತ್ತು ಬಾಂಗ್ಲಾದೇಶ ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿ ಸೆಪ್ಟೆಂಬರ್‌ನಲ್ಲಿ ಆರಂಭವಾಗಲಿದೆ. ಈ ಸರಣಿಯಲ್ಲಿ ಮೊಹಮ್ಮದ್ ಶಮಿ ಕೂಡ ಆಡುವುದನ್ನು ಕಾಣಬಹುದಾಗಿದೆ. ವರದಿ ಪ್ರಕಾರ ಶಮಿ ವೇಗವಾಗಿ ಚೇತರಿಸಿಕೊಳ್ಳುತ್ತಿದ್ದು, ಈಗಾಗಲೇ ಅವರು ನೆಟ್ಸ್ನಲ್ಲಿ ಬೌಲಿಂಗ್ ಕೂಡ ಆರಂಭಿಸಿದ್ದಾರೆ.
5 / 6
ಪಾದದ ಗಾಯದಿಂದ ಚೇತರಿಸಿಕೊಳ್ಳುವಲ್ಲಿ ಶಮಿ ಸಾಕಷ್ಟು ಪ್ರಗತಿ ಸಾಧಿಸಿದ್ದು, ಆಯ್ಕೆದಾರರು ಶಮಿ ಅವರ ಪ್ರಸ್ತುತ ಸ್ಥಿತಿಯ ಬಗ್ಗೆ ನಿರಂತರವಾಗಿ ಮಾಹಿತಿ ತೆಗೆದುಕೊಳ್ಳುತ್ತಿದ್ದಾರೆ. ಶಮಿ ಶೀಘ್ರದಲ್ಲೇ ದುಲೀಪ್ ಟ್ರೋಫಿಯಲ್ಲಿ ಆಡುವುದನ್ನು ಕಾಣಬಹುದು. ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಶಮಿ, ತಾನು ಟೀಂ ಇಂಡಿಯಾದಲ್ಲಿ ಆಡುವುದಕ್ಕೂ ಮುನ್ನ ದೇಶಿ ಕ್ರಿಕೆಟ್ನಲ್ಲಿ ಆಡುವುದನ್ನು ನೀವು ಕಾಣಬಹುದು ಎಂದಿದ್ದರು.
6 / 6
ಮೊಹಮ್ಮದ್ ಶಮಿ ಕೊನೆಯ ಬಾರಿಗೆ 2023 ರ ಏಕದಿನ ವಿಶ್ವಕಪ್‌ನಲ್ಲಿ ತಂಡದ ಪರ ಆಡಿದ್ದರು. ಈ ಟೂರ್ನಿಯಲ್ಲಿ ಶಮಿ ಅದ್ಭುತ ಬೌಲಿಂಗ್ ಪ್ರದರ್ಶಿಸಿ ಬರೋಬ್ಬರಿ 24 ವಿಕೆಟ್ ಪಡೆದು ಪಂದ್ಯಾವಳಿಯಲ್ಲಿ ಅಧಿಕ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದರು.