ಡಾಟ್​ ಬಾಲ್​ನಲ್ಲೇ ಅರ್ಧಶತಕ: ಸರ್ವಶ್ರೇಷ್ಠ ಪ್ರದರ್ಶನ ನೀಡಿದ ಮೊಹಮ್ಮದ್ ಸಿರಾಜ್

|

Updated on: Apr 07, 2025 | 7:44 AM

IPL 2025 SRH vs GT: ಐಪಿಎಲ್​ನ 19ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 152 ರನ್​ ಕಲೆಹಾಕಿದರೆ, ಈ ಗುರಿಯನ್ನು ಗುಜರಾತ್ ಟೈಟಾನ್ಸ್ ತಂಡ 16.4 ಓವರ್​ಗಳಲ್ಲಿ ಬೆನ್ನತ್ತಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿ ಮೊಹಮ್ಮದ್ ಸಿರಾಜ್.

1 / 6
 IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ಮೊಹಮ್ಮದ್ ಸಿರಾಜ್ (Mohammed Siraj) ಪರಾಕ್ರಮ ಮುಂದುವರೆದಿದೆ. ಕಳೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ಅದ್ಭುತ ಬೌಲಿಂಗ್ ಮಾಡಿದ್ದ ಸಿರಾಜ್ ಇದೀಗ ಸನ್​ರೈಸರ್ಸ್ ಹೈದರಾಬಾದ್ (SRH) ತಂಡಕ್ಕೂ ಆಘಾತ ನೀಡಿದ್ದಾರೆ. ಅದು ಸಹ ಪವರ್​ಪ್ಲೇನಲ್ಲೇ ಪರಾಕ್ರಮ ಮೆರೆಯುವ ಮೂಲಕ ಎಂಬುದು ವಿಶೇಷ.

2 / 6
ಹೈದರಾಬಾದ್​ನ ರಾಜೀವ್​ ಗಾಂಧಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಮಾಡಿದ್ದ ಗುಜರಾತ್ ಟೈಟಾನ್ಸ್ ತಂಡಕ್ಕೆ ಮೊದಲ ಓವರ್​ನಲ್ಲೇ ಮೊಹಮ್ಮದ್ ಸಿರಾಜ್ ಯಶಸ್ಸು ತಂದುಕೊಟ್ಟರು. ಅದು ಕೂಡ ಡೇಂಜರಸ್ ಟ್ರಾವಿಸ್ ಹೆಡ್ (8) ಅವರನ್ನು ಔಟ್ ಮಾಡುವ ಮೂಲಕ.

3 / 6
ಇದಾದ ಬಳಿಕ ಅಪಾಯಕಾರಿಯಗುವ ಸೂಚನೆ ನೀಡಿದ್ದ ಅಭಿಷೇಕ್  ಶರ್ಮಾ (18) ಅವರ ವಿಕೆಟ್ ಕಬಳಿಸಿದರು. ಆ ನಂತರ 19ನೇ ಓವರ್​ನಲ್ಲಿ ಮರಳಿದ ಸಿರಾಜ್ ಅನಿಕೇತ್ ವರ್ಮಾ (18) ಹಾಗೂ ಸಿಮರ್​ಜೀತ್ ಸಿಂಗ್ (0) ವಿಕೆಟ್ ಉರುಳಿಸಿದರು. ಈ ಮೂಲಕ 4 ಓವರ್​ಗಳಲ್ಲಿ ಕೇವಲ 17 ರನ್ ನೀಡಿ 4 ವಿಕೆಟ್ ಪಡೆದರು.

4 / 6
ಇದು ಐಪಿಎಲ್​ನಲ್ಲಿ ಮೊಹಮ್ಮದ್ ಸಿರಾಜ್ ಅವರ ಸರ್ವಶ್ರೇಷ್ಠ ಬೌಲಿಂಗ್ ಪ್ರದರ್ಶನ ಎಂಬುದು ವಿಶೇಷ. ಇದಕ್ಕೂ ಮುನ್ನ 2023 ರಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 4 ಓವರ್​ಗಳಲ್ಲಿ 21 ರನ್ ನೀಡಿ 4 ವಿಕೆಟ್ ಕಬಳಿಸಿರುವುದು ಶ್ರೇಷ್ಠ ಸಾಧನೆಯಾಗಿತ್ತು. ಆದರೆ ಈ ಬಾರಿ ಅದ್ಭುತ ಲಯದಲ್ಲಿರುವ ಸಿರಾಜ್ ಅತೀ ಕಡಿಮೆ ರನ್ ನೀಡಿ ನಾಲ್ಕು ವಿಕೆಟ್ ಉರುಳಿಸಿ ಮಿಂಚಿದ್ದಾರೆ.

5 / 6
ಈ ನಾಲ್ಕು ವಿಕೆಟ್​ಗಳೊಂದಿಗೆ ಮೊಹಮ್ಮದ್ ಸಿರಾಜ್ ಐಪಿಎಲ್​ನಲ್ಲಿ 100 ವಿಕೆಟ್​ಗಳ ಸಾಧನೆ ಮಾಡಿದ್ದಾರೆ. ಅಲ್ಲದೆ ಈ ಬಾರಿಯ ಐಪಿಎಲ್​ನಲ್ಲಿ 4 ಪಂದ್ಯಗಳ ಮೂಲಕ 50 ಕ್ಕೂ ಹೆಚ್ಚು ಡಾಟ್ ಬಾಲ್ ಎಸೆದ ಏಕೈಕ ಬೌಲರ್ ಎನಿಸಿಕೊಂಡಿದ್ದಾರೆ. ಈವರೆಗೆ 16 ಓವರ್​ಗಳನ್ನು ಎಸೆದಿರುವ ಸಿರಾಜ್ ಒಟ್ಟು 53 ಡಾಟ್ ಬಾಲ್ ಮಾಡಿದ್ದಾರೆ.

6 / 6
ಅಲ್ಲದೆ ಕಳೆದ ನಾಲ್ಕು ಪಂದ್ಯಗಳಲ್ಲಿ ಕೇವಲ 124 ರನ್ ಮಾತ್ರ ಬಿಟ್ಟು ಕೊಡುವ ಮೂಲಕ ಒಟ್ಟು 9 ವಿಕೆಟ್​ಗಳನ್ನು ಸಹ ಕಬಳಿಸಿದ್ದಾರೆ. ಈ ಮೂಲಕ ಗುಜರಾತ್ ಟೈಟಾನ್ಸ್ ತಂಡದ ಗೆಲುವಿನಲ್ಲಿ ಮೊಹಮ್ಮದ್ ಸಿರಾಜ್ ತನ್ನ ವೇಗಾಸ್ತ್ರದೊಂದಿಗೆ ಕೊಡುಗೆ ನೀಡುತ್ತಿದ್ದಾರೆ. ಅದರಲ್ಲೂ ಕಳೆದ ಎರಡು ಪಂದ್ಯಗಳಲ್ಲಿ ಗುಜರಾತ್ ಟೈಟಾನ್ಸ್ ತಂಡದ ಗೆಲುವಿನ ರೂವಾರಿಯಾಗಿ ಹೊರಹೊಮ್ಮಿರುವ ಸಿರಾಜ್ ಬ್ಯಾಕ್ ಟು ಬ್ಯಾಕ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿರುವುದು ವಿಶೇಷ.

Published On - 7:42 am, Mon, 7 April 25