- Kannada News Photo gallery Cricket photos Mohammed Siraj Completes 150 Plus Overs in Back to Back Test Series
150 ಓವರ್ಗಳಲ್ಲಿ ‘ಹ್ಯಾಟ್ರಿಕ್’ ಬರೆದ ಮೊಹಮ್ಮದ್ ಸಿರಾಜ್
Mohammed Siraj: ಟೀಮ್ ಇಂಡಿಯಾ ಪರ ಮೊಹಮ್ಮದ್ ಸಿರಾಜ್ ಸತತ 10 ಟೆಸ್ಟ್ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ. ಅಂದರೆ ಬಾರ್ಡರ್-ಗವಾಸ್ಕರ್ ಸರಣಿಯ ಎಲ್ಲಾ ಮ್ಯಾಚ್ಗಳನ್ನೂ ಆಡಿದ್ದ ಸಿರಾಜ್ ಇದೀಗ ಅ್ಯಂಡರ್ಸನ್-ತೆಂಡೂಲ್ಕರ್ ಸರಣಿಯಲ್ಲೂ 5 ಪಂದ್ಯಗಳಲ್ಲೂ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಪ್ರಸ್ತುತ ಸರಣಿಯ ಎಲ್ಲಾ ಪಂದ್ಯವಾಡಿದ ಏಕೈಕ ವೇಗಿ ಎನಿಸಿಕೊಂಡಿದ್ದಾರೆ.
Updated on: Aug 02, 2025 | 10:25 AM

ಈ ಬಾರಿಯ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ 5 ಪಂದ್ಯಗಳಲ್ಲೂ ಕಣಕ್ಕಿಳಿದ ಏಕೈಕ ವೇಗಿ ಮೊಹಮ್ಮದ್ ಸಿರಾಜ್. ಈ ಐದು ಮ್ಯಾಚ್ಗಳ ಮೂಲಕ ಸಿರಾಜ್ 150 ಕ್ಕಿಂತ ಹೆಚ್ಚಿನ ಓವರ್ಗಳನ್ನು ಎಸೆದಿದ್ದಾರೆ. ಈ ಮೂಲಕ ತಮ್ಮ ಕೆರಿಯರ್ನಲ್ಲಿ ಮೂರನೇ ಬಾರಿ ಸರಣಿವೊಂದರಲ್ಲಿ 150 ಓವರ್ಗಳ ಸಾಧನೆ ಮಾಡಿದ್ದಾರೆ.

ಇದಕ್ಕೂ ಮುನ್ನ ಮೊಹಮ್ಮದ್ ಸಿರಾಜ್ 2021 ರಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ 153.2 ಓವರ್ಗಳನ್ನು ಬೌಲಿಂಗ್ ಮಾಡಿದ್ದರು. ಇದಾದ ಬಳಿಕ 2024-25 ರಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 5 ಪಂದ್ಯಗಳಲ್ಲಿ ಕಣಕ್ಕಿಳಿಯುವ ಮೂಲಕ ಒಟ್ಟು 157.1 ಓವರ್ಗಳನ್ನು ಎಸೆದಿದ್ದರು. ಇದರ ಬೆನ್ನಲ್ಲೇ ಇದೀಗ ಮತ್ತೊಮ್ಮೆ 150 ಓವರ್ಗಳ ಗಡಿದಾಟಿದ್ದಾರೆ.

ಪ್ರಸ್ತುತ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಸರಣಿಯ 5 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಮೊಹಮ್ಮದ್ ಸಿರಾಜ್ ಈವರೆಗೆ 155.2 ಓವರ್ಗಳನ್ನು ಎಸೆದಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಸತತ ಎರಡು ಟೆಸ್ಟ್ ಸರಣಿಗಳಲ್ಲಿ 150 ಓವರ್ಗಳನ್ನು ಎಸೆದ ವಿಶೇಷ ಸಾಧನೆ ಮಾಡಿದ್ದಾರೆ. ಇನ್ನು ದ್ವಿತೀಯ ಇನಿಂಗ್ಸ್ನಲ್ಲೂ ಸಿರಾಜ್ ಬೌಲಿಂಗ್ ಮಾಡಬೇಕಿದ್ದು, ಹೀಗಾಗಿ ಈ ಬಾರಿ ಅವರ ಓವರ್ಗಳ ಸಂಖ್ಯೆ 160 ದಾಟುವುದು ಖಚಿತ.

ಐದನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ 16.2 ಓವರ್ಗಳನ್ನು ಎಸೆದ ಮೊಹಮ್ಮದ್ ಸಿರಾಜ್ ಒಟ್ಟು 82 ರನ್ ನೀಡಿ 4 ವಿಕೆಟ್ ಕಬಳಿಸಿ ಮಿಂಚಿದ್ದರು. ಸಿರಾಜ್ ಅವರ ಭರ್ಜರಿ ಬೌಲಿಂಗ್ನಿಂದಾಗಿ ಇಂಗ್ಲೆಂಡ್ ತಂಡವು ಮೊದಲ ಇನಿಂಗ್ಸ್ನಲ್ಲಿ 247 ರನ್ಗಳಿಸಿ ಆಲೌಟ್ ಆಯಿತು. ಅಲ್ಲದೆ 4 ನಾಲ್ಕು ವಿಕೆಟ್ಗಳೊಂದಿಗೆ ಸಿರಾಜ್ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 200 ವಿಕೆಟ್ಗಳನ್ನು ಪೂರೈಸಿದ್ದಾರೆ.

ಟೀಮ್ ಇಂಡಿಯಾ ಪರ ಈವರೆಗೆ 75 ಟೆಸ್ಟ್ ಇನಿಂಗ್ಸ್ಗಳಲ್ಲಿ ಬೌಲಿಂಗ್ ಮಾಡಿರುವ ಮೊಹಮ್ಮದ್ ಸಿರಾಜ್ ಒಟ್ಟು 6238 ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ 118 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಷ್ಟೇ ಅಲ್ಲದೆ ಪ್ರಸ್ತುತ ಇಂಗ್ಲೆಂಡ್ ಸರಣಿಯಲ್ಲಿ 18 ವಿಕೆಟ್ ಉರುಳಿಸಿ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More




