ಟೀಮ್ ಇಂಡಿಯಾದಿಂದ ಸ್ಟಾರ್ ಆಟಗಾರ ಔಟ್: ಕನ್ನಡಿಗ ಎಂಟ್ರಿ!

Updated on: Jun 10, 2026 | 7:29 AM

India Schedule 2026: ಅಫ್ಘಾನಿಸ್ತಾನ್ ವಿರುದ್ಧದ ಏಕದಿನ ಸರಣಿ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ 7 ಟಿ20 ಪಂದ್ಯಗಳನ್ನಾಡಲಿದೆ. ಮೊದಲಿಗೆ ಐರ್ಲೆಂಡ್ ವಿರುದ್ಧ 2 ಮ್ಯಾಚ್​ಗಳ ಟಿ20 ಸರಣಿ ನಡೆಯಲಿದ್ದು, ಇದಾದ ಬಳಿಕ ಇಂಗ್ಲೆಂಡ್ ವಿರುದ್ಧ 5 ಟಿ20 ಪಂದ್ಯಗಳನ್ನಾಡಿದೆ. ಈ ಎರಡು ಸರಣಿಗಳಿಂದ ಟೀಮ್ ಇಂಡಿಯಾದ ಪ್ರಮುಖ ವೇಗಿ ಹೊರಗುಳಿದಿದ್ದಾರೆ.

1 / 5
ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗಳಿಂದ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್​​ (Mohammed Siraj) ಹೊರುಗಳಿಯಲಿದ್ದಾರೆ. ಇದಕ್ಕೂ ಮುನ್ನ ಸರಣಿಗಳ ಒಟ್ಟು 7  ಪಂದ್ಯಗಳಿಗಾಗಿ ಸಿರಾಜ್ ಅವರನ್ನು ಪ್ರಮುಖ ವೇಗಿಯಾಗಿ ಆಯ್ಕೆ ಮಾಡಲಾಗಿತ್ತು. (PC: BCCI)

2 / 5
ಬಿಸಿಸಿಐ ವೈದ್ಯಕೀಯ ತಂಡ ಮತ್ತು ಭಾರತೀಯ ಕ್ರಿಕೆಟ್ ತಂಡದ ಮ್ಯಾನೇಜ್‌ಮೆಂಟ್ ನಡುವೆ ನಡೆದ ಸುದೀರ್ಘ ಚರ್ಚೆಯ ಬಳಿಕ ಸಿರಾಜ್ ಅವರಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಈ ವಿಶ್ರಾಂತಿ ಸಲಹೆ ನೀಡಲಾಗಿದೆ. ಹೀಗಾಗಿ ಮುಂಬರುವ ಟಿ20 ಸರಣಿಗಳಲ್ಲಿ ಸಿರಾಜ್ ಕಾಣಿಸಿಕೊಳ್ಳುವುದಿಲ್ಲ. (PC: BCCI)

3 / 5
ವಿಶ್ರಾಂತಿಗೆ ಕಾರಣವೇನು? ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಪ್ರಕಟಿಸಿರುವಂತೆ, ಮುಂಬರುವ ದೀರ್ಘ ಹಾಗೂ ಬಿಡುವಿಲ್ಲದ ಅಂತರರಾಷ್ಟ್ರೀಯ ಕ್ರಿಕೆಟ್ ಸರಣಿಗಳನ್ನು ಗಮನದಲ್ಲಿಟ್ಟುಕೊಂಡು ಸಿರಾಜ್ ಅವರ 'ವರ್ಕ್‌ಲೋಡ್ ಮ್ಯಾನೇಜ್‌ಮೆಂಟ್' ಯೋಜನೆ ಅಡಿಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. (PC: BCCI)

4 / 5
ಇನ್ನು ಮೊಹಮ್ಮದ್ ಸಿರಾಜ್ ಸ್ಥಾನಕ್ಕೆ ಕರ್ನಾಟಕದ ವೇಗಿ ಪ್ರಸಿದ್ಧ ಕೃಷ್ಣ ಆಯ್ಕೆಯಾಗಿದ್ದಾರೆ. ಪ್ರಸಿದ್ಧ್ ಕೃಷ್ಣ ಕೊನೆಯ ಬಾರಿ ಟೀಮ್ ಇಂಡಿಯಾ ಪರ ಟಿ20 ಪಂದ್ಯವಾಡಿದ್ದು 2023 ರಲ್ಲಿ. ಇದೀಗ ಮೂರು ವರ್ಷಗಳ ಬಳಿಕ ಮತ್ತೊಮ್ಮೆ ಭಾರತ ಟಿ20 ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. (PC: BCCI)

5 / 5
ಭಾರತ ಟಿ20 ತಂಡ: ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪನಾಯಕ), ರವಿ ಬಿಷ್ಣೋಯ್, ಅಭಿಷೇಕ್ ಶರ್ಮಾ, ನಿತೀಶ್ ಕುಮಾರ್ ರೆಡ್ಡಿ, ಪ್ರಸಿದ್ಧ್ ಕೃಷ್ಣ, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಶಿವಂ ದುಬೆ, ವರುಣ್ ಚಕ್ರವರ್ತಿ, ಪ್ರಿನ್ಸ್ ಯಾದವ್, ವೈಭವ್ ಸೂರ್ಯವಂಶಿ. (PC: BCCI)

Follow Us