16 ಎಸೆತಗಳಲ್ಲಿ 5 ವಿಕೆಟ್: ವಿಶ್ವ ದಾಖಲೆ ಬರೆದ ಮೊಹಮ್ಮದ್ ಸಿರಾಜ್

Mohammed Siraj Records: 4ನೇ ಓವರ್​ನ ಮೊದಲ ಎಸೆತದಲ್ಲಿ ಪಾತುಮ್ ನಿಸ್ಸಂಕಾ (2) ವಿಕೆಟ್ ಪಡೆದ ಸಿರಾಜ್, ಮೂರನೇ ಎಸೆತದಲ್ಲಿ ಸದೀರ ಸಮರವಿಕ್ರಮ ಎಲ್​ಬಿಡಬ್ಲ್ಯೂ ಬಲೆಗೆ ಕೆಡವಿದರು. ಇನ್ನು ನಾಲ್ಕನೇ ಎಸೆತದಲ್ಲಿ ಚರಿತ್ ಅಸಲಂಕಾ ಅವರನ್ನು ಔಟ್ ಮಾಡಿದರು. ಆರನೇ ಎಸೆತದಲ್ಲಿ ಧನಜಂಯ ಡಿಸಿಲ್ವಾ ಕೀಪರ್ ಕ್ಯಾಚ್ ಔಟ್ ನೀಡಿ ನಿರ್ಗಮಿಸಿದರು.

TV9 Web
| Updated By: ಝಾಹಿರ್ ಯೂಸುಫ್

Updated on:Sep 17, 2023 | 10:49 PM

ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆದ ಏಷ್ಯಾಕಪ್​ನ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

1 / 9
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡಕ್ಕೆ ಮೊದಲ ಓವರ್​ನಲ್ಲೇ ಜಸ್​ಪ್ರೀತ್ ಬುಮ್ರಾ ಆರಂಭಿಕ ಆಘಾತ ನೀಡಿದ್ದರು. ಇದಾದ ಬಳಿಕ ಶುರುವಾಗಿದ್ದೇ ಮಿಯಾ ಮ್ಯಾಜಿಕ್.

2 / 9
4ನೇ ಓವರ್​ನ ಮೊದಲ ಎಸೆತದಲ್ಲಿ  ಪಾತುಮ್ ನಿಸ್ಸಂಕಾ ಅವರ ವಿಕೆಟ್ ಪಡೆದ ಸಿರಾಜ್, ಮೂರನೇ ಎಸೆತದಲ್ಲಿ ಸದೀರ ಸಮರವಿಕ್ರಮ ಅವರನ್ನು ಎಲ್​ಬಿಡಬ್ಲ್ಯೂ ಬಲೆಗೆ ಕೆಡವಿದರು. ಇನ್ನು ನಾಲ್ಕನೇ ಎಸೆತದಲ್ಲಿ ಚರಿತ್ ಅಸಲಂಕಾ ಅವರನ್ನು ಔಟ್ ಮಾಡಿದರು. ಆರನೇ ಎಸೆತದಲ್ಲಿ ಧನಜಂಯ ಡಿಸಿಲ್ವಾ ವಿಕೆಟ್ ಕೀಪರ್​ಗೆ ಕ್ಯಾಚ್ ನೀಡಿ ನಿರ್ಗಮಿಸಿದರು.

3 / 9
ಒಂದೇ ಓವರ್​ನಲ್ಲಿ 4 ವಿಕೆಟ್ ಕಬಳಿಸಿದ ಸಿರಾಜ್, 6ನೇ ಓವರ್​ನ 4ನೇ ಎಸೆತದಲ್ಲಿ ಶ್ರೀಲಂಕಾ ತಂಡದ ನಾಯಕ ದಸುನ್ ಶಾನಕ ಅವರನ್ನು ಕ್ಲೀನ್ ಬೌಲ್ಡ್ ಮಾಡಿದರು. ಇದರೊಂದಿಗೆ ಕೇವಲ 4 ರನ್ ನೀಡಿ 5 ವಿಕೆಟ್ ಕಬಳಿಸಿದ ವಿಶೇಷ ಸಾಧನೆ ಮಾಡಿದರು.

4 / 9
ಅಷ್ಟೇ ಅಲ್ಲದೆ ಅತೀ ಕಡಿಮೆ ಎಸೆತಗಳಲ್ಲಿ 5 ವಿಕೆಟ್ ಕಬಳಿಸಿದ ವಿಶ್ವದ 2ನೇ ಬೌಲರ್ ಎಂಬ ವಿಶ್ವ ದಾಖಲೆಯನ್ನು ಕೂಡ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಚಾಮಿಂಡ ವಾಸ್ ಈ ಸಾಧನೆ ಮಾಡಿದ್ದರು.

5 / 9
2003 ರಲ್ಲಿ ಶ್ರೀಲಂಕಾದ ಮಾಜಿ ವೇಗಿ ಚಾಮಿಂಡ ವಾಸ್ ಬಾಂಗ್ಲಾದೇಶ್ ವಿರುದ್ಧ ಕೇವಲ 16 ಎಸೆತಗಳಲ್ಲಿ 5 ವಿಕೆಟ್ ಕಬಳಿಸಿದ್ದರು. ಇದೀಗ ಈ ವಿಶ್ವ ದಾಖಲೆಯನ್ನು ಸಿರಾಜ್ ಸರಿಗಟ್ಟಿದ್ದಾರೆ.

6 / 9
ಮೊಹಮ್ಮದ್ ಸಿರಾಜ್ ಕೂಡ ಕೇವಲ 16 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಅತ್ಯಂತ ವೇಗವಾಗಿ 5 ವಿಕೆಟ್ ಕಬಳಿಸಿದ ಬೌಲರ್ ಎನಿಸಿಕೊಂಡಿದ್ದಾರೆ.

7 / 9
ಅಲ್ಲದೆ ಚಾಮಿಂಡ ವಾಸ್ ಬಳಿಕ ಅತೀ ಕಡಿಮೆ ಎಸೆತಗಳಲ್ಲಿ 5 ವಿಕೆಟ್ ಕಬಳಿಸಿದ ವಿಶ್ವದ 2ನೇ ಬೌಲರ್ ಎಂಬ ದಾಖಲೆಯನ್ನೂ ಕೂಡ ಮೊಹಮ್ಮದ್ ಸಿರಾಜ್ ತಮ್ಮದಾಗಿಸಿಕೊಂಡಿದ್ದಾರೆ.

8 / 9
ಈ ಪಂದ್ಯದಲ್ಲಿ 7 ಓವರ್​ಗಳನ್ನು ಎಸೆದ ಮೊಹಮ್ಮದ್ ಸಿರಾಜ್ ಕೇವಲ 21 ರನ್ ನೀಡಿ 6 ವಿಕೆಟ್ ಕಬಳಿಸಿದರು. ಸಿರಾಜ್ ಅವರ ಈ ಕರಾರುವಾಕ್ ದಾಳಿಗೆ ತತ್ತರಿಸಿದ ಶ್ರೀಲಂಕಾ ತಂಡವು ಕೇವಲ 50 ರನ್​ಗಳಿಗೆ ಆಲೌಟ್ ಆಯಿತು.

9 / 9

Published On - 5:09 pm, Sun, 17 September 23

Follow us
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ

ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು

14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ

ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​

ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್

ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು

ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ

ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ

ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು