- Kannada News Photo gallery Cricket photos Mohammed Siraj in India Squad As A Non Travelling substitutes
ಭಾರತ ತಂಡಕ್ಕೆ ಮೊಹಮ್ಮದ್ ಸಿರಾಜ್ ಮತ್ತೆ ಆಯ್ಕೆ… ಆದರೆ
Champions Trophy 2025: ಚಾಂಪಿಯನ್ಸ್ ಟ್ರೋಫಿಗಾಗಿ ಬಿಸಿಸಿಐ ಒಟ್ಟು 18 ಸದಸ್ಯರ ಭಾರತ ತಂಡವನ್ನು ಹೆಸರಿಸಿದೆ. ಈ ಹದಿನೆಂಟು ಸದಸ್ಯರಲ್ಲಿ 15 ಮಂದಿ ಚಾಂಪಿಯನ್ಸ್ ಟ್ರೋಫಿಗಾಗಿ ತೆರಳಲಿದ್ದು, ಉಳಿದ ಮೂವರು ಆಟಗಾರರು ಪ್ರಯಾಣೇತರ ಬದಲಿ ಆಟಗಾರರ ಪಟ್ಟಿಯಲ್ಲಿರಲಿದ್ದಾರೆ. ಅಂದರೆ ಮೀಸಲು ಆಟಗಾರರಾಗಿ ಭಾರತದಲ್ಲೇ ಉಳಿದುಕೊಳ್ಳಲಿದ್ದಾರೆ.
Updated on: Feb 12, 2025 | 9:04 AM

ಚಾಂಪಿಯನ್ಸ್ ಟ್ರೋಫಿಗಾಗಿ ಪರಿಷ್ಕೃತ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ಹಿಂದೆ ಪ್ರಕಟಿಸಲಾಗಿದ್ದ 15 ಸದಸ್ಯರ ಈ ತಂಡದಿಂದ ಇಬ್ಬರನ್ನು ಕೈ ಬಿಡಲಾಗಿದೆ. ಇಲ್ಲಿ ಜಸ್ಪ್ರೀತ್ ಬುಮ್ರಾ ಅವರನ್ನು ಕೈ ಬಿಡಲು ಮುಖ್ಯ ಕಾರಣ ಫಿಟ್ನೆಸ್ ಸಮಸ್ಯೆ. ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಅವರು ಟೂರ್ನಿಯಿಂದ ಹೊರಗುಳಿದಿದ್ದಾರೆ.

ಹೀಗಾಗಿ ಜಸ್ಪ್ರೀತ್ ಬುಮ್ರಾ ಬದಲಿಗೆ ಹರ್ಷಿತ್ ರಾಣಾ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಹಾಗೆಯೇ 15 ಸದಸ್ಯರ ಬಳಗದಲ್ಲಿದ್ದ ಯುವ ಎಡಗೈ ದಾಂಡಿಗ ಯಶಸ್ವಿ ಜೈಸ್ವಾಲ್ ಅವರನ್ನು ಈ ಬಾರಿ ತಂಡದಿಂದ ಕೈ ಬಿಟ್ಟಿದ್ದು, ಅವರ ಬದಲಿಗೆ ವರುಣ್ ಚಕ್ರವರ್ತಿಗೆ ಸ್ಥಾನ ಕಲ್ಪಿಸಲಾಗಿದೆ. ಈ ಬದಲಾವಣೆಯಲ್ಲದೇ ಮೂವರನ್ನು ಮೀಸಲು ಆಟಗಾರರಾಗಿ ಆಯ್ಕೆ ಮಾಡಲಾಗಿದೆ.

ಹೀಗೆ ಮೀಸಲು ಆಟಗಾರರ ಪಟ್ಟಿಯಲ್ಲಿ ಮೊಹಮ್ಮದ್ ಸಿರಾಜ್ ಅವರು ಕಾಣಿಸಿಕೊಂಡಿದ್ದಾರೆ. ಕಳೆದ ಕೆಲ ವರ್ಷಗಳಿಂದ ಭಾರತ ತಂಡದ ಖಾಯಂ ಸದಸ್ಯರಾಗಿದ್ದ ಸಿರಾಜ್ ಅವರನ್ನು ಈ ಬಾರಿಯ ಚಾಂಪಿಯನ್ಸ್ ಟ್ರೋಫಿಗಾಗಿ ಆಯ್ಕೆ ಮಾಡಿರಲಿಲ್ಲ. ಇದೀಗ ಪರಿಷ್ಕೃತ ತಂಡದ ಪ್ರಕಟಣೆ ವೇಳೆ ಅವರನ್ನು ಮೀಸಲು ಆಟಗಾರರ ಪಟ್ಟಿಗೆ ಸೇರಿಸಿಕೊಳ್ಳಲಾಗಿರುವುದು ವಿಶೇಷ.

ಇನ್ನು ಮೊಹಮ್ಮದ್ ಸಿರಾಜ್ ಅವರೊಂದಿಗೆ ಯಶಸ್ವಿ ಜೈಸ್ವಾಲ್ ಹಾಗೂ ಶಿವಂ ದುಬೆ ಅವರನ್ನು ಸಹ ಮೀಸಲು ಆಟಗಾರರ ಪಟ್ಟಿಗೆ ಸೇರ್ಪಡೆಗೊಳಿಸಲಾಗಿದೆ. ಇದಾಗ್ಯೂ ಈ ಮೂವರು ಆಟಗಾರರು ಚಾಂಪಿಯನ್ಸ್ ಟ್ರೋಫಿಗಾಗಿ ಟೀಮ್ ಇಂಡಿಯಾ ಜೊತೆ ತೆರಳುವುದಿಲ್ಲ. ಬದಲಾಗಿ ಭಾರತದಲ್ಲೇ ಉಳಿದುಕೊಳ್ಳಲಿದ್ದಾರೆ.

ಬಿಸಿಸಿಐ ನೀಡಿರುವ ಮಾಹಿತಿ ಪ್ರಕಾರ, ಮೊಹಮ್ಮದ್ ಸಿರಾಜ್, ಯಶಸ್ವಿ ಜೈಸ್ವಾಲ್ ಹಾಗೂ ಶಿವಂ ದುಬೆ ಅವರನ್ನು ಪ್ರಯಾಣೇತರ ಬದಲಿ ಆಟಗಾರರಾಗಿ ಆಯ್ಕೆ ಮಾಡಲಾಗಿದೆ. ಹೀಗಾಗಿ ಟೀಮ್ ಇಂಡಿಯಾದ 15 ಸದಸ್ಯರಲ್ಲಿ ಯಾರಾದರೂ ಗಾಯಗೊಂಡರೆ, ಬದಲಿ ಆಟಗಾರರಾಗಿ ಇವರು ದುಬೈಗೆ ಪ್ರಯಾಣಿಸಲಿದ್ದಾರೆ. ಅದರಂತೆ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ ಈ ಕೆಳಗಿನಂತಿದೆ...

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರಿಷಭ್ ಪಂತ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ. | ಮೀಸಲು ಆಟಗಾರರು:- ಮೊಹಮ್ಮದ್ ಸಿರಾಜ್, ಯಶಸ್ವಿ ಜೈಸ್ವಾಲ್, ಶಿವಂ ದುಬೆ.
























