AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆ ಕ್ಷಣದ ಬದಲಾವಣೆ… ಭಾರತ ತಂಡಕ್ಕೆ ವೇಗದ ಬೌಲರ್ ಎಂಟ್ರಿ

Team india: ಟೀಮ್ ಇಂಡಿಯಾ ಆಟಗಾರ ಹರ್ಷಿತ್ ರಾಣಾ ಸೌತ್ ಆಫ್ರಿಕಾ ವಿರುದ್ಧದ ಅಭ್ಯಾಸ ಪಂದ್ಯದ ವೇಳೆ ಮೊಣಕಾಲಿನ ನೋವಿನ ಸಮಸ್ಯೆಗೆ ಒಳಗಾಗಿದ್ದರು. ಈ ನೋವಿನ ಸಮಸ್ಯೆಯ ಕಾರಣ ಇದೀಗ ಅವರು ಟಿ20 ವಿಶ್ವಕಪ್​ನಿಂದ ಹೊರಗುಳಿದಿದ್ದಾರೆ. ಅವರ ಬದಲಿಗೆ ಭಾರತ ತಂಡಕ್ಕೆ ಮೊಹಮ್ಮದ್ ಸಿರಾಜ್ ಆಯ್ಕೆಯಾಗಿದ್ದಾರೆ.

ಝಾಹಿರ್ ಯೂಸುಫ್
|

Updated on: Feb 07, 2026 | 9:04 AM

Share
T20 World Cup 2026: ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆಯಾಗಲಿರುವುದು ಖಚಿತವಾಗಿದೆ. ಭಾರತ ತಂಡದಲ್ಲಿದ್ದ ಆಲ್​ರೌಂಡರ್ ಹರ್ಷಿತ್ ರಾಣಾ ಗಾಯಗೊಂಡು ಟಿ20 ವಿಶ್ವಕಪ್​ನಿಂದ ಹೊರಗುಳಿದಿದ್ದಾರೆ. ಇದೀಗ ಅವರ ಸ್ಥಾನಕ್ಕೆ ಮತ್ತೋರ್ವ ವೇಗಿ ಆಯ್ಕೆಯಾಗಿದ್ದಾರೆ.

1 / 5
ಭಾರತ ತಂಡದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಇಂದು (ಫೆ.7) ಮುಂಬೈನಲ್ಲಿ ಭಾರತ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಇದಾಗ್ಯೂ ಅವರು ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರಾ ಎಂಬುದರ ಬಗ್ಗೆ ಯಾವುದೇ ಖಚಿತತೆ ಇಲ್ಲ.

2 / 5
ಏಕೆಂದರೆ ಭಾರತ ತಂಡವು ತನ್ನ ಮೊದಲ ಪಂದ್ಯದಲ್ಲಿ ಅಮೆರಿಕ ತಂಡವನ್ನು ಎದುರಿಸಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಇಂದು ರಾತ್ರಿ 7 ಗಂಟೆಗೆ ಶುರುವಾಗಲಿದೆ. ಈ ಮ್ಯಾಚ್​ಗೂ  ಮುನ್ನ ಮೊಹಮ್ಮದ್ ಸಿರಾಜ್ ಭಾರತ ತಂಡವನ್ನು ಕೂಡಿಕೊಳ್ಳಲಿದ್ದಾರೆ.

3 / 5
ಆದರೆ ಅತ್ತ ಟೀಮ್ ಇಂಡಿಯಾದಲ್ಲಿ ವೇಗಿಗಳಾಗಿ ಜಸ್​ಪ್ರೀತ್ ಬುಮ್ರಾ ಹಾಗೂ ಅರ್ಷದೀಪ್ ಸಿಂಗ್ ಇದ್ದು, ಇವರೊಂದಿಗೆ ಹಾರ್ದಿಕ್ ಪಾಂಡ್ಯ ಹಾಗೂ ಶಿವಂ ದುಬೆ ಕೂಡ ಕೈ ಜೋಡಿಸಲಿದ್ದಾರೆ. ಹೀಗಾಗಿ ಇಂದಿನ ಮ್ಯಾಚ್​ನಲ್ಲಿ ಮೊಹಮ್ಮದ್ ಸಿರಾಜ್ ಕಾಣಿಸಿಕೊಳ್ಳುವ ಸಾಧ್ಯತೆ ಇಲ್ಲ ಎನ್ನಬಹುದು. 

4 / 5
ಟಿ20 ವಿಶ್ವಕಪ್​ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್, ಮೊಹಮ್ಮದ್ ಸಿರಾಜ್.

5 / 5