ಕೊನೆ ಕ್ಷಣದ ಬದಲಾವಣೆ… ಭಾರತ ತಂಡಕ್ಕೆ ವೇಗದ ಬೌಲರ್ ಎಂಟ್ರಿ

Updated on: Feb 07, 2026 | 9:45 AM

Team india: ಟೀಮ್ ಇಂಡಿಯಾ ಆಟಗಾರ ಹರ್ಷಿತ್ ರಾಣಾ ಸೌತ್ ಆಫ್ರಿಕಾ ವಿರುದ್ಧದ ಅಭ್ಯಾಸ ಪಂದ್ಯದ ವೇಳೆ ಮೊಣಕಾಲಿನ ನೋವಿನ ಸಮಸ್ಯೆಗೆ ಒಳಗಾಗಿದ್ದರು. ಈ ನೋವಿನ ಸಮಸ್ಯೆಯ ಕಾರಣ ಇದೀಗ ಅವರು ಟಿ20 ವಿಶ್ವಕಪ್​ನಿಂದ ಹೊರಗುಳಿದಿದ್ದಾರೆ. ಅವರ ಬದಲಿಗೆ ಭಾರತ ತಂಡಕ್ಕೆ ಮೊಹಮ್ಮದ್ ಸಿರಾಜ್ ಆಯ್ಕೆಯಾಗಿದ್ದಾರೆ.

1 / 5
T20 World Cup 2026: ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆಯಾಗಿರುವುದು ಖಚಿತವಾಗಿದೆ. ಭಾರತ ತಂಡದಲ್ಲಿದ್ದ ಆಲ್​ರೌಂಡರ್ ಹರ್ಷಿತ್ ರಾಣಾ ಗಾಯಗೊಂಡು ಟಿ20 ವಿಶ್ವಕಪ್​ನಿಂದ ಹೊರಗುಳಿದಿದ್ದಾರೆ. ಇದೀಗ ಅವರ ಸ್ಥಾನಕ್ಕೆ ಮತ್ತೋರ್ವ ವೇಗಿ ಆಯ್ಕೆಯಾಗಿದ್ದಾರೆ.

T20 World Cup 2026: ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆಯಾಗಿರುವುದು ಖಚಿತವಾಗಿದೆ. ಭಾರತ ತಂಡದಲ್ಲಿದ್ದ ಆಲ್​ರೌಂಡರ್ ಹರ್ಷಿತ್ ರಾಣಾ ಗಾಯಗೊಂಡು ಟಿ20 ವಿಶ್ವಕಪ್​ನಿಂದ ಹೊರಗುಳಿದಿದ್ದಾರೆ. ಇದೀಗ ಅವರ ಸ್ಥಾನಕ್ಕೆ ಮತ್ತೋರ್ವ ವೇಗಿ ಆಯ್ಕೆಯಾಗಿದ್ದಾರೆ.

2 / 5

ಭಾರತ ತಂಡದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಇಂದು (ಫೆ.7) ಮುಂಬೈನಲ್ಲಿ ಭಾರತ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಇದಾಗ್ಯೂ ಅವರು ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರಾ ಎಂಬುದರ ಬಗ್ಗೆ ಯಾವುದೇ ಖಚಿತತೆ ಇಲ್ಲ.

3 / 5

ಏಕೆಂದರೆ ಭಾರತ ತಂಡವು ತನ್ನ ಮೊದಲ ಪಂದ್ಯದಲ್ಲಿ ಅಮೆರಿಕ ತಂಡವನ್ನು ಎದುರಿಸಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಇಂದು ರಾತ್ರಿ 7 ಗಂಟೆಗೆ ಶುರುವಾಗಲಿದೆ. ಈ ಮ್ಯಾಚ್​ಗೂ  ಮುನ್ನ ಮೊಹಮ್ಮದ್ ಸಿರಾಜ್ ಭಾರತ ತಂಡವನ್ನು ಕೂಡಿಕೊಳ್ಳಲಿದ್ದಾರೆ.

4 / 5

ಆದರೆ ಅತ್ತ ಟೀಮ್ ಇಂಡಿಯಾದಲ್ಲಿ ವೇಗಿಗಳಾಗಿ ಜಸ್​ಪ್ರೀತ್ ಬುಮ್ರಾ ಹಾಗೂ ಅರ್ಷದೀಪ್ ಸಿಂಗ್ ಇದ್ದು, ಇವರೊಂದಿಗೆ ಹಾರ್ದಿಕ್ ಪಾಂಡ್ಯ ಹಾಗೂ ಶಿವಂ ದುಬೆ ಕೂಡ ಕೈ ಜೋಡಿಸಲಿದ್ದಾರೆ. ಹೀಗಾಗಿ ಇಂದಿನ ಮ್ಯಾಚ್​ನಲ್ಲಿ ಮೊಹಮ್ಮದ್ ಸಿರಾಜ್ ಕಾಣಿಸಿಕೊಳ್ಳುವ ಸಾಧ್ಯತೆ ಇಲ್ಲ ಎನ್ನಬಹುದು. ಹೀಗಾಗಿ ಉಳಿದ ಪಂದ್ಯಗಳಲ್ಲಿ ಮೂರನೇ ವೇಗಿಯಾಗಿ ಸಿರಾಜ್ ಕಣಕ್ಕಿಳಿಯಬಹುದು.

5 / 5

ಟಿ20 ವಿಶ್ವಕಪ್​ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್, ಮೊಹಮ್ಮದ್ ಸಿರಾಜ್.

Published On - 9:04 am, Sat, 7 February 26

ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Loading...
Unable to load recommendations.
Follow Us