AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್​​ಗೆ ನಿಷೇಧದ ಭೀತಿ..!

India vs Australia: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಎರಡನೇ ಪಂದ್ಯವು ಆಟಗಾರರ ಮಾತಿನ ಚಕಮಕಿಗೆ ಸಾಕ್ಷಿಯಾಗಿತ್ತು. ಅದರಲ್ಲೂ ಮೊಹಮ್ಮದ್ ಸಿರಾಜ್ ಹಾಗೂ ಟ್ರಾವಿಸ್ ಹೆಡ್ ಪರಸ್ಪರ ಕಿತ್ತಾಡಿಕೊಂಡಿದ್ದರು. ಇದೀಗ ಈ ಘಟನೆಗಳನ್ನು ಐಸಿಸಿ ಗಂಭೀರವಾಗಿ ಪರಿಗಣಿಸಿದೆ.

ಝಾಹಿರ್ ಯೂಸುಫ್
|

Updated on: Dec 09, 2024 | 1:06 PM

Share
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ದ್ವಿತೀಯ ಟೆಸ್ಟ್ ಪಂದ್ಯದ ವೇಳೆ ಅನುಚಿತವಾಗಿ ವರ್ತಿಸಿದ ಕಾರಣಕ್ಕಾಗಿ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ವಿರುದ್ಧ ಐಸಿಸಿ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ. ಅಡಿಲೇಡ್​ ಓವಲ್​ ಮೈದಾನದಲ್ಲಿ ನಡೆದ ಈ ಪಂದ್ಯದ ವೇಳೆ ಟ್ರಾವಿಸ್ ಹೆಡ್ ಅವರನ್ನು ಬೌಲ್ಡ್ ಮಾಡಿದ ಸಿರಾಜ್, ಪೆವಿಲಿಯನ್​ಗೆ ದಾಟುವಂತೆ ಕೈ ಸನ್ನೆ ಮಾಡಿದ್ದರು.

1 / 5
ಈ ಘಟನೆಯನ್ನು ಐಸಿಸಿ ಗಂಭೀರವಾಗಿ ಪರಿಗಣಿಸಿದ್ದು, ಹೀಗಾಗಿ ಮೊಹಮ್ಮದ್ ಸಿರಾಜ್ ಹಾಗೂ ಟ್ರಾವಿಸ್ ಹೆಡ್ ಮ್ಯಾಚ್ ರೆಫರಿಯ ವಿಚಾರಣೆಗೆ ಒಳಪಡಲಿದ್ದಾರೆ. ಇದಾದ ಬಳಿಕ ಮ್ಯಾಚ್ ರೆಫರಿ ಐಸಿಸಿ ನೀತಿ ಸಂಹಿತೆಯ ಉಲ್ಲಂಘನೆಯಡಿಯಲ್ಲಿ ಶಿಕ್ಷೆ ವಿಧಿಸಲಿದ್ದಾರೆ.

2 / 5
ಇತ್ತ ಮೊಹಮ್ಮದ್ ಸಿರಾಜ್ ಅವರ ವರ್ತನೆಯು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಹೀಗಾಗಿಯೇ ಟೀಮ್ ಇಂಡಿಯಾ ವೇಗಿಗೆ ನಿಷೇಧದ ಶಿಕ್ಷೆ ನೀಡಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಐಸಿಸಿ ನೀತಿ ಸಂಹಿತೆಯ ಗಂಭೀರ ಉಲ್ಲಂಘನೆ ಮಾಡಿದವರಿಗೆ ಕೆಲ ಪಂದ್ಯಗಳ ನಿಷೇಧ ಹೇರಲಾಗುತ್ತದೆ.

3 / 5
ದಿ ಟೆಲಿಗ್ರಾಫ್ ವರದಿಯ ಪ್ರಕಾರ, ಐಸಿಸಿ ಈ ವಿಷಯವನ್ನು  ಗಂಭೀರವಾಗಿ ಪರಿಗಣಿಸಿದರೂ, ಸಿರಾಜ್ ಅವರನ್ನು ಯಾವುದೇ ಪಂದ್ಯದಿಂದ ಅಮಾನತು ಮಾಡುವ ಸಾಧ್ಯತೆಯಿಲ್ಲ. ಏಕೆಂದರೆ ಐಸಿಸಿಯ ನೀತಿ ಸಂಹಿತೆಯ ಅಡಿಯಲ್ಲಿ ಇದನ್ನು ಸಣ್ಣ ತಪ್ಪು ಎಂದು ಪರಿಗಣಿಸುವ ಸಾಧ್ಯತೆಯಿದೆ. ಹೀಗಾಗಿ ಸಿರಾಜ್​​ಗೆ ದಂಡದ ಶಿಕ್ಷೆ ನೀಡಬಹುದು ಎಂದು ತಿಳಿಸಲಾಗಿದೆ.

4 / 5
ಅದರೆ ಮೊಹಮ್ಮದ್ ಸಿರಾಜ್ ಈ ಪಂದ್ಯದಲ್ಲಿ ಐಸಿಸಿ ನಿಯಮವನ್ನು ಉಲ್ಲಂಘಸಿರುವುದು ಒಮ್ಮೆ ಮಾತ್ರವಲ್ಲ. ಬದಲಾಗಿ ಮಾರ್ನಸ್ ಲಾಬುಶೇನ್ ಬ್ಯಾಟಿಂಗ್ ಮಾಡುತ್ತಿದ್ದ ವೇಳೆ ಕೋಪದಿಂದ ಅವರನ್ನು ಗುರಿಯಾಗಿಸಿ ಚೆಂಡೆಸೆದಿದ್ದರು. ಇದಾದ ಬಳಿಕ ಟ್ರಾವಿಸ್ ಹೆಡ್ ಜೊತೆ ಮಾತಿನ ಚಕಮಕಿ ನಡೆಸಿದ್ದಾರೆ. ಈ ಎರಡು ಘಟನೆಗಳು ಇಲ್ಲಿ ಪರಿಗಣನೆಗೆ ಬರುತ್ತದೆ. ಹಾಗಾಗಿ ಎರಡು ತಪ್ಪುಗಳನ್ನು ಮಾಡಿರುವ ಮೊಹಮ್ಮದ್ ಸಿರಾಜ್​​ಗೆ ಇದೀಗ ಬ್ಯಾನ್ ಭೀತಿ ಶುರುವಾಗಿದೆ.

5 / 5