ವಿಕೆಟ್ ಬೇಟೆಯಲ್ಲಿ ಹಿಂದೆ ಬಿದ್ದಿಲ್ಲ, ಆದರೂ ತಂಡದಲ್ಲಿ ಸ್ಥಾನವಿಲ್ಲ; ಸಿರಾಜ್‌ಗೆ ಅನ್ಯಾಯ

Updated on: Nov 04, 2026 | 9:51 PM

ಮೊಹಮ್ಮದ್ ಸಿರಾಜ್ 2023ರಲ್ಲಿ ಏಕದಿನ ಕ್ರಿಕೆಟ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದರೂ, 2023ರ ವಿಶ್ವಕಪ್ ಬಳಿಕ ಭಾರತ ತಂಡದಲ್ಲಿ ಅವರ ಅವಕಾಶಗಳು ಗಣನೀಯವಾಗಿ ಕಡಿಮೆಯಾಗಿವೆ. ಏಷ್ಯಾಕಪ್ ಹೀರೋ ಆಗಿದ್ದ ಸಿರಾಜ್‌ಗೆ 2025ರ ಚಾಂಪಿಯನ್ಸ್ ಟ್ರೋಫಿ ತಂಡದಲ್ಲೂ ಸ್ಥಾನವಿಲ್ಲ. ಮಾಜಿ ಕ್ರಿಕೆಟಿಗರು ಈ ನಿರ್ಧಾರವನ್ನು ಪ್ರಶ್ನಿಸಿದ್ದಾರೆ. ಅವರ ಸಾಮರ್ಥ್ಯವಿದ್ದರೂ, ಭಾರತದ ಭವಿಷ್ಯದ ಯೋಜನೆಗಳಲ್ಲಿ ಸಿರಾಜ್ ಸ್ಥಾನ ಕಳೆದುಕೊಳ್ಳುತ್ತಿದ್ದಾರೆಯೇ ಎಂಬ ಪ್ರಶ್ನೆ ಎದ್ದಿದೆ.

1 / 6
ಭಾರತೀಯ ಕ್ರಿಕೆಟ್ ತಂಡದ ಯಶಸ್ವಿ ವೇಗದ ಬೌಲರ್‌ಗಳಲ್ಲಿ ಮೊಹಮ್ಮದ್ ಸಿರಾಜ್ ಕೂಡ ಒಬ್ಬರು. ಅದರಲ್ಲೂ ಏಕದಿನ ಕ್ರಿಕೆಟ್‌ನಲ್ಲಿ ಇತ್ತೀಚಿನ ವರ್ಷಗಳಲ್ಲಿ ಅವರು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಆದರೆ 2023ರ ಏಕದಿನ ವಿಶ್ವಕಪ್ ಬಳಿಕ ಸಿರಾಜ್‌ಗೆ ಏಕದಿನ ತಂಡದಲ್ಲಿ ಸಿಗುತ್ತಿರುವ ಅವಕಾಶಗಳು ಗಣನೀಯವಾಗಿ ಕಡಿಮೆಯಾಗಿವೆ. ತಮ್ಮ ಸಾಮರ್ಥ್ಯವನ್ನು ಹಲವು ಬಾರಿ ಸಾಬೀತುಪಡಿಸಿದ್ದರೂ, ಅವರು ಭಾರತದ ಏಕದಿನ ತಂಡದ ಖಾಯಂ ಸದಸ್ಯನಾಗಿ ಕಾಣಿಸಿಕೊಳ್ಳುತ್ತಿಲ್ಲ(PC-PTI).

ಭಾರತೀಯ ಕ್ರಿಕೆಟ್ ತಂಡದ ಯಶಸ್ವಿ ವೇಗದ ಬೌಲರ್‌ಗಳಲ್ಲಿ ಮೊಹಮ್ಮದ್ ಸಿರಾಜ್ ಕೂಡ ಒಬ್ಬರು. ಅದರಲ್ಲೂ ಏಕದಿನ ಕ್ರಿಕೆಟ್‌ನಲ್ಲಿ ಇತ್ತೀಚಿನ ವರ್ಷಗಳಲ್ಲಿ ಅವರು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಆದರೆ 2023ರ ಏಕದಿನ ವಿಶ್ವಕಪ್ ಬಳಿಕ ಸಿರಾಜ್‌ಗೆ ಏಕದಿನ ತಂಡದಲ್ಲಿ ಸಿಗುತ್ತಿರುವ ಅವಕಾಶಗಳು ಗಣನೀಯವಾಗಿ ಕಡಿಮೆಯಾಗಿವೆ. ತಮ್ಮ ಸಾಮರ್ಥ್ಯವನ್ನು ಹಲವು ಬಾರಿ ಸಾಬೀತುಪಡಿಸಿದ್ದರೂ, ಅವರು ಭಾರತದ ಏಕದಿನ ತಂಡದ ಖಾಯಂ ಸದಸ್ಯನಾಗಿ ಕಾಣಿಸಿಕೊಳ್ಳುತ್ತಿಲ್ಲ(PC-PTI).

2 / 6

2023ರಲ್ಲಿ ಸಿರಾಜ್ ಅದ್ಭುತ ಪ್ರದರ್ಶನ ನೀಡಿದ್ದರು. ಆ ವರ್ಷ ಆಡಿದ 25 ಪಂದ್ಯಗಳಲ್ಲಿ ಒಟ್ಟು 44 ವಿಕೆಟ್‌ಗಳನ್ನು ಕಬಳಿಸಿದ್ದರು. ಏಷ್ಯಾಕಪ್ ಮತ್ತು ಏಕದಿನ ವಿಶ್ವಕಪ್‌ನಲ್ಲಿ ಭಾರತದ ಬೌಲಿಂಗ್ ವಿಭಾಗದ ಪ್ರಮುಖ ಅಸ್ತ್ರವಾಗಿದ್ದರು. ಅದರಲ್ಲೂ ಏಷ್ಯಾಕಪ್ ಫೈನಲ್‌ನಲ್ಲಿ ಶ್ರೀಲಂಕಾ ವಿರುದ್ಧ ಕೇವಲ 21 ರನ್ ನೀಡಿ 6 ವಿಕೆಟ್ ಪಡೆದ ಅವರ ಮಾರಕ ಬೌಲಿಂಗ್ ಪ್ರದರ್ಶನ ಕ್ರಿಕೆಟ್ ಅಭಿಮಾನಿಗಳ ಮನದಲ್ಲಿ ಇಂದಿಗೂ ಅಚ್ಚಳಿಯದೆ ಉಳಿದಿದೆ(PC-PTI).

3 / 6

ಆದರೆ 2023ರ ಬಳಿಕ ಸಿರಾಜ್‌ಗೆ ಅವಕಾಶಗಳು ಕಡಿಮೆಯಾಗುತ್ತಾ ಬಂದಿವೆ. 2024ರ ಆರಂಭದಿಂದ ಈವರೆಗೆ ಅವರು ಆಡಿರುವುದು ಕೇವಲ 10 ಏಕದಿನ ಪಂದ್ಯಗಳು ಮಾತ್ರ. ಅಷ್ಟೇ ಅಲ್ಲದೆ, 2025ರ ಚಾಂಪಿಯನ್ಸ್ ಟ್ರೋಫಿಗೂ ಅವರನ್ನು ಭಾರತದ ತಂಡದಿಂದ ಕೈಬಿಡಲಾಗಿತ್ತು. ಇದು ತಂಡದ ಭವಿಷ್ಯದ ಯೋಜನೆಗಳಲ್ಲಿ ಸಿರಾಜ್ ಸ್ಥಾನ ಕಳೆದುಕೊಳ್ಳುತ್ತಿದ್ದಾರೆಯೇ ಎಂಬ ಪ್ರಶ್ನೆ ಮೂಡಿಸಿತ್ತು. ಸಿರಾಜ್‌ಗೆ ಅವಕಾಶಗಳು ಕಡಿಮೆಯಾಗಿರುವುದರ ಹಿಂದೆ ತಂಡದ ಆಯ್ಕೆ ಮತ್ತು ಬೌಲಿಂಗ್ ಸಂಯೋಜನೆಯ ನಿರ್ಧಾರಗಳು ಪ್ರಮುಖ ಕಾರಣಗಳಾಗಿವೆ(PC-PTI).

4 / 6

2024ರಲ್ಲಿ ಸಿರಾಜ್ ಕೇವಲ ಮೂರು ಏಕದಿನ ಪಂದ್ಯಗಳನ್ನು ಆಡಿದ್ದರು. 2025ರಲ್ಲೂ ಮೂರು ಪಂದ್ಯಗಳಿಗೆ ಸೀಮಿತರಾಗಿದ್ದರು. 2026ರಲ್ಲಿ ಈವರೆಗೆ ನಾಲ್ಕು ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಸರಣಿಗೂ ಮುನ್ನ ಅವರು ಕೊನೆಯದಾಗಿ ಅಕ್ಟೋಬರ್ 3ರಂದು ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಪಂದ್ಯವನ್ನಾಡಿದ್ದರು. ಈ ಪಂದ್ಯದಲ್ಲಿ 52 ರನ್ ನೀಡಿ ಒಂದು ವಿಕೆಟ್ ಪಡೆದಿದ್ದರು(PC-PTI).

5 / 6

ಸಿರಾಜ್‌ಗೆ ಸಿಗುತ್ತಿರುವ ಸೀಮಿತ ಅವಕಾಶಗಳ ಬಗ್ಗೆ ಭಾರತದ ಮಾಜಿ ಸ್ಪಿನ್ನರ್ ಮುರಳಿ ಕಾರ್ತಿಕ್ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕ್ರಿಕ್‌ಬಜ್‌ನಲ್ಲಿ ಮಾತನಾಡಿದ ಅವರು, ಸಿರಾಜ್ ಅವರನ್ನು ಆಡುವ ಹನ್ನೊಂದರ ಬಳಗದಿಂದ ಕೈಬಿಡುತ್ತಿರುವುದಕ್ಕೆ ಪ್ರಶ್ನೆ ಎತ್ತಿದ್ದಾರೆ. ‘ಮೊಹಮ್ಮದ್ ಸಿರಾಜ್ ಅವರನ್ನು ಆಡುವ ಹನ್ನೊಂದರ ಬಳಗದಿಂದ ಏಕೆ ಹೊರಗಿಡುತ್ತಿದ್ದೀರಿ? ಅವರು ಅಂಥದ್ದೇನು ತಪ್ಪು ಮಾಡಿದ್ದಾರೆ?’ ಎಂದು ಮುರಳಿ ಕಾರ್ತಿಕ್ ಪ್ರಶ್ನಿಸಿದ್ದಾರೆ(PC-PTI).

6 / 6

ಮೊಹಮ್ಮದ್ ಸಿರಾಜ್ ಭಾರತ ತಂಡದ ಪರ ಈವರೆಗೆ 51 ಏಕದಿನ ಪಂದ್ಯಗಳನ್ನು ಆಡಿದ್ದು, 25.67ರ ಸರಾಸರಿಯಲ್ಲಿ ಒಟ್ಟು 77 ವಿಕೆಟ್‌ಗಳನ್ನು ಪಡೆದಿದ್ದಾರೆ. 21 ರನ್ ನೀಡಿ 6 ವಿಕೆಟ್ ಪಡೆದಿರುವುದು ಅವರ ಏಕದಿನ ಕ್ರಿಕೆಟ್‌ನ ಅತ್ಯುತ್ತಮ ಬೌಲಿಂಗ್ ಪ್ರದರ್ಶನವಾಗಿದೆ. 2023ರ ಏಷ್ಯಾಕಪ್ ಫೈನಲ್‌ನಲ್ಲಿ ಶ್ರೀಲಂಕಾ ವಿರುದ್ಧ ಈ ಸಾಧನೆ ಮಾಡಿದ್ದರು(PC-PTI).

ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Loading...
Unable to load recommendations.
Follow Us