- Kannada News Photo gallery Cricket photos Mohammed Siraj's Record-Breaking Wickets: India vs West Indies Test Hero
IND vs WI: ತವರಿನಲ್ಲಿ ಮೊದಲ ಬಾರಿಗೆ ಈ ಸಾಧನೆ ಮಾಡಿದ ಮೊಹಮ್ಮದ್ ಸಿರಾಜ್
Mohammed Siraj's Record-Breaking Wickets: ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್‌ನಲ್ಲಿ ಮೊಹಮ್ಮದ್ ಸಿರಾಜ್ ಅದ್ಭುತ ಬೌಲಿಂಗ್ ಪ್ರದರ್ಶಿಸಿ 7 ವಿಕೆಟ್‌ಗಳನ್ನು ಕಬಳಿಸಿದರು. ಭಾರತದಲ್ಲಿ ಆಡಿದ 14 ಟೆಸ್ಟ್‌ಗಳಲ್ಲಿ ಎರಡನೇ ಇನ್ನಿಂಗ್ಸ್‌ನಲ್ಲಿ ವಿಕೆಟ್ ಪಡೆಯಲಾಗದ ತಮ್ಮ ಬರವನ್ನು ನೀಗಿಸಿಕೊಂಡರು. ಇದು ಅವರ ವೃತ್ತಿಜೀವನದ ಮಹತ್ವದ ಮೈಲಿಗಲ್ಲಾಗಿದೆ. ಅವರ ಮಾರಕ ದಾಳಿ ವಿಂಡೀಸ್ ಕುಸಿತಕ್ಕೆ ಪ್ರಮುಖ ಕಾರಣವಾಯಿತು.
Updated on: Oct 04, 2025 | 7:11 PM

ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ವೇಗಿ ಮೊಹಮ್ಮದ್ ಸಿರಾಜ್ ತಮ್ಮ ಅದ್ಭುತ ಬೌಲಿಂಗ್ ಮೂಲಕ ಎಲ್ಲರ ಗಮನ ಸೆಳೆದರು. ಮೊದಲ ಇನ್ನಿಂಗ್ಸ್‌ನಲ್ಲಿ ತಮ್ಮ ಮಾರಕ ದಾಳಿಯ ಮೂಲಕ 4 ವಿಕೆಟ್ ಕಬಳಿಸಿದ್ದ ಸಿರಾಜ್, ಎರಡನೇ ಇನ್ನಿಂಗ್ಸ್ನಲ್ಲೂ 3 ವಿಕೆಟ್ ಪಡೆದರು.

ಈ ಮೂಲಕ ಸಿರಾಜ್ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇದುವರೆಗೆ ಸಾಧ್ಯವಾಗದ ಸಾಧನೆಯನ್ನು ಮಾಡಿದ್ದಾರೆ. ವಿಂಡೀಸ್ ಆರಂಭಿಕ ತೇಜ್‌ನಾರಾಯಣ್ ಚಂದ್ರಪಾಲ್ ಅವರ ವಿಕೆಟ್ ಉರುಳಿಸುವ ಮೂಲಕ ಸಿರಾಜ್, ಭಾರತದಲ್ಲಿ ನಡೆದ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಮೊದಲ ಬಾರಿಗೆ ವಿಕೆಟ್ ಪಡೆದ ದಾಖಲೆ ನಿರ್ಮಿಸಿದರು.

ಮೊಹಮ್ಮದ್ ಸಿರಾಜ್ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ 100 ಕ್ಕೂ ಹೆಚ್ಚು ವಿಕೆಟ್‌ಗಳನ್ನು ಪಡೆದಿದ್ದಾರೆ. ಆದರೆ ಭಾರತದಲ್ಲಿ ಈ ಹಿಂದೆ ಆಡಿದ 14 ಟೆಸ್ಟ್‌ಗಳ ಎರಡನೇ ಇನ್ನಿಂಗ್ಸ್‌ನಲ್ಲಿ ಎಂದಿಗೂ ವಿಕೆಟ್ ಪಡೆದಿರಲಿಲ್ಲ. ಆದರೆ ಇದೀಗ ವಿಂಡೀಸ್ ವಿರುದ್ಧದ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ವಿಕೆಟ್ ಪಡೆಯುವ ಮೂಲಕ ವಿಕೆಟ್ ಬರವನ್ನು ನೀಗಿಸಿಕೊಂಡರು.

ಈ ಪಂದ್ಯಕ್ಕೂ ಮುನ್ನ, ಮೊಹಮ್ಮದ್ ಸಿರಾಜ್ ಭಾರತದಲ್ಲಿ 14 ಟೆಸ್ಟ್ ಪಂದ್ಯಗಳನ್ನು ಆಡಿದ್ದರು. ಇದರಲ್ಲಿ ಮೂರನೇ ಮತ್ತು ನಾಲ್ಕನೇ ಇನ್ನಿಂಗ್ಸ್ ಸೇರಿದಂತೆ ಒಟ್ಟು 11 ಇನ್ನಿಂಗ್ಸ್ಗಳಲ್ಲಿ ಬೌಲಿಂಗ್ ಮಾಡಿದ್ದರು. ಆದರೆ ಈ 11 ಬಾರಿಯೂ ಒಂದೇ ಒಂದು ವಿಕೆಟ್ ಪಡೆಯಲು ಸಾಧ್ಯವಾಗಿರಲಿಲ್ಲ. ಈ 11 ಇನ್ನಿಂಗ್ಸ್ಗಳಲ್ಲಿ 50 ಓವರ್‌ಗಳನ್ನು ಬೌಲಿಂಗ್ ಮಾಡಿದ್ದ ಸಿರಾಜ್ ವಿಕೆಟ್ ಪಡೆಯಲು ವಿಫಲರಾಗಿದ್ದರು.

ಈ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ವೆಸ್ಟ್ ಇಂಡೀಸ್ ತಂಡ ಕೇವಲ 162 ರನ್ ಗಳಿಸಿ ಆಲ್ ಔಟ್ ಆಗಿತ್ತು . ಈ ಕಳಪೆ ಪ್ರದರ್ಶನಕ್ಕೆ ದೊಡ್ಡ ಕಾರಣ ಮೊಹಮ್ಮದ್ ಸಿರಾಜ್ ಅವರ ಬೌಲಿಂಗ್. ಮೊದಲ ಇನ್ನಿಂಗ್ಸ್‌ನಲ್ಲಿ ಸಿರಾಜ್ 14 ಓವರ್‌ಗಳನ್ನು ಬೌಲಿಂಗ್ ಮಾಡಿ ಕೇವಲ 40 ರನ್‌ಗಳಿಗೆ 4 ವಿಕೆಟ್‌ಗಳನ್ನು ಪಡೆದಿದ್ದರು. ಮೊದಲ ಇನ್ನಿಂಗ್ಸ್‌ನಲ್ಲಿಯೂ ತೇಜ್‌ನಾರಾಯಣ್ ಚಂದ್ರಪಾಲ್ ಅವರನ್ನು ಔಟ್ ಮಾಡಿದ್ದ ಸಿರಾಜ್, ಅಲಿಕ್ ಅಥಾನಾಜೆ, ಬ್ರಾಂಡನ್ ಕಿಂಗ್ ಮತ್ತು ರೋಸ್ಟನ್ ಚೇಸ್ ಅವರನ್ನು ಸಹ ಔಟ್ ಮಾಡಿದರು .
