Mohammed Siraj Rested: ಪಂದ್ಯ ಆರಂಭಕ್ಕೆ ಕೆಲವೇ ಗಂಟೆಗಳಿರುವಾಗ ಬಿಸಿಸಿಐಯಿಂದ ಶಾಕಿಂಗ್ ನಿರ್ಧಾರ: ಸ್ಟಾರ್ ಆಟಗಾರನಿಗೆ ವಿಶ್ರಾಂತಿ
IND vs WI 1st ODI: ಭಾರತ ವೆಸ್ಟ್ ಇಂಡೀಸ್ ಮೊದಲ ಏಕದಿನ ಪಂದ್ಯ ಆರಂಭಕ್ಕೆ ಕೆಲವೇ ಗಂಟೆಗಳಿರುವಾಗ ಬಿಸಿಸಿಐ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಮೊಹಮ್ಮದ್ ಸಿರಾಜ್ ಅವರನ್ನು ದಿಢೀರ್ ಆಗಿ ಏಕದಿನ ಸರಣಿಯಿಂದ ಕೈಬಿಡಲಾಗಿದೆ.
1 / 8
ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಏಕದಿನ ಸರಣಿಗೆ ಕ್ಷಣಗಣನೆ ಶುರುವಾಗಿದೆ. ಇಂದು ಬಾರ್ಬಡಸ್ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ಮೊದಲ ಏಕದಿನ ಪಂದ್ಯ ನಡೆಯಲಿದೆ. ಆದರೆ, ಇದಕ್ಕೂ ಮುನ್ನ ಟೀಮ್ ಇಂಡಿಯಾಕ್ಕೆ ಬಿಸಿಸಿಐ ಶಾಕ್ ನೀಡಿದೆ.
2 / 8
ಪಂದ್ಯ ಆರಂಭಕ್ಕೆ ಕೆಲವೇ ಗಂಟೆಗಳಿರುವಾಗ ಬಿಸಿಸಿಐ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಇತ್ತೀಚೆಗಷ್ಟೆ ಮುಕ್ತಾಯಗೊಂಡ ಟೆಸ್ಟ್ ಸರಣಿಯಲ್ಲಿ ಅದ್ಭುತ ಪ್ರದರ್ಶನ ತೋರಿ ಸರಣಿಶ್ರೇಷ್ಠ ಪ್ರಶಸ್ತಿ ಬಾಚಿಕೊಂಡ ಮೊಹಮ್ಮದ್ ಸಿರಾಜ್ ಅವರನ್ನು ದಿಢೀರ್ ಆಗಿ ಏಕದಿನ ಸರಣಿಯಿಂದ ಕೈಬಿಡಲಾಗಿದೆ.
3 / 8
ಏಕದಿನ ಸರಣಿಯಿಂದ ಮೊಹಮ್ಮದ್ ಸಿರಾಜ್ಗೆ ವಿಶ್ರಾಂತಿ ನೀಡಲಾಗಿದೆ. ಅವರು ತವರಿಗೆ ಮರಳಲಿದ್ದಾರೆ ಎಂದು ಬಿಸಿಸಿಐ ಮೂಲಗಳ ತಿಳಿಸಿವೆ. ಸಿರಾಜ್ ಅವರು ಆರ್. ಅಶ್ವಿನ್, ಅಜಿಂಕ್ಯ ರಹಾನೆ, ಕೆಎಸ್ ಭರತ್ ಮತ್ತು ನವ್ದೀಪ್ ಸೈನಿ ಜೊತೆ ಇಂದು ಭಾರತಕ್ಕೆ ಮರಳಲಿದ್ದಾರೆ.
4 / 8
ಅತ್ತ ಮೊಹಮ್ಮದ್ ಶಮಿ ಕೂಡ ವಿಶ್ರಾಂತಿಯಲ್ಲಿದ್ದಾರೆ. ಹೀಗಾಗಿ ಸದ್ಯ ಏಕದಿನ ಸರಣಿಗೆ ವೇಗಿಗಳಾಗಿ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ, ಜಯದೇವ್ ಉನಾದ್ಕಟ್, ಶಾರ್ದೂಲ್ ಠಾಕೂರ್, ಮುಖೇಶ್ ಕುಮಾರ್ ಮತ್ತು ಉಮ್ರಾನ್ ಮಲಿಕ್ ಮಾತ್ರ ಇದ್ದಾರೆ.
5 / 8
ಸತತವಾಗಿ ಕ್ರಿಕೆಟ್ ಆಡುತ್ತಿರುವುದರಿಂದ ಮೊಹಮ್ಮದ್ ಸಿರಾಜ್ಗೆ ವಿಶ್ರಾಂತಿ ನೀಡಲಾಗಿದೆ ಎಂದಿ ಇಎಸ್ಪಿಎನ್ ಕ್ರಿಕ್ ಇನ್ಫೋ ವರದಿ ಮಾಡಿದೆ. ಇವರ ಬದಲಿ ಆಟಗಾರನನ್ನು ಬಿಸಿಸಿಐ ಇನ್ನೂ ಹೆಸರಿಸಿಲ್ಲ.
6 / 8
ವೆಸ್ಟ್ ಇಂಡೀಸ್ ವಿರುದ್ಧದ T20I ಸರಣಿಗೆ ಸಿರಾಜ್ ಆಯ್ಕೆ ಆಗಿರಲಿಲ್ಲ. ಆದರೆ, ಏಕದಿನ ಸರಣಿಯ ಪಟ್ಟಿಯಲ್ಲಿ ಇದ್ದರು. ಆದರೀಗ ಪಂದ್ಯ ಆರಂಭಕ್ಕೆ ಕೆಲವೇ ಗಂಟೆಗಳಿರುವಾಗ ಬಿಸಿಸಿಐ ಈ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.
7 / 8
ಸಿರಾಜ್ ಅವರು ಮಾರ್ಚ್ 2022 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತದಲ್ಲಿ ಕೊನೆಯ ಏಕದಿನ ಪಂದ್ಯ ಆಡಿದ್ದರು. ಕಳೆದ 2 ವರ್ಷಗಳಲ್ಲಿ, ಸಿರಾಜ್ 23 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ 4.57 ರ ಅತ್ಯುತ್ತಮ ಸರಾಸರಿಯೊಂದಿಗೆ 41 ವಿಕೆಟ್‌ಗಳನ್ನು ಪಡೆದಿದ್ದಾರೆ. ಈ 41 ರಲ್ಲಿ, 31 ವಿಕೆಟ್‌ಗಳನ್ನು ಪಡೆದಿರುವುದು ಈ ವರ್ಷ ಎಂಬುದು ವಿಶೇಷ.
8 / 8
ಜಸ್ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ ಅವರ ಅಲಭ್ಯತೆಯಲ್ಲಿ ತಂಡದ ವೇಗದ ಬೌಲಿಂಗ್ ಜವಾಬ್ದಾರಿ ಹೊತ್ತ ಸಿರಾಜ್ ಇಂದು ಟೀಮ್ ಇಂಡಿಯಾದ ಪ್ರಮುಖ ಸದಸ್ಯರಾಗಿದ್ದಾರೆ.