ಚಾಂಪಿಯನ್ಸ್ ಟ್ರೋಫಿಗೆ ಮೊಹಮ್ಮದ್ ಸಿರಾಜ್ ವೈಲ್ಡ್​ ಕಾರ್ಡ್ ಎಂಟ್ರಿ ಸಾಧ್ಯತೆ

|

Updated on: Jan 28, 2025 | 8:58 AM

Mohammed Siraj: ಟೀಮ್ ಇಂಡಿಯಾ ಪರ ಕಳೆದ ಎರಡು ವರ್ಷಗಳಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳಲ್ಲಿ ಮೊಹಮ್ಮದ್ ಸಿರಾಜ್ ಕೂಡ ಒಬ್ಬರು. ಅದರಲ್ಲೂ ಮೊಹಮ್ಮದ್ ಶಮಿ ಹಾಗೂ ಜಸ್​ಪ್ರೀತ್ ಬುಮ್ರಾ ಅವರ ಅನುಪಸ್ಥಿತಿ ನಡುವೆ ಅವರು ಬೌಲಿಂಗ್ ವಿಭಾಗವನ್ನು ಮುನ್ನಡೆಸಿದ್ದರು. ಈ ಮೂಲಕ ಕಳೆದ ಎರಡು ವರ್ಷಗಳ ಅವಧಿಯಲ್ಲಿ 42 ಇನಿಂಗ್ಸ್​ಗಳಲ್ಲಿ ಸಿರಾಜ್ ಒಟ್ಟು 71 ವಿಕೆಟ್ ಕಬಳಿಸಿದ್ದಾರೆ. ಇದಾಗ್ಯೂ ಅವರನ್ನು ಚಾಂಪಿಯನ್ಸ್ ಟ್ರೋಫಿಗೆ ಆಯ್ಕೆ ಮಾಡಿರಲಿಲ್ಲ.

1 / 6
ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಅವರನ್ನು ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ತಂಡಕ್ಕೆ ಆಯ್ಕೆ ಮಾಡಲಾಗಿಲ್ಲ. ಅಷ್ಟೇ ಅಲ್ಲದೆ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಿಂದಲೂ ಹೊರಗಿಡಲಾಗಿದೆ. ಇದಾಗ್ಯೂ ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೂ ಮುನ್ನ ಮೊಹಮ್ಮದ್ ಸಿರಾಜ್ ಟೀಮ್ ಇಂಡಿಯಾಗೆ ವೈಲ್ಡ್ ಕಾರ್ಡ್ ಎಂಟ್ರಿ ಕೊಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

2 / 6
ಚಾಂಪಿಯನ್ಸ್ ಟ್ರೋಫಿಗೆ ಜಸ್​ಪ್ರೀತ್ ಬುಮ್ರಾ ಅವರ ಲಭ್ಯತೆ ಇನ್ನೂ ಸಹ ಖಚಿತವಾಗಿಲ್ಲ. ಬೆನ್ನು ನೋವಿನ ಸಮಸ್ಯೆಗೆ ಸಿಲುಕಿರುವ ಅವರ ವೈದ್ಯಕೀಯ ವರದಿ ನ್ಯೂಝಿಲೆಂಡ್ ಡಾಕ್ಟರ್ಸ್​ಗೆ ಕಳುಹಿಸಲಾಗಿದ್ದು, ಈ ಬಗ್ಗೆ ಪರಿಶೀಲಿಸಿದ ಬಳಿಕ ಬುಮ್ರಾ ಅವರಿಗೆ ಹೆಚ್ಚಿನ ವಿಶ್ರಾಂತಿ ನೀಡಬೇಕಾ ಅಥವಾ ಬೇಡವಾ ಎಂಬುದು ನಿರ್ಧಾರವಾಗಲಿದೆ.

3 / 6
ಒಂದು ವೇಳೆ ನ್ಯೂಝಿಲೆಂಡ್ ವೈದ್ಯಕೀಯ ವರದಿಯಲ್ಲಿ ಬುಮ್ರಾ ಅವರಿಗೆ ಹೆಚ್ಚಿನ ವಿಶ್ರಾಂತಿ ನೀಡಬೇಕೆಂದು ಸೂಚಿಸಿದರೆ, ಅವರನ್ನು ಚಾಂಪಿಯನ್ಸ್ ಟ್ರೋಫಿ ತಂಡದಿಂದ ಕೈ ಬಿಡುವುದು ಖಚಿತ. ಅಲ್ಲದೆ ಅವರ ಬದಲಿಗೆ ಮೊಹಮ್ಮದ್ ಸಿರಾಜ್ ಅವರನ್ನು ತಂಡಕ್ಕೆ ಆಯ್ಕೆ ಮಾಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

4 / 6
ಈಗಾಗಲೇ ಜಸ್​ಪ್ರೀತ್ ಬುಮ್ರಾಗೆ ಬ್ಯಾಕ್ ಅಪ್ ಆಟಗಾರನನ್ನು ಸಿದ್ಧಪಡಿಸಲು ಸೂಚಿಸಲಾಗಿದ್ದು, ಬುಮ್ರಾ 100% ಫಿಟ್ ಆಗದಿದ್ದರೆ ಮೊಹಮ್ಮದ್ ಸಿರಾಜ್ ಅವರನ್ನು ಚಾಂಪಿಯನ್ಸ್ ಟ್ರೋಫಿಗಾಗಿ ಕಳುಹಿಸಲು ಆಯ್ಕೆ ಸಮಿತಿ ಚಿಂತಿಸಿದೆ ಎಂದು ವರದಿಯಾಗಿದೆ.

5 / 6
ಹೀಗಾಗಿ ಫೆಬ್ರವರಿ 19 ರೊಳಗೆ ಜಸ್​ಪ್ರೀತ್ ಬುಮ್ರಾ ಸಂಪೂರ್ಣ ಫಿಟ್​ನೆಸ್​ ಸಾಧಿಸುವುದಿಲ್ಲ ಎಂದು ಕಂಡು ಬಂದರೆ ಅವರನ್ನು ತಂಡದಿಂದ ಕೈ ಬಿಡಬಹುದು. ಅಲ್ಲದೆ ಅನುಭವದ ಆಧಾರದ ಮೇಲೆ ಮೊಹಮ್ಮದ್ ಸಿರಾಜ್ ಅವರನ್ನು ತಂಡಕ್ಕೆ ಆಯ್ಕೆ ಮಾಡುವ ಸಾಧ್ಯತೆ ಹೆಚ್ಚಿದೆ.

6 / 6
ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಬ್ ಪಂತ್, ರವೀಂದ್ರ ಜಡೇಜಾ.

Published On - 8:56 am, Tue, 28 January 25