AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: DSP ಈಗ ನಂಬರ್ 1: ಐಪಿಎಲ್​ನಲ್ಲಿ ಮೊಹಮ್ಮದ್ ಸಿರಾಜ್ ದಾಖಲೆ

IPL 2025 GT vs RR: ಇಂಡಿಯನ್ ಪ್ರೀಮಿಯರ್ ಲೀಗ್​ (ಐಪಿಎಲ್ 2025) ಸೀಸನ್​-18ರ 23ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 20 ಓವರ್​ಗಳಲ್ಲಿ 217 ರನ್ ಕಲೆಹಾಕಿದರೆ, ರಾಜಸ್ಥಾನ್ ರಾಯಲ್ಸ್ ತಂಡವು 159 ರನ್​ಗಳಿಗೆ ಆಲೌಟ್ ಆಗಿದೆ. ಇನ್ನು ಈ ಪಂದ್ಯದ ಪವರ್​ಪ್ಲೇನಲ್ಲಿ ಮೊಹಮ್ಮದ್ ಸಿರಾಜ್ ಅತ್ಯುತ್ತಮ ದಾಳಿ ಸಂಘಟಿಸಿ ಮಿಂಚಿದ್ದಾರೆ.

ಝಾಹಿರ್ ಯೂಸುಫ್
|

Updated on:Apr 10, 2025 | 7:01 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ಮೊಹಮ್ಮದ್ ಸಿರಾಜ್ (Mohammed Siraj) ಮುಂಚಿನ ದಾಳಿ ಮುಂದುವರೆದಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಸನ್​ರೈಸರ್ಸ್ ಹೈದರಾಬಾದ್ (SRH) ವಿರುದ್ಧದ ಪಂದ್ಯಗಳಲ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದ ಸಿರಾಜ್ ಇದೀಗ ರಾಜಸ್ಥಾನ್ ರಾಯಲ್ಸ್ (RR) ವಿರುದ್ಧದ ಪಂದ್ಯದಲ್ಲೂ ಉತ್ತಮ ಬೌಲಿಂಗ್ ಪ್ರದರ್ಶಿಸಿದ್ದಾರೆ.

1 / 5
ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 20 ಓವರ್​ಗಳಲ್ಲಿ 217 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಮೊಹಮ್ಮದ್ ಸಿರಾಜ್ ಆರಂಭಿಕ ಆಘಾತ ನೀಡಿದ್ದರು. ಅಲ್ಲದೆ 4 ಓವರ್​ಗಳಲ್ಲಿ 30 ರನ್ ನೀಡಿ 1 ವಿಕೆಟ್ ಪಡೆದಿದ್ದರು.

2 / 5
ಈ ಒಂದು ವಿಕೆಟ್​ನೊಂದಿಗೆ ಈ ಬಾರಿಯ ಐಪಿಎಲ್​ನಲ್ಲಿ ಪವರ್​ಪ್ಲೇನಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಮೊಹಮ್ಮದ್ ಸಿರಾಜ್ ಅಗ್ರಸ್ಥಾನಕ್ಕೇರಿದ್ದಾರೆ. 5 ಪಂದ್ಯಗಳಲ್ಲಿ ಪವರ್​ಪ್ಲೇನಲ್ಲಿ ಬೌಲಿಂಗ್ ಮಾಡಿರುವ ಸಿರಾಜ್ ಈವರೆಗೆ 7 ವಿಕೆಟ್​ ಕಬಳಿಸಿದ್ದಾರೆ. ಈ ಮೂಲಕ ಗುಜರಾತ್ ಟೈಟಾನ್ಸ್ ತಂಡಕ್ಕೆ ಅತ್ಯುತ್ತಮ ಆರಂಭ ಒದಗಿಸುವಲ್ಲಿ ಸಿರಾಜ್ ಪ್ರಮುಖ ಪಾತ್ರವಹಿಸುತ್ತಿದ್ದಾರೆ.

3 / 5
ಅಷ್ಟೇ ಅಲ್ಲದೆ ಈ ಬಾರಿಯ ಐಪಿಎಲ್​ನಲ್ಲಿ ಅತ್ಯಧಿಕ ಡಾಟ್ ಬಾಲ್ ಎಸೆದ ಬೌಲರ್​ಗಳ ಪಟ್ಟಿಯಲ್ಲೂ ಮೊಹಮ್ಮದ್ ಸಿರಾಜ್ ಮೊದಲ ಸ್ಥಾನದಲ್ಲಿದ್ದಾರೆ. ಈವರೆಗೆ 20 ಓವರ್​ಗಳನ್ನು ಎಸೆದಿರುವ ಸಿರಾಜ್ 68 ಎಸೆತಗಳಲ್ಲಿ ಯಾವುದೇ ರನ್ ಬಿಟ್ಟು ಕೊಟ್ಟಿಲ್ಲ ಎಂಬುದೇ ಅಚ್ಚರಿ. ಅಂದರೆ 120 ಎಸೆತಗಳಲ್ಲಿ 52 ಎಸೆತಗಳಲ್ಲಿ ಮಾತ್ರ ರನ್ ನೀಡಿದ್ದಾರೆ.

4 / 5
ಇನ್ನು ಈ 20 ಓವರ್​ಗಳಲ್ಲಿ 7.70 ರ ಸರಾಸರಿಯಲ್ಲಿ ಮಾತ್ರ ರನ್ ನೀಡಿರುವ ಮೊಹಮ್ಮದ್ ಸಿರಾಜ್ ಒಟ್ಟು 10 ವಿಕೆಟ್​ಗಳನ್ನು ಸಹ ಕಬಳಿಸಿದ್ದಾರೆ. ಈ ಮೂಲಕ ಆರೆಂಜ್ ಕ್ಯಾಪ್ ರೇಸ್​ನಲ್ಲೂ ಕೂಡ ಕಾಣಿಸಿಕೊಂಡಿದ್ದಾರೆ. ಒಟ್ಟಿನಲ್ಲಿ ಈ ಬಾರಿಯ ಐಪಿಎಲ್​ನಲ್ಲಿ ಹೊಸ ಉತ್ಸಾಹದೊಂದಿಗೆ ಬೌಲಿಂಗ್ ಮಾಡುತ್ತಿರುವ ಸಿರಾಜ್ ಗುಜರಾತ್ ಟೈಟಾನ್ಸ್ ತಂಡದ ಟ್ರಂಪ್ ಕಾರ್ಡ್ ಆಗಿ ಬದಲಾಗಿದ್ದಾರೆ.

5 / 5

Published On - 7:00 am, Thu, 10 April 25

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ

ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ

ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ

ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?

ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್

‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’

ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!

ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್

ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?