IPL 2025: DSP ಈಗ ನಂಬರ್ 1: ಐಪಿಎಲ್ನಲ್ಲಿ ಮೊಹಮ್ಮದ್ ಸಿರಾಜ್ ದಾಖಲೆ
IPL 2025 GT vs RR: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2025) ಸೀಸನ್-18ರ 23ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 20 ಓವರ್ಗಳಲ್ಲಿ 217 ರನ್ ಕಲೆಹಾಕಿದರೆ, ರಾಜಸ್ಥಾನ್ ರಾಯಲ್ಸ್ ತಂಡವು 159 ರನ್ಗಳಿಗೆ ಆಲೌಟ್ ಆಗಿದೆ. ಇನ್ನು ಈ ಪಂದ್ಯದ ಪವರ್ಪ್ಲೇನಲ್ಲಿ ಮೊಹಮ್ಮದ್ ಸಿರಾಜ್ ಅತ್ಯುತ್ತಮ ದಾಳಿ ಸಂಘಟಿಸಿ ಮಿಂಚಿದ್ದಾರೆ.
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ಮೊಹಮ್ಮದ್ ಸಿರಾಜ್ (Mohammed Siraj) ಮುಂಚಿನ ದಾಳಿ ಮುಂದುವರೆದಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಸನ್ರೈಸರ್ಸ್ ಹೈದರಾಬಾದ್ (SRH) ವಿರುದ್ಧದ ಪಂದ್ಯಗಳಲ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದ ಸಿರಾಜ್ ಇದೀಗ ರಾಜಸ್ಥಾನ್ ರಾಯಲ್ಸ್ (RR) ವಿರುದ್ಧದ ಪಂದ್ಯದಲ್ಲೂ ಉತ್ತಮ ಬೌಲಿಂಗ್ ಪ್ರದರ್ಶಿಸಿದ್ದಾರೆ.
1 / 5
ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 20 ಓವರ್ಗಳಲ್ಲಿ 217 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಮೊಹಮ್ಮದ್ ಸಿರಾಜ್ ಆರಂಭಿಕ ಆಘಾತ ನೀಡಿದ್ದರು. ಅಲ್ಲದೆ 4 ಓವರ್ಗಳಲ್ಲಿ 30 ರನ್ ನೀಡಿ 1 ವಿಕೆಟ್ ಪಡೆದಿದ್ದರು.
2 / 5
ಈ ಒಂದು ವಿಕೆಟ್ನೊಂದಿಗೆ ಈ ಬಾರಿಯ ಐಪಿಎಲ್ನಲ್ಲಿ ಪವರ್ಪ್ಲೇನಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್ಗಳ ಪಟ್ಟಿಯಲ್ಲಿ ಮೊಹಮ್ಮದ್ ಸಿರಾಜ್ ಅಗ್ರಸ್ಥಾನಕ್ಕೇರಿದ್ದಾರೆ. 5 ಪಂದ್ಯಗಳಲ್ಲಿ ಪವರ್ಪ್ಲೇನಲ್ಲಿ ಬೌಲಿಂಗ್ ಮಾಡಿರುವ ಸಿರಾಜ್ ಈವರೆಗೆ 7 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಗುಜರಾತ್ ಟೈಟಾನ್ಸ್ ತಂಡಕ್ಕೆ ಅತ್ಯುತ್ತಮ ಆರಂಭ ಒದಗಿಸುವಲ್ಲಿ ಸಿರಾಜ್ ಪ್ರಮುಖ ಪಾತ್ರವಹಿಸುತ್ತಿದ್ದಾರೆ.
3 / 5
ಅಷ್ಟೇ ಅಲ್ಲದೆ ಈ ಬಾರಿಯ ಐಪಿಎಲ್ನಲ್ಲಿ ಅತ್ಯಧಿಕ ಡಾಟ್ ಬಾಲ್ ಎಸೆದ ಬೌಲರ್ಗಳ ಪಟ್ಟಿಯಲ್ಲೂ ಮೊಹಮ್ಮದ್ ಸಿರಾಜ್ ಮೊದಲ ಸ್ಥಾನದಲ್ಲಿದ್ದಾರೆ. ಈವರೆಗೆ 20 ಓವರ್ಗಳನ್ನು ಎಸೆದಿರುವ ಸಿರಾಜ್ 68 ಎಸೆತಗಳಲ್ಲಿ ಯಾವುದೇ ರನ್ ಬಿಟ್ಟು ಕೊಟ್ಟಿಲ್ಲ ಎಂಬುದೇ ಅಚ್ಚರಿ. ಅಂದರೆ 120 ಎಸೆತಗಳಲ್ಲಿ 52 ಎಸೆತಗಳಲ್ಲಿ ಮಾತ್ರ ರನ್ ನೀಡಿದ್ದಾರೆ.
4 / 5
ಇನ್ನು ಈ 20 ಓವರ್ಗಳಲ್ಲಿ 7.70 ರ ಸರಾಸರಿಯಲ್ಲಿ ಮಾತ್ರ ರನ್ ನೀಡಿರುವ ಮೊಹಮ್ಮದ್ ಸಿರಾಜ್ ಒಟ್ಟು 10 ವಿಕೆಟ್ಗಳನ್ನು ಸಹ ಕಬಳಿಸಿದ್ದಾರೆ. ಈ ಮೂಲಕ ಆರೆಂಜ್ ಕ್ಯಾಪ್ ರೇಸ್ನಲ್ಲೂ ಕೂಡ ಕಾಣಿಸಿಕೊಂಡಿದ್ದಾರೆ. ಒಟ್ಟಿನಲ್ಲಿ ಈ ಬಾರಿಯ ಐಪಿಎಲ್ನಲ್ಲಿ ಹೊಸ ಉತ್ಸಾಹದೊಂದಿಗೆ ಬೌಲಿಂಗ್ ಮಾಡುತ್ತಿರುವ ಸಿರಾಜ್ ಗುಜರಾತ್ ಟೈಟಾನ್ಸ್ ತಂಡದ ಟ್ರಂಪ್ ಕಾರ್ಡ್ ಆಗಿ ಬದಲಾಗಿದ್ದಾರೆ.