AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಹಮ್ಮದ್ ಸಿರಾಜ್​ಗೆ ಬರೋಬ್ಬರಿ 80 ಲಕ್ಷ ರೂ..!

Mohammed Siraj: ಮೊಹಮ್ಮದ್ ಸಿರಾಜ್ ಟೀಮ್ ಇಂಡಿಯಾ ಪರ ಕಳೆದ 10 ಟೆಸ್ಟ್ ಪಂದ್ಯಗಳಲ್ಲಿ ಸತತವಾಗಿ ಕಣಕ್ಕಿಳಿದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್​ ಸರಣಿಯಲ್ಲಿ 5 ಪಂದ್ಯಗಳ ಮೂಲಕ 20 ವಿಕೆಟ್ ಪಡೆದಿದ್ದ ಸಿರಾಜ್, ಇದೀಗ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ 5 ಮ್ಯಾಚ್​ಗಳ ಮೂಲಕ 23 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

ಝಾಹಿರ್ ಯೂಸುಫ್
|

Updated on: Aug 06, 2025 | 8:23 AM

Share
ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿ ಮುಕ್ತಾಯಗೊಂಡಿದೆ. ಐದು ಪಂದ್ಯಗಳ ಈ ಸರಣಿಯನ್ನು 2-2 ಅಂತರದಿಂದ ಸಮಬಲಗೊಳಿಸುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಿದೆ. ಅದರಲ್ಲೂ ನಿರ್ಣಾಯಕವಾಗಿದ್ದ ಕೊನೆಯ ಪಂದ್ಯದಲ್ಲಿ 5 ವಿಕೆಟ್ ಕಬಳಿಸಿ ಮೊಹಮ್ಮದ್ ಸಿರಾಜ್ ಟೀಮ್ ಇಂಡಿಯಾಗೆ ರೋಚಕ ಗೆಲುವು ತಂದುಕೊಟ್ಟಿದ್ದರು.

1 / 5
ಹೀಗೆ ಗೆಲುವಿನ ರೂವಾರಿಯಾಗಿ ಹೊರಹೊಮ್ಮಿದ ಮೊಹಮ್ಮದ್ ಸಿರಾಜ್ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದಿದ್ದರು. ಈ ಪ್ರಶಸ್ತಿಯೊಂದಿಗೆ ಸಿರಾಜ್​ಗೆ ಬಿಸಿಸಿಐ ಕಡೆಯಿಂದಲೂ ವಿಶೇಷ ಬೋನಸ್ ಸಿಗಲಿದೆ. ಅಂದರೆ ಟೀಮ್ ಇಂಡಿಯಾ ಬೌಲರ್​ ಟೆಸ್ಟ್​ನಲ್ಲಿ 5 ವಿಕೆಟ್ ಕಬಳಿಸಿದರೆ ಅವರಿಗೆ 5 ಲಕ್ಷ ರೂ. ಬಹುಮಾನ ಮೊತ್ತವನ್ನು ನೀಡಲಾಗುತ್ತದೆ.

2 / 5
ಅದರಂತೆ ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ 5 ವಿಕೆಟ್ ಕಬಳಿಸಿ ಮಿಂಚಿರುವ ಮೊಹಮ್ಮದ್ ಸಿರಾಜ್​ಗೆ ಬಿಸಿಸಿಐ 5 ಲಕ್ಷ ರೂ. ನೀಡಲಿದೆ. ಇದರ ಜೊತೆಗೆ 75 ಲಕ್ಷ ರೂ. ಪಂದ್ಯ ಶುಲ್ಕವನ್ನು ಸಹ ಪಡೆಯಲಿದ್ದಾರೆ. ಅಂದರೆ ಟೀಮ್ ಇಂಡಿಯಾ ಪರ ಟೆಸ್ಟ್ ಆಡುವ ಆಟಗಾರನಿಗೆ ಪ್ರತಿ ಪಂದ್ಯಕ್ಕೆ 15 ಲಕ್ಷ ರೂ. ನೀಡಲಾಗುತ್ತದೆ.

3 / 5
ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಮೊಹಮ್ಮದ್ ಸಿರಾಜ್ 5 ಪಂದ್ಯಗಳಲ್ಲೂ ಕಣಕ್ಕಿಳಿದಿದ್ದರು. ಅದರಂತೆ ಈ ಸರಣಿಯ ಮೂಲಕ ಪಡೆಯಲಿರುವುದು ಬರೋಬ್ಬರಿ 75 ಲಕ್ಷ ರೂ. ಇದರ ಜೊತೆಗೆ ಕೊನೆಯ ಪಂದ್ಯದಲ್ಲಿ ಮಿಂಚಿನ ದಾಳಿ ಸಂಘಟಿಸಿ 5 ವಿಕೆಟ್ ಕಬಳಿಸಿರುವ ಕಾರಣ ಹೆಚ್ಚುವರಿ 5 ಲಕ್ಷ ರೂ. ಅನ್ನು ಸಹ ಬಹುಮಾನವಾಗಿ ಪಡೆಯಲಿದ್ದಾರೆ. ಈ ಮೂಲಕ ಒಂದೇ ಸರಣಿಯ ಮೂಲಕ ಸಿರಾಜ್ 80 ಲಕ್ಷ ರೂ. ಜೇಬಿಗಿಳಿಸಿಕೊಂಡಿದ್ದಾರೆ.

4 / 5
ಇನ್ನು ಈ ಸರಣಿಯಲ್ಲಿ 9 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಮೊಹಮ್ಮದ್ ಸಿರಾಜ್ ಒಟ್ಟು  185.3 ಓವರ್​ಗಳನ್ನು ಎಸೆದಿದ್ದಾರೆ. ಈ ವೇಳೆ 1113 ಎಸೆತಗಳಲ್ಲಿ 23 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಅ್ಯಂಡರ್ಸನ್-ತೆಂಡೂಲ್ಕರ್ ಸರಣಿಯಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿ ಬೌಲರ್ ಎನಿಸಿಕೊಂಡಿದ್ದಾರೆ.

5 / 5