IND vs WI: ಅತ್ಯಧಿಕ ವಿಕೆಟ್; ಮಿಚೆಲ್ ಸ್ಟಾರ್ಕ್ ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದ ಸಿರಾಜ್

Updated on: Oct 02, 2025 | 6:00 PM

Mohammed Siraj: ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವೆ ಅಹಮದಾಬಾದ್‌ನಲ್ಲಿ ನಡೆದ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಸಿರಾಜ್ 4 ವಿಕೆಟ್‌ಗಳನ್ನು ಕಬಳಿಸಿ ವಿಂಡೀಸ್ ಪಡೆಯನ್ನು ಬಹುಬೇಗನೇ ಆಲೌಟ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದರು. ಈ ಭರ್ಜರಿ ಪ್ರದರ್ಶನದೊಂದಿಗೆ, 2025-27ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿ ಮಿಚೆಲ್ ಸ್ಟಾರ್ಕ್‌ರನ್ನು ಹಿಂದಿಕ್ಕಿದ್ದಾರೆ.

1 / 5
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಟೆಸ್ಟ್ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಟಾಸ್ ಗೆದ್ದು ಬ್ಯಾಟಿಂಗ್‌ ಆರಂಭಿಸಿದ ವಿಂಡೀಸ್ ತಂಡವನ್ನು ಮೊದಲ ದಿನವೇ ಕಾಡಿದ ಭಾರತದ ಸ್ಟಾರ್ ವೇಗಿ ಮೊಹಮ್ಮದ್ ಸಿರಾಜ್ ಮೊದಲ ಇನ್ನಿಂಗ್ಸ್‌ನಲ್ಲಿ ನಾಲ್ಕು ವಿಕೆಟ್‌ಗಳನ್ನು ಕಬಳಿಸಿದರು.

2 / 5
ಅಹಮದಾಬಾದ್ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಮೊಹಮ್ಮದ್ ಸಿರಾಜ್ 14 ಓವರ್‌ಗಳನ್ನು ಬೌಲ್ ಮಾಡಿ 40 ರನ್‌ಗಳನ್ನು ಬಿಟ್ಟುಕೊಟ್ಟು 4 ವಿಕೆಟ್‌ಗಳನ್ನು ಕಬಳಿಸಿದರು. ಇದರೊಂದಿಗೆ ಸಿರಾಜ್ ನಾಲ್ಕನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಮಿಚೆಲ್ ಸ್ಟಾರ್ಕ್ ಅವರನ್ನು ಹಿಂದಿಕ್ಕಿದ್ದಾರೆ. ಹಾಗೆಯೇ ಈ ವಿಚಾರದಲ್ಲಿ ನಂ.1 ಸ್ಥಾನಕ್ಕೇರಿದ್ದಾರೆ.

3 / 5
ವೆಸ್ಟ್ ಇಂಡೀಸ್ ವಿರುದ್ಧ ಆರಂಭದಿಂದಲೂ ಕರಾರುವಕ್ಕಾದ ದಾಳಿ ನಡೆಸಿದ ಸಿರಾಜ್, ಇನ್ನಿಂಗ್ಸ್‌ನ ನಾಲ್ಕನೇ ಓವರ್‌ನಲ್ಲಿ ತೇಜ್‌ನಾರಾಯಣ್ ಚಂದ್ರಪಾಲ್ ಅವರನ್ನು ಶೂನ್ಯಕ್ಕೆ ಔಟ್ ಮಾಡಿದರು. ನಂತರ, 10 ನೇ ಓವರ್‌ನಲ್ಲಿ ಬ್ರಾಂಡನ್ ಕಿಂಗ್ ಅವರನ್ನು ಕ್ಲೀನ್ ಬೌಲ್ಡ್ ಮಾಡಿದರು. ಅಲಿಕ್ ಅಥಾನಾಸೆ ಅವರನ್ನು ಔಟ್ ಮಾಡುವ ಮೂಲಕ ತಮ್ಮ ಮೂರನೇ ವಿಕೆಟ್ ಪಡೆದರು.

4 / 5
ನಂತರ ಎರಡನೇ ಸೆಷನ್‌ನಲ್ಲಿ ಮೊಹಮ್ಮದ್ ಸಿರಾಜ್ ವೆಸ್ಟ್ ಇಂಡೀಸ್ ನಾಯಕ ರೋಸ್ಟನ್ ಚೇಸ್ ಅವರನ್ನು ಔಟ್ ಮಾಡಿದರು. ಇದರೊಂದಿಗೆ, ಸಿರಾಜ್ 2025 ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡರು. ಈ ವರ್ಷ ಸಿರಾಜ್ ಇದುವರೆಗೆ 30 ವಿಕೆಟ್‌ಗಳನ್ನು ಕಬಳಿಸುವ ಮೂಲಕ ಅಗ್ರಸ್ಥಾನವನ್ನು ಪಡೆದುಕೊಂಡರೆ, ಆಸ್ಟ್ರೇಲಿಯಾ ವೇಗಿ ಮಿಚೆಲ್ ಸ್ಟಾರ್ಕ್ 29 ವಿಕೆಟ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.

5 / 5
ಡಬ್ಲ್ಯೂಟಿಸಿ 2025-27ರ ಆವೃತ್ತಿಯಲ್ಲಿ ಮೊಹಮ್ಮದ್ ಸಿರಾಜ್ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿರುವ ಸಿರಾಜ್ ಈ ಆವೃತ್ತಿಯಲ್ಲಿ ತಮ್ಮ ಆರನೇ ಟೆಸ್ಟ್ ಪಂದ್ಯವನ್ನು ಆಡುತ್ತಿದ್ದಾರೆ. ಇದಕ್ಕೂ ಮೊದಲು, ಅವರು ಇಂಗ್ಲೆಂಡ್ ವಿರುದ್ಧದ ಎಲ್ಲಾ ಐದು ಟೆಸ್ಟ್ ಪಂದ್ಯಗಳನ್ನು ಆಡಿ 23 ವಿಕೆಟ್‌ಗಳನ್ನು ಕಬಳಿಸಿದ್ದರು. ಇದೀಗ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ನಾಲ್ಕು ವಿಕೆಟ್‌ಗಳನ್ನು ಕಬಳಿಸಿ ತಮ್ಮ ಅದ್ಭುತ ಪ್ರದರ್ಶನವನ್ನು ಮುಂದುವರೆಸಿದ್ದಾರೆ.