AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾ ಪರ ಅತೀ ಹೆಚ್ಚು ಬಾರಿ 150 ಕ್ಕೂ ಅಧಿಕ ರನ್ ಬಾರಿಸಿದ್ದು ಯಾರು ಗೊತ್ತಾ?

Team India Records: ಏಕದಿನ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಬಾರಿ 150+ ರನ್ ಬಾರಿಸಿವ ಭಾರತೀಯ ಬ್ಯಾಟ್ಸ್​ಮನ್​ಗಳು ಯಾರೆಲ್ಲಾ ಎಂದು ನೋಡೋಣ...

TV9 Web
| Edited By: |

Updated on: Jan 15, 2023 | 10:06 PM

Share
ತಿರುವನಂತಪುರದ ಗ್ರೀನ್​ ಫೀಲ್ಡ್​ ಮೈದಾನದಲ್ಲಿ ನಡೆದ ಶ್ರೀಲಂಕಾ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಶತಕ ಬಾರಿಸಿ ಮಿಂಚಿದ್ದರು. 85 ಎಸೆತಗಳಲ್ಲಿ ಶತಕ ಪೂರೈಸಿದ್ದ ಕೊಹ್ಲಿ ಆ ಬಳಿಕ ಕೇವಲ 106 ಎಸೆತಗಳಲ್ಲಿ 150 ರನ್​ ಚಚ್ಚಿದ್ದರು.

1 / 6
ಅಷ್ಟೇ ಅಲ್ಲದೆ ಕೊನೆಯ ಎಸೆತದವರೆಗೆ ಕ್ರೀಸ್​ನಲ್ಲಿದ್ದ ಕೊಹ್ಲಿ ಅಂತಿಮವಾಗಿ 110 ಎಸೆತಗಳಲ್ಲಿ 8 ಭರ್ಜರಿ ಸಿಕ್ಸ್​ ಹಾಗೂ 13 ಫೋರ್​ನೊಂದಿಗೆ ಅಜೇಯ 166 ರನ್​ ಬಾರಿಸಿದರು. ಈ ಶತಕದೊಂದಿಗೆ ಕಿಂಗ್ ಕೊಹ್ಲಿ ಸಚಿನ್ ತೆಂಡೂಲ್ಕರ್ ಅವರ ಮತ್ತೊಂದು ದಾಖಲೆಯನ್ನೂ ಕೂಡ ಸರಿಗಟ್ಟಿದರು.

2 / 6
ಅಂದರೆ ಟೀಮ್ ಇಂಡಿಯಾ ಪರ ಏಕದಿನ ಕ್ರಿಕೆಟ್​ನಲ್ಲಿ ಅತ್ಯಧಿಕ ಬಾರಿ 150 ಕ್ಕಿಂತ ಹೆಚ್ಚಿನ ರನ್ ಬಾರಿಸಿದ ಬ್ಯಾಟ್ಸ್​ಮನ್​ಗಳ ಪಟ್ಟಿಯಲ್ಲಿ ಕಿಂಗ್ ಕೊಹ್ಲಿ 2ನೇ ಸ್ಥಾನ ಅಲಂಕರಿಸಿದ್ದಾರೆ. ಅದು ಕೂಡ ಸಚಿನ್ ಅವರ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ. ಹಾಗಿದ್ರೆ ಏಕದಿನ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಬಾರಿ 150+ ರನ್ ಬಾರಿಸಿವ ಭಾರತೀಯ ಬ್ಯಾಟ್ಸ್​ಮನ್​ಗಳು ಯಾರೆಲ್ಲಾ ಎಂದು ನೋಡೋಣ...

3 / 6
1- ರೋಹಿತ್ ಶರ್ಮಾ: ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಹಿಟ್​ಮ್ಯಾನ್ ಏಕದಿನ ಕ್ರಿಕೆಟ್​ನಲ್ಲಿ ಒಟ್ಟು 29 ಶತಕ ಬಾರಿಸಿದ್ದಾರೆ. ಈ ವೇಳೆ 8 ಬಾರಿ 150+ ಸ್ಕೋರ್ ಕಲೆಹಾಕಿರುವುದು ವಿಶೇಷ. ಈ ಮೂಲಕ ಟೀಮ್ ಇಂಡಿಯಾ ಪರ ಏಕದಿನ ಕ್ರಿಕೆಟ್​ನಲ್ಲಿ ಅತ್ಯಧಿಕ 150+ ರನ್​ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

4 / 6
2- ಸಚಿನ್ ತೆಂಡೂಲ್ಕರ್: ಈ ಪಟ್ಟಿಯಲ್ಲಿರುವ 2ನೇ ಬ್ಯಾಟ್ಸ್​ಮನ್ ಮಾಸ್ಟರ್ ಬ್ಲಾಸ್ಟರ್​ ಸಚಿನ್ ತೆಂಡೂಲ್ಕರ್​. ಕ್ರಿಕೆಟ್ ದೇವರು ಏಕದಿನ ಕ್ರಿಕೆಟ್​ನಲ್ಲಿ 49 ಶತಕ ಬಾರಿಸಿದ್ದಾರೆ. ಈ ವೇಳೆ 5 ಬಾರಿ 150+ ರನ್​ಗಳಿಸಿದ್ದರು ಎಂಬುದು ವಿಶೇಷ.

5 / 6
3- ವಿರಾಟ್ ಕೊಹ್ಲಿ: ಶ್ರೀಲಂಕಾ ವಿರುದ್ಧ ಅಜೇಯ 166 ರನ್​ ಬಾರಿಸುವ ಮೂಲಕ ಕಿಂಗ್ ಕೊಹ್ಲಿ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಸರಿಗಟ್ಟಿದರು. ಅಂದರೆ ವಿರಾಟ್ ಕೊಹ್ಲಿ ಕೂಡ ತಮ್ಮ 46 ಏಕದಿನ ಶತಕಗಳಲ್ಲಿ 5 ಬಾರಿ 150+ ರನ್​ ಕಲೆಹಾಕಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಅತ್ಯಧಿಕ ಬಾರಿ 150+ ರನ್​ ಬಾರಿಸಿದ ಬ್ಯಾಟ್ಸ್​ಮನ್​ಗಳ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್​ ಜೊತೆ ಜಂಟಿಯಾಗಿ 2ನೇ ಸ್ಥಾನವನ್ನು ಹಂಚಿಕೊಂಡಿದ್ದಾರೆ.

6 / 6
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ

ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ

ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್

ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್