Suryakumar Yadav: ಟಾಪ್-1 ಪಟ್ಟಿಗೆ ಸೂರ್ಯಕುಮಾರ್ ಯಾದವ್ ಎಂಟ್ರಿ..!
TV9 Web | Updated By: ಝಾಹಿರ್ ಯೂಸುಫ್
Updated on:
Nov 27, 2022 | 9:31 PM
Team India: ಮೂರು ಮಾದರಿಯ ಕ್ರಿಕೆಟ್ನಲ್ಲಿ ಭಾರತದ ಪರ ಒಂದು ವರ್ಷದಲ್ಲಿ ಅತ್ಯಧಿಕ ಬಾರಿ 50 ಕ್ಕೂ ಹೆಚ್ಚು ರನ್ ಕಲೆಹಾಕಿದ ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ಬೇರೆ ಬೇರೆ ಆಟಗಾರರು ಸ್ಥಾನ ಪಡೆದಿದ್ದಾರೆ.
1 / 6
ಟೀಮ್ ಇಂಡಿಯಾ ಪರ ಒಂದು ವರ್ಷದಲ್ಲಿ ಅತ್ಯಧಿಕ ಬಾರಿ 50+ ಸ್ಕೋರ್ ಬಾರಿಸಿದ ಟಾಪ್-1 ಪಟ್ಟಿಗೆ ಸೂರ್ಯಕುಮಾರ್ ಯಾದವ್ ಎಂಟ್ರಿ ಕೊಟ್ಟಿದ್ದಾರೆ. ಈ ಮೂಲಕ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್, ಡ್ಯಾಶಿಂಗ್ ಓಪನರ್ ವೀರೇಂದ್ರ ಸೆಹ್ವಾಗ್ ಅವರ ಅಪರೂಪದ ಸಾಧನೆಯ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ.
2 / 6
ಮೂರು ಮಾದರಿಯ ಕ್ರಿಕೆಟ್ನಲ್ಲಿ ಭಾರತದ ಪರ ಒಂದು ವರ್ಷದಲ್ಲಿ ಅತ್ಯಧಿಕ ಬಾರಿ 50 ಕ್ಕೂ ಹೆಚ್ಚು ರನ್ ಕಲೆಹಾಕಿದ ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ಬೇರೆ ಬೇರೆ ಆಟಗಾರರು ಸ್ಥಾನ ಪಡೆದಿದ್ದಾರೆ. ಈ ಪಟ್ಟಿಗೆ ಹೊಸ ಸೇರ್ಪಡೆ ಸೂರ್ಯಕುಮಾರ್ ಯಾದವ್.
3 / 6
ಹಾಗಿದ್ರೆ ಒಂದೇ ವರ್ಷದಲ್ಲಿ ಭಾರತದ ಪರ ಅತ್ಯಧಿಕ 50+ ರನ್ ಬಾರಿಸಿದ ಆಟಗಾರರು ಯಾರೆಲ್ಲಾ ನೋಡೋಣ...
4 / 6
ಏಕದಿನ ಕ್ರಿಕೆಟ್: ಒನ್ಡೇ ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾ ಪರ ಒಂದೇ ವರ್ಷದಲ್ಲಿ ಅತ್ಯಧಿಕ ಬಾರಿ 50+ ರನ್ ಬಾರಿಸಿದ್ದು ಸಚಿನ್ ತೆಂಡೂಲ್ಕರ್. 1998 ರಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ 16 ಬಾರಿ 50+ ಸ್ಕೋರ್ ಕಲೆಹಾಕಿದ್ದರು.
5 / 6
ಟೆಸ್ಟ್ ಕ್ರಿಕೆಟ್: ಟೀಮ್ ಇಂಡಿಯಾ ಪರ ಟೆಸ್ಟ್ನಲ್ಲಿ ಒಂದು ವರ್ಷದಲ್ಲಿ ಅತ್ಯಧಿಕ 50+ ಕಲೆಹಾಕಿದ್ದು ಸ್ಪೋಟಕ ಬ್ಯಾಟರ್ ವೀರೇಂದ್ರ ಸೆಹ್ವಾಗ್. 2010 ರಲ್ಲಿ ಸೆಹ್ವಾಗ್ 13 ಬಾರಿ 50+ ಸ್ಕೋರ್ ಬಾರಿಸಿದ್ದರು.
6 / 6
ಟಿ20 ಕ್ರಿಕೆಟ್: ಚುಟುಕು ಮಾದರಿಯಲ್ಲಿ ಹೊಸ ಸಂಚಲನ ಸೃಷ್ಟಿಸಿರುವ ಸೂರ್ಯಕುಮಾರ್ ಯಾದವ್ 2022 ರಲ್ಲಿ 11 ಬಾರಿ 50 ಪ್ಲಸ್ ಸ್ಕೋರ್ ಕಲೆಹಾಕಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಒಂದು ವರ್ಷದಲ್ಲಿ ಅತ್ಯಧಿಕ ಬಾರಿ 50+ ಸ್ಕೋರ್ ಗಳಿಸಿದ ಆಟಗಾರ ಎಂಬ ದಾಖಲೆಯನ್ನು ಸೂರ್ಯಕುಮಾರ್ ಯಾದವ್ ಬರೆದಿದ್ದಾರೆ.