Virat Kohli: ಗೆಲುವಿನ ಸೆಂಚುರಿಯಲ್ಲಿ ಅರ್ಧಶತಕ ದಾಟಿದ ಕಿಂಗ್ ಕೊಹ್ಲಿ

Edited By:

Updated on: Jan 11, 2023 | 7:23 PM

Virat Kohli Century Records: ವಿಶೇಷ ಎಂದರೆ ಈ ಶತಕದೊಂದಿಗೆ ವಿರಾಟ್ ಕೊಹ್ಲಿ ಹಲವು ದಾಖಲೆಗಳನ್ನು ಕೂಡ ನಿರ್ಮಿಸಿದ್ದರು. ಅದರಲ್ಲೂ ಟೀಮ್ ಇಂಡಿಯಾ ಗೆಲುವಿನಲ್ಲಿ ಅತ್ಯಧಿಕ ಶತಕ ಬಾರಿಸಿದ 2ನೇ ಬ್ಯಾಟ್ಸ್​ಮನ್ ಎನಿಸಿಕೊಂಡರು.

1 / 5
ಗುವಾಹಟಿಯಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ 67 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿಗಳಲ್ಲಿ ವಿರಾಟ್ ಕೊಹ್ಲಿ ಕೂಡ ಒಬ್ಬರು. ಏಕೆಂದರೆ ಈ ಪಂದ್ಯದಲ್ಲಿ ಕೊಹ್ಲಿ 87 ಎಸೆತಗಳನ್ನು ಎದುರಿಸಿ 113 ರನ್ ಬಾರಿಸಿ ಮಿಂಚಿದ್ದರು. ಈ ಸೆಂಚುರಿಯ ನೆರವಿನಿಂದ ಟೀಮ್ ಇಂಡಿಯಾ ಬೃಹತ್ ಮೊತ್ತ ಪೇರಿಸುವಂತಾಯಿತು.

ಗುವಾಹಟಿಯಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ 67 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿಗಳಲ್ಲಿ ವಿರಾಟ್ ಕೊಹ್ಲಿ ಕೂಡ ಒಬ್ಬರು. ಏಕೆಂದರೆ ಈ ಪಂದ್ಯದಲ್ಲಿ ಕೊಹ್ಲಿ 87 ಎಸೆತಗಳನ್ನು ಎದುರಿಸಿ 113 ರನ್ ಬಾರಿಸಿ ಮಿಂಚಿದ್ದರು. ಈ ಸೆಂಚುರಿಯ ನೆರವಿನಿಂದ ಟೀಮ್ ಇಂಡಿಯಾ ಬೃಹತ್ ಮೊತ್ತ ಪೇರಿಸುವಂತಾಯಿತು.

2 / 5

ವಿಶೇಷ ಎಂದರೆ ಈ ಶತಕದೊಂದಿಗೆ ವಿರಾಟ್ ಕೊಹ್ಲಿ ಹಲವು ದಾಖಲೆಗಳನ್ನು ಕೂಡ ನಿರ್ಮಿಸಿದ್ದರು. ಅದರಲ್ಲೂ ಟೀಮ್ ಇಂಡಿಯಾ ಗೆಲುವಿನಲ್ಲಿ ಅತ್ಯಧಿಕ ಶತಕ ಬಾರಿಸಿದ 2ನೇ ಬ್ಯಾಟ್ಸ್​ಮನ್ ಎನಿಸಿಕೊಂಡರು. ಅಂದರೆ ತಂಡದ ಗೆಲುವಿನಲ್ಲಿ ಅತೀ ಹೆಚ್ಚು ಶತಕದ ಕೊಡುಗೆ ನೀಡಿದ ಟಾಪ್ 3 ಬ್ಯಾಟ್ಸ್​ಮನ್​ಗಳ ಪಟ್ಟಿಯಲ್ಲಿ ಈಗ ವಿರಾಟ್ ಕೊಹ್ಲಿ ಕೂಡ ಸ್ಥಾನ ಪಡೆದಿದ್ದಾರೆ. ಹಾಗಿದ್ರೆ ತಂಡದ ಗೆಲುವಿನ ಶತಕದ ಮೂಲಕ ಅತೀ ಹೆಚ್ಚು ಬಾರಿ ಕಾಣಿಕೆ ನೀಡಿದ ವಿಶ್ವದ ಟಾಪ್ 3 ಬ್ಯಾಟರ್​ಗಳು ಯಾರೆಲ್ಲಾ ಎಂದು ನೋಡೋಣ...

3 / 5

1- ರಿಕಿ ಪಾಂಟಿಂಗ್: ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಅಗ್ರಸ್ಥಾನದಲ್ಲಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ರಿಕಿ ಪಾಂಟಿಂಗ್ 71 ಶತಕಗಳನ್ನು ಬಾರಿಸಿದ್ದಾರೆ. ಇದರಲ್ಲಿ 55 ಶತಕಗಳು ಆಸ್ಟ್ರೇಲಿಯಾ ತಂಡಕ್ಕೆ ಜಯ ತಂದುಕೊಟ್ಟಿದ್ದವು ಎಂಬುದು ವಿಶೇಷ.

4 / 5

2- ಸಚಿನ್ ತೆಂಡೂಲ್ಕರ್: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಟೀಮ್ ಇಂಡಿಯಾ ಪರ ಒಟ್ಟು 100 ಶತಕ ಸಿಡಿಸಿದ್ದಾರೆ. ಈ ವೇಳೆ ಭಾರತ ಗೆದ್ದಿರುವುದು 53 ಪಂದ್ಯಗಳಲ್ಲಿ ಮಾತ್ರ. ಅಂದರೆ ಸಚಿನ್ 53 ಶತಕಗಳ ಮೂಲಕ ಟೀಮ್ ಇಂಡಿಯಾದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.

5 / 5

3- ವಿರಾಟ್ ಕೊಹ್ಲಿ: ಟೀಮ್ ಇಂಡಿಯಾ ಪರ 73 ಶತಕಗಳನ್ನು ಬಾರಿಸಿರುವ ವಿರಾಟ್ ಕೊಹ್ಲಿ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ವಿಶೇಷ ಎಂದರೆ ಕೊಹ್ಲಿ ಬಾರಿಸಿದ 73 ಶತಕಗಳಲ್ಲಿ 51 ಪಂದ್ಯಗಳಲ್ಲಿ ಟೀಮ್ ಇಂಡಿಯಾ ಗೆದ್ದಿದೆ. ಅಂದರೆ ಟೀಮ್ ಇಂಡಿಯಾ ಗೆಲುವಿನಲ್ಲಿ 51 ಬಾರಿ ವಿರಾಟ್ ಕೊಹ್ಲಿ ಶತಕದ ಕೊಡುಗೆ ನೀಡಿದ್ದಾರೆ.

TV9 Web

TV9 Kannada

Read More
Loading...
Unable to load recommendations.
Follow Us