World Records: ಮೂರು ಮಾದರಿ…ಮೂವರ ವಿಶ್ವ ದಾಖಲೆ

| Updated By: ಝಾಹಿರ್ ಯೂಸುಫ್

Updated on: Dec 24, 2023 | 3:36 PM

Cricket Records: ಟಿ20 ಕ್ರಿಕೆಟ್​ನಲ್ಲಿ ರೋಹಿತ್ ಶರ್ಮಾ ಹಾಗೂ ಸೂರ್ಯಕುಮಾರ್ ಯಾದವ್ ಜಂಟಿಯಾಗಿ ಅಗ್ರಸ್ಥಾನಗಳಲ್ಲಿದ್ದಾರೆ. ಆದರೆ ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶ ಎಂದರೆ ಸೂರ್ಯಕುಮಾರ್ ಯಾದವ್ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ 4 ಶತಕಗಳನ್ನು ಬಾರಿಸಿರುವುದು.

1 / 6
ಕ್ರಿಕೆಟ್​ ಅಂಗಳದ ಸೆಂಚುರಿ ಸರದಾರ ಯಾರು ಎಂದು ಕೇಳಿದ್ರೆ ಥಟ್ಟನೆ ಬರುವ ಉತ್ತಮ ಸಚಿನ್ ತೆಂಡೂಲ್ಕರ್​...ಇಲ್ಲ ವಿರಾಟ್ ಕೊಹ್ಲಿ. ಭಾರತದ ಈ ಇಬ್ಬರು ಕ್ರಿಕೆಟಿಗರು ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್​ಗಳಲ್ಲಿ ಶತಕವೀರರು ಎನಿಸಿಕೊಂಡಿದ್ದಾರೆ.

2 / 6
ಇನ್ನು ಟಿ20 ಕ್ರಿಕೆಟ್​ನಲ್ಲಿ ರೋಹಿತ್ ಶರ್ಮಾ ಹಾಗೂ ಸೂರ್ಯಕುಮಾರ್ ಯಾದವ್ ಜಂಟಿಯಾಗಿ ಅಗ್ರಸ್ಥಾನಗಳಲ್ಲಿದ್ದಾರೆ. ಆದರೆ ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶ ಎಂದರೆ ಸೂರ್ಯಕುಮಾರ್ ಯಾದವ್ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ 4 ಶತಕಗಳನ್ನು ಬಾರಿಸಿರುವುದು.

3 / 6
ಅಂದರೆ ಕ್ರಿಕೆಟ್​ ಇತಿಹಾಸದಲ್ಲೇ ಮೂರು ಮಾದರಿಯಲ್ಲಿ ಅತ್ಯಧಿಕ ಶತಕ ಬಾರಿಸಿದ ಆರಂಭಿಕನಲ್ಲದ ಬ್ಯಾಟರ್​ಗಳ ಪಟ್ಟಿಯಲ್ಲಿ ಟೀಮ್ ಇಂಡಿಯಾ ದಾಂಡಿಗರೇ ಅಗ್ರಸ್ಥಾನದಲ್ಲಿದ್ದಾರೆ...

4 / 6
ಸಚಿನ್ ತೆಂಡೂಲ್ಕರ್​: ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಧಿಕ ಶತಕ ಸಿಡಿಸಿದ ವಿಶ್ವ ದಾಖಲೆ ಇರುವುದು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿ. ಒಟ್ಟು 51 ಸೆಂಚುರಿಗಳನ್ನು ಸಿಡಿಸಿ ಈ ವಿಶ್ವ ದಾಖಲೆ ಬರೆದಿಟ್ಟಿದ್ದಾರೆ. ಕ್ರಿಕೆಟ್ ದೇವರು ಈ 51 ಶತಕಗಳನ್ನು ಬಾರಿಸಿರುವುದು 3ನೇ ಮತ್ತು ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದು ಎಂಬುದು ವಿಶೇಷ. ಈ ಮೂಲಕ ಟೆಸ್ಟ್​ ಕ್ರಿಕೆಟ್​ನಲ್ಲಿ ಅತ್ಯಧಿಕ ಶತಕ ಬಾರಿಸಿದ ನಾನ್ ಓಪನರ್ ಎಂಬ ದಾಖಲೆಯನ್ನು ಸಚಿನ್ ತಮ್ಮದಾಗಿಸಿಕೊಂಡಿದ್ದಾರೆ.

5 / 6
ವಿರಾಟ್ ಕೊಹ್ಲಿ: ಏಕದಿನ ಕ್ರಿಕೆಟ್​ನಲ್ಲಿ ವಿರಾಟ್ ಕೊಹ್ಲಿಯ ಬ್ಯಾಟ್​ನಿಂದ ಬರೋಬ್ಬರಿ 50 ಶತಕಗಳು ಮೂಡಿಬಂದಿವೆ. 3ನೇ ಮತ್ತು ಇನ್ನಿತರೆ ಕ್ರಮಾಂಕಗಳಲ್ಲಿ ಬ್ಯಾಟಿಂಗ್ ಬೀಸುವ ಮೂಲಕ ಕಿಂಗ್ ಕೊಹ್ಲಿ ಏಕದಿನ ಕ್ರಿಕೆಟ್​ನಲ್ಲಿ 50 ಶತಕಗಳನ್ನು ಸಿಡಿಸಿದ್ದಾರೆ. ಇದರೊಂದಿಗೆ ಏಕದಿನ ಕ್ರಿಕೆಟ್​ನಲ್ಲಿ ಅತ್ಯಧಿಕ ಶತಕ ಬಾರಿಸಿದ ಆರಂಭಿಕನಲ್ಲದ ಬ್ಯಾಟರ್ ಎಂಬ ದಾಖಲೆ ಕೂಡ ವಿರಾಟ್ ಕೊಹ್ಲಿಗೆ ಹೆಸರಿಗೆ ಸೇರ್ಪಡೆಯಾಗಿದೆ.

6 / 6
ಸೂರ್ಯಕುಮಾರ್ ಯಾದವ್: ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಶತಕ ಬಾರಿಸಿದ ಬ್ಯಾಟರ್​ಗಳಲ್ಲಿ ಸೂರ್ಯಕುಮಾರ್ ಯಾದವ್ ಕೂಡ ಒಬ್ಬರು. ಮಿಸ್ಟರ್ 360 ಡಿಗ್ರಿ ಖ್ಯಾತಿಯ ಸೂರ್ಯ ಇದುವರೆಗೆ 4 ಶತಕಗಳನ್ನು ಬಾರಿಸಿದ್ದಾರೆ. ಸೂರ್ಯ ಈ ನಾಲ್ಕು ಶತಕಗಳನ್ನು ಸಿಡಿಸಿರುವುದು ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದು ಎಂಬುದು ವಿಶೇಷ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ಅತೀ ಹೆಚ್ಚು ಶತಕ ಬಾರಿಸಿದ ದಾಖಲೆಯನ್ನು ಸೂರ್ಯಕುಮಾರ್ ತಮ್ಮದಾಗಿಸಿಕೊಂಡಿದ್ದಾರೆ.