- Kannada News Photo gallery Cricket photos Kannada News - Most Double Centuries for Team India in Test Cricket
Test Records: ಟೀಮ್ ಇಂಡಿಯಾ ಪರ ಟೆಸ್ಟ್ನಲ್ಲಿ ಅತೀ ಹೆಚ್ಚು ದ್ವಿಶತಕ ಬಾರಿಸಿದ್ದು ಯಾರು ಗೊತ್ತಾ?
Team India Records: ಟೀಮ್ ಇಂಡಿಯಾ ಪರ ಕೂಡ ಟೆಸ್ಟ್ನಲ್ಲಿ ಅತೀ ಹೆಚ್ಚು ಶತಕ ಬಾರಿಸಿದ ದಾಖಲೆ ಕೂಡ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. ಆದರೆ ಭಾರತದ ಪರ ಅತ್ಯಧಿಕ ದ್ವಿಶತಕ ಬಾರಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್ 2ನೇ ಸ್ಥಾನದಲ್ಲಿದ್ದಾರೆ.
Updated on: Jun 20, 2023 | 8:32 PM

Test Records: ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಶತಕ ಬಾರಿಸಿದ್ದು ಯಾರು ಎಂದು ಕೇಳಿದ್ರೆ ಥಟ್ಟನೆ ಬರುವ ಉತ್ತರ ಸಚಿನ್ ತೆಂಡೂಲ್ಕರ್. ಮಾಸ್ಟರ್ ಬ್ಲಾಸ್ಟರ್ ಸಚಿನ್ ಒಟ್ಟು 51 ಶತಕಗಳನ್ನು ಬಾರಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಹಾಗೆಯೇ ಟೀಮ್ ಇಂಡಿಯಾ ಪರ ಕೂಡ ಟೆಸ್ಟ್ನಲ್ಲಿ ಅತೀ ಹೆಚ್ಚು ಶತಕ ಬಾರಿಸಿದ ದಾಖಲೆ ಕೂಡ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. ಆದರೆ ಭಾರತದ ಪರ ಅತ್ಯಧಿಕ ದ್ವಿಶತಕ ಬಾರಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್ 2ನೇ ಸ್ಥಾನದಲ್ಲಿದ್ದಾರೆ. ಹಾಗಿದ್ರೆ ಟೀಮ್ ಇಂಡಿಯಾ ಪರ ಟೆಸ್ಟ್ನಲ್ಲಿ ಅತೀ ಹೆಚ್ಚು ದ್ವಿಶತಕ ಬಾರಿಸಿದ ಬ್ಯಾಟರ್ಗಳು ಯಾರೆಲ್ಲಾ ಎಂದು ನೋಡೋಣ...

1- ವಿರಾಟ್ ಕೊಹ್ಲಿ: ಟೀಮ್ ಇಂಡಿಯಾ ಪರ ಟೆಸ್ಟ್ ಕ್ರಿಕೆಟ್ನಲ್ಲಿ 185 ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ ಒಟ್ಟು 7 ದ್ವಿಶತಕ ಸಿಡಿಸಿದ್ದಾರೆ. ಈ ಮೂಲಕ ಭಾರತದ ಪರ ಟೆಸ್ಟ್ನಲ್ಲಿ ಅತ್ಯಧಿಕ ಡಬಲ್ ಸೆಂಚುರಿ ಬಾರಿಸಿದ ದಾಖಲೆ ಹೊಂದಿದ್ದಾರೆ.

2- ಸಚಿನ್ ತೆಂಡೂಲ್ಕರ್: 200 ಟೆಸ್ಟ್ ಪಂದ್ಯಗಳಲ್ಲಿ 329 ಇನಿಂಗ್ಸ್ ಆಡಿರುವ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ 6 ದ್ವಿಶತಕ ಬಾರಿಸಿದ್ದಾರೆ.

3- ವೀರೇಂದ್ರ ಸೆಹ್ವಾಗ್: ಟೀಮ್ ಇಂಡಿಯಾದ ಮಾಜಿ ಹೊಡಿಬಡಿ ದಾಂಡಿಗ ವೀರೇಂದ್ರ ಸೆಹ್ವಾಗ್ 178 ಟೆಸ್ಟ್ ಇನಿಂಗ್ಸ್ಗಳಲ್ಲಿ 6 ಬಾರಿ ದ್ವಿಶತಕ ಸಿಡಿಸಿದ್ದಾರೆ.

4- ರಾಹುಲ್ ದ್ರಾವಿಡ್: ಟೀಮ್ ಇಂಡಿಯಾದ ವಾಲ್ ಖ್ಯಾತಿಯ ರಾಹುಲ್ ದ್ರಾವಿಡ್ 284 ಟೆಸ್ಟ್ ಇನಿಂಗ್ಸ್ನಲ್ಲಿ 5 ಬಾರಿ ದ್ವಿಶತಕ ಬಾರಿಸಿದ್ದಾರೆ.

5- ಸುನಿಲ್ ಗವಾಸ್ಕರ್: ಲಿಟಲ್ ಮಾಸ್ಟರ್ ಖ್ಯಾತಿಯ ಸುನಿಲ್ ಗವಾಸ್ಕರ್ ಟೀಮ್ ಇಂಡಿಯಾ ಪರ ಒಟ್ಟು 214 ಟೆಸ್ಟ್ ಇನಿಂಗ್ಸ್ ಆಡಿದ್ದಾರೆ. ಈ ವೇಳೆ 4 ಬಾರಿ ದ್ವಿಶತಕ ಸಿಡಿಸಿದ್ದರು.
