Updated on: May 06, 2023 | 5:13 PM
IPL 2023: ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್ಕೆ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಮುಂಬೈ ಇಂಡಿಯನ್ಸ್ ಪರ ಈ ಬಾರಿ ಕ್ಯಾಮರೋನ್ ಗ್ರೀನ್ ಹಾಗೂ ಇಶಾನ್ ಕಿಶನ್ ಇನಿಂಗ್ಸ್ ಆರಂಭಿಸಿದ್ದರು.
ಆದರೆ ಗ್ರೀನ್ 6 ರನ್ಗಳಿಸಿ ತುಷಾರ್ ದೇಶಪಾಂಡೆ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು. ಆ ಬಳಿಕ ನಾಯಕ ರೋಹಿತ್ ಶರ್ಮಾ ಕಣಕ್ಕಿಳಿದಿದ್ದರು. ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ಗೆ ಇಳಿದ ಹಿಟ್ಮ್ಯಾನ್ 3 ಎಸೆತಗಳನ್ನು ಎದುರಿಸಿ ದೀಪಕ್ ಚಹರ್ಗೆ ವಿಕೆಟ್ ಒಪ್ಪಿಸಿದರು. ಆದರೆ ಇದರ ನಡುವೆ ಯಾವುದೇ ರನ್ಗಳಿಸಿಲ್ಲ ಎಂಬುದು ವಿಶೇಷ.
ಈ ಶೂನ್ಯದೊಂದಿಗೆ ಐಪಿಎಲ್ ಇತಿಹಾಸದಲ್ಲೇ ಅತೀ ಹೆಚ್ಚು ಬಾರಿ ಸೊನ್ನೆಗೆ ಔಟಾದ ಆಟಗಾರ ಎಂಬ ಅನಗತ್ಯ ದಾಖಲೆಯೊಂದು ರೋಹಿತ್ ಶರ್ಮಾ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ದಿನೇಶ್ ಕಾರ್ತಿಕ್ ಹೆಸರಿನಲ್ಲಿತ್ತು.
ಅಚ್ಚರಿ ಎಂದರೆ ಇದು ಈ ಬಾರಿಯ ಐಪಿಎಲ್ನಲ್ಲಿ ದಿನೇಶ್ ಕಾರ್ತಿಕ್ ಅವರ 4ನೇ ಡಕ್ ಔಟ್. ಇನ್ನು ಐಪಿಎಲ್ನಲ್ಲಿ ಅತೀ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಟಾಪ್-5 ಬ್ಯಾಟರ್ಗಳ ಪಟ್ಟಿ ಈ ಕೆಳಗಿನಂತಿದೆ.
ರೋಹಿತ್ ಶರ್ಮಾ 232 ಇನಿಂಗ್ಸ್ಗಳಲ್ಲಿ ಒಟ್ಟು 16 ಬಾರಿ ಯಾವುದೇ ರನ್ಗಳಿಸದೇ ವಿಕೆಟ್ ಒಪ್ಪಿಸಿದ್ದಾರೆ. ಈ ಮೂಲಕ ಐಪಿಎಲ್ನಲ್ಲಿ ಅತೀ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಬ್ಯಾಟರ್ ಎಂಬ ಅನಗತ್ಯ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಇನ್ನು ಐಪಿಎಲ್ನಲ್ಲಿ ಅತೀ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಟಾಪ್-5 ಬ್ಯಾಟರ್ಗಳ ಪಟ್ಟಿ ಈ ಕೆಳಗಿನಂತಿದೆ.
2- ರೋಹಿತ್ ಶರ್ಮಾ: ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ 236 ಇನಿಂಗ್ಸ್ಗಳಲ್ಲಿ ಒಟ್ಟು 16 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ.
1- ದಿನೇಶ್ ಕಾರ್ತಿಕ್: 221 ಐಪಿಎಲ್ ಇನಿಂಗ್ಸ್ ಆಡಿರುವ ದಿನೇಶ್ ಕಾರ್ತಿಕ್ ಒಟ್ಟು 17 ಬಾರಿ ಸೊನ್ನೆಗೆ ವಿಕೆಟ್ ಒಪ್ಪಿಸಿದ್ದಾರೆ. ಇದರೊಂದಿಗೆ ಐಪಿಎಲ್ನಲ್ಲಿ ಸೊನ್ನೆ ಸುತ್ತುವುದರಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.
3- ಸುನಿಲ್ ನರೈನ್: ಕೆಕೆಆರ್ ತಂಡದ ಆಟಗಾರ ಸುನಿಲ್ ನರೈನ್ 96 ಇನಿಂಗ್ಸ್ಗಳಲ್ಲಿ 15 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ.
4- ಮಂದೀಪ್ ಸಿಂಗ್: ಕೆಕೆಆರ್ ತಂಡದ ಆಟಗಾರ ಮಂದೀಪ್ ಸಿಂಗ್ 98 ಇನಿಂಗ್ಸ್ಗಳಲ್ಲಿ ಒಟ್ಟು 15 ಬಾರಿ ಯಾವುದೇ ರನ್ಗಳಿಸದೇ ವಿಕೆಟ್ ಒಪ್ಪಿಸಿದ್ದಾರೆ.
5- ಅಂಬಾಟಿ ರಾಯುಡು: ಸಿಎಸ್ಕೆ ತಂಡದ ಬ್ಯಾಟರ್ ಅಂಬಾಟಿ ರಾಯುಡು 185 ಇನಿಂಗ್ಸ್ಗಳಲ್ಲಿ ಒಟ್ಟು 14 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ.