- TV9 Kannada Kannada News Photos Cricket Photos Most Ducks Record: Tamim Iqbal has surpassed Virat Kohli
ಕಳಪೆ ದಾಖಲೆ ಪಟ್ಟಿಯಲ್ಲಿ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ ತಮೀಮ್ ಇಕ್ಬಾಲ್
Tamim Iqbal: ಬಾಂಗ್ಲಾದೇಶ್ ಎಡಗೈ ಬ್ಯಾಟರ್ ತಮೀಮ್ ಇಕ್ಬಾಲ್ ಅನಗತ್ಯ ದಾಖಲೆ ಬರೆದಿದ್ದಾರೆ. ಅದು ಕೂಡ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ಅತ್ಯಂತ ಕಳಪೆ ದಾಖಲೆಯನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ. ಇನ್ನು ಈ ದಾಖಲೆಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಶ್ರೀಲಂಕಾದ ಮುತ್ತಯ್ಯ ಮುರಳೀಧರನ್.
Updated on: Mar 02, 2024 | 8:52 AM

ಬಾಂಗ್ಲಾದೇಶ್ ಪ್ರೀಮಿಯರ್ ಲೀಗ್ನಲ್ಲಿ ನಡೆದ ರಂಗ್ಪುರ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಶೂನ್ಯಕ್ಕೆ ಔಟ್ ಆಗುವುದರೊಂದಿಗೆ ಫಾರ್ಚೂನ್ ಬಾರಿಶಾಲ್ ತಂಡದ ನಾಯಕ ತಮೀಮ್ ಇಕ್ಬಾಲ್ (Tamim Iqbal) ಅನಗತ್ಯ ದಾಖಲೆ ಬರೆದಿದ್ದಾರೆ. ಅದು ಕೂಡ ವಿರಾಟ್ ಕೊಹ್ಲಿಯನ್ನು (Virat Kohli) ಹಿಂದಿಕ್ಕುವ ಮೂಲಕ ಎಂಬುದು ವಿಶೇಷ.

ಈ ಡಕ್ ಔಟ್ನೊಂದಿಗೆ ಅತೀ ಹೆಚ್ಚು ಬಾರಿ ಶೂನ್ಯಕ್ಕೆ ಔಟಾಗಿರುವ ಸಕ್ರಿಯ ಆಟಗಾರರಲ್ಲಿ ಬಾಂಗ್ಲಾದೇಶ್ ಕ್ರಿಕೆಟಿಗ ತಮೀಮ್ ಇಕ್ಬಾಲ್ ಅಗ್ರಸ್ಥಾನಕ್ಕೇರಿದ್ದಾರೆ. ಇದಕ್ಕೂ ಮುನ್ನ ಈ ಪಟ್ಟಿಯಲ್ಲಿ ಟೀಮ್ ಇಂಡಿಯಾದ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದರು.

ವಿರಾಟ್ ಕೊಹ್ಲಿ 580 ಇನಿಂಗ್ಸ್ಗಳಲ್ಲಿ ಒಟ್ಟು 35 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ಈ ಮೂಲಕ ಪ್ರಸ್ತುತ ಆಡುತ್ತಿರುವ ಆಟಗಾರರಲ್ಲಿ ಅತ್ಯಧಿಕ ಬಾರಿ ಸೊನ್ನೆ ಸುತ್ತಿದ ಬ್ಯಾಟರ್ ಎನಿಸಿಕೊಂಡಿದ್ದರು. ಇದೀಗ ಈ ಕಳಪೆ ದಾಖಲೆಯಲ್ಲಿ ತಮೀಮ್ ಇಕ್ಬಾಲ್ ಮುನ್ನುಗ್ಗಿದ್ದಾರೆ.

ಇದುವರೆಗೆ 452 ಇನಿಂಗ್ಸ್ ಆಡಿರುವ ಬಾಂಗ್ಲಾ ತಂಡದ ಎಡಗೈ ದಾಂಡಿಗ ತಮೀಮ್ ಇಕ್ಬಾಲ್ ಒಟ್ಟು 36 ಬಾರಿ ಡಕ್ ಔಟ್ ಆಗಿದ್ದಾರೆ. ಈ ಮೂಲಕ ಅತ್ಯಧಿಕ ಬಾರಿ ಶೂನ್ಯಕ್ಕೆ ಔಟಾದ ಸಕ್ರಿಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇನ್ನು ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವುದು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ. 497 ಇನಿಂಗ್ಸ್ ಆಡಿರುವ ಹಿಟ್ಮ್ಯಾನ್ ಒಟ್ಟು 33 ಬಾರಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದಾರೆ.

ಹಾಗೆಯೇ ನಾಲ್ಕನೇ ಸ್ಥಾನದಲ್ಲಿ ಇಂಗ್ಲೆಂಡ್ ಬ್ಯಾಟರ್ ಜಾನಿ ಬೈರ್ಸ್ಟೋವ್ ಇದ್ದು, 338 ಇನಿಂಗ್ಸ್ಗಳಲ್ಲಿ ಕಣಕ್ಕಿಳಿದಿರುವ ಬೈರ್ಸ್ಟೋವ್ ಒಟ್ಟು 31 ಬಾರಿ ರನ್ ಕಲೆಹಾಕದೇ ಪೆವಿಲಿಯನ್ಗೆ ಹಿಂತಿರುಗಿದ್ದಾರೆ.

ಇನ್ನು ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಕಳಪೆ ದಾಖಲೆ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ ಹೆಸರಿನಲ್ಲಿದೆ. 328 ಇನಿಂಗ್ಸ್ಗಳಲ್ಲಿ ಬ್ಯಾಟಿಂಗ್ ಮಾಡಿರುವ ಮುರಳೀಧರನ್ 59 ಬಾರಿ ಸೊನ್ನೆ ಸುತ್ತಿದ್ದಾರೆ. ಈ ಮೂಲಕ ಅತೀ ಹೆಚ್ಚು ಬಾರಿ ಡಕ್ ಔಟ್ ಆದ ವಿಶ್ವ ದಾಖಲೆ ಬರೆದಿದ್ದಾರೆ.

TV9 Kannada
Read More