ಕಳಪೆ ದಾಖಲೆ ಪಟ್ಟಿಯಲ್ಲಿ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ ತಮೀಮ್ ಇಕ್ಬಾಲ್

| Updated By: ಝಾಹಿರ್ ಯೂಸುಫ್

Updated on: Mar 02, 2024 | 8:52 AM

Tamim Iqbal: ಬಾಂಗ್ಲಾದೇಶ್ ಎಡಗೈ ಬ್ಯಾಟರ್ ತಮೀಮ್ ಇಕ್ಬಾಲ್ ಅನಗತ್ಯ ದಾಖಲೆ ಬರೆದಿದ್ದಾರೆ. ಅದು ಕೂಡ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ಅತ್ಯಂತ ಕಳಪೆ ದಾಖಲೆಯನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ. ಇನ್ನು ಈ ದಾಖಲೆಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಶ್ರೀಲಂಕಾದ ಮುತ್ತಯ್ಯ ಮುರಳೀಧರನ್.

1 / 7
ಬಾಂಗ್ಲಾದೇಶ್ ಪ್ರೀಮಿಯರ್ ಲೀಗ್​ನಲ್ಲಿ ನಡೆದ ರಂಗ್​ಪುರ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಶೂನ್ಯಕ್ಕೆ ಔಟ್ ಆಗುವುದರೊಂದಿಗೆ ಫಾರ್ಚೂನ್ ಬಾರಿಶಾಲ್ ತಂಡದ ನಾಯಕ ತಮೀಮ್ ಇಕ್ಬಾಲ್ (Tamim Iqbal) ಅನಗತ್ಯ ದಾಖಲೆ ಬರೆದಿದ್ದಾರೆ. ಅದು ಕೂಡ ವಿರಾಟ್ ಕೊಹ್ಲಿಯನ್ನು (Virat Kohli) ಹಿಂದಿಕ್ಕುವ ಮೂಲಕ ಎಂಬುದು ವಿಶೇಷ.

2 / 7
ಈ ಡಕ್​ ಔಟ್​​ನೊಂದಿಗೆ ಅತೀ ಹೆಚ್ಚು ಬಾರಿ ಶೂನ್ಯಕ್ಕೆ ಔಟಾಗಿರುವ ಸಕ್ರಿಯ ಆಟಗಾರರಲ್ಲಿ ಬಾಂಗ್ಲಾದೇಶ್ ಕ್ರಿಕೆಟಿಗ ತಮೀಮ್ ಇಕ್ಬಾಲ್ ಅಗ್ರಸ್ಥಾನಕ್ಕೇರಿದ್ದಾರೆ. ಇದಕ್ಕೂ ಮುನ್ನ ಈ ಪಟ್ಟಿಯಲ್ಲಿ ಟೀಮ್ ಇಂಡಿಯಾದ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದರು.

3 / 7
ವಿರಾಟ್ ಕೊಹ್ಲಿ 580 ಇನಿಂಗ್ಸ್​ಗಳಲ್ಲಿ ಒಟ್ಟು 35 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ಈ ಮೂಲಕ ಪ್ರಸ್ತುತ ಆಡುತ್ತಿರುವ ಆಟಗಾರರಲ್ಲಿ ಅತ್ಯಧಿಕ ಬಾರಿ ಸೊನ್ನೆ ಸುತ್ತಿದ ಬ್ಯಾಟರ್ ಎನಿಸಿಕೊಂಡಿದ್ದರು. ಇದೀಗ ಈ ಕಳಪೆ ದಾಖಲೆಯಲ್ಲಿ ತಮೀಮ್ ಇಕ್ಬಾಲ್ ಮುನ್ನುಗ್ಗಿದ್ದಾರೆ.

4 / 7
ಇದುವರೆಗೆ 452 ಇನಿಂಗ್ಸ್ ಆಡಿರುವ ಬಾಂಗ್ಲಾ ತಂಡದ ಎಡಗೈ ದಾಂಡಿಗ ತಮೀಮ್ ಇಕ್ಬಾಲ್ ಒಟ್ಟು 36 ಬಾರಿ ಡಕ್​ ಔಟ್ ಆಗಿದ್ದಾರೆ. ಈ ಮೂಲಕ ಅತ್ಯಧಿಕ ಬಾರಿ ಶೂನ್ಯಕ್ಕೆ ಔಟಾದ ಸಕ್ರಿಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

5 / 7
ಇನ್ನು ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವುದು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ. 497 ಇನಿಂಗ್ಸ್ ಆಡಿರುವ ಹಿಟ್​ಮ್ಯಾನ್ ಒಟ್ಟು 33 ಬಾರಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದಾರೆ.

6 / 7
ಹಾಗೆಯೇ ನಾಲ್ಕನೇ ಸ್ಥಾನದಲ್ಲಿ ಇಂಗ್ಲೆಂಡ್ ಬ್ಯಾಟರ್ ಜಾನಿ ಬೈರ್​ಸ್ಟೋವ್ ಇದ್ದು, 338 ಇನಿಂಗ್ಸ್​ಗಳಲ್ಲಿ ಕಣಕ್ಕಿಳಿದಿರುವ ಬೈರ್​ಸ್ಟೋವ್ ಒಟ್ಟು 31 ಬಾರಿ ರನ್​ ಕಲೆಹಾಕದೇ ಪೆವಿಲಿಯನ್​ಗೆ ಹಿಂತಿರುಗಿದ್ದಾರೆ.

7 / 7
ಇನ್ನು ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಕಳಪೆ ದಾಖಲೆ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ ಹೆಸರಿನಲ್ಲಿದೆ. 328 ಇನಿಂಗ್ಸ್​ಗಳಲ್ಲಿ ಬ್ಯಾಟಿಂಗ್​ ಮಾಡಿರುವ ಮುರಳೀಧರನ್ 59 ಬಾರಿ ಸೊನ್ನೆ ಸುತ್ತಿದ್ದಾರೆ. ಈ ಮೂಲಕ ಅತೀ ಹೆಚ್ಚು ಬಾರಿ ಡಕ್​ ಔಟ್ ಆದ ವಿಶ್ವ ದಾಖಲೆ ಬರೆದಿದ್ದಾರೆ.