Jasprit Bumrah: ಶ್ರೀನಾಥ್ ದಾಖಲೆ ಮುರಿಯುವ ಸನಿಹದಲ್ಲಿ ಬೂಮ್ ಬೂಮ್ ಬುಮ್ರಾ

India vs England 3rd Test: ಭಾರತ ಮತ್ತು ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯವು ನಾಳೆಯಿಂದ (ಫೆ.15) ಶುರುವಾಗಲಿದೆ. ರಾಜ್​ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಷಿಯೇಷನ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ವಿಶೇಷ ದಾಖಲೆ ಬರೆಯುವ ಅವಕಾಶ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಮುಂದಿದೆ.

TV9 Web
| Updated By: ಝಾಹಿರ್ ಯೂಸುಫ್

Updated on:Feb 14, 2024 | 3:06 PM

ಭಾರತ ಮತ್ತು ಇಂಗ್ಲೆಂಡ್ ನಡುವಣ 3ನೇ ಟೆಸ್ಟ್ ಪಂದ್ಯವು ಗುರುವಾರದಿಂದ ಶುರುವಾಗಲಿದೆ. ರಾಜ್​ಕೋಟ್​ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಟ್ರಂಪ್ ಕಾರ್ಡ್ ಜಸ್​ಪ್ರೀತ್ ಬುಮ್ರಾ (Jasprit Bumrah). ಏಕೆಂದರೆ ಬಾಝ್​ಬಾಲ್ ರಣತಂತ್ರಕ್ಕೆ ಇದೀಗ ಬೂಮ್​ಬಾಲ್ ಪ್ರತಿತಂತ್ರ ಸಿದ್ಧವಾಗಿದೆ.

1 / 7
ಈ ಪ್ರತಿತಂತ್ರದ ಫಲವೇ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಮುಗ್ಗರಿಸಿರುವುದು. ಈ ಪಂದ್ಯದ ಗೆಲುವಿನ ರೂವಾರಿ ಜಸ್​ಪ್ರೀತ್ ಬುಮ್ರಾ. ಮೊದಲ ಇನಿಂಗ್ಸ್​ನಲ್ಲಿ 6 ವಿಕೆಟ್ ಕಬಳಿಸಿದ್ದ ಬುಮ್ರಾ 2ನೇ ಇನಿಂಗ್ಸ್​ನಲ್ಲಿ 3 ವಿಕೆಟ್ ಉರುಳಿಸಿದ್ದರು. ಈ ಮೂಲಕ ಹಲವು ದಾಖಲೆಗಳನ್ನು ಬರೆದಿದ್ದರು.

2 / 7
ಇದೀಗ ಜಸ್​ಪ್ರೀತ್ ಬುಮ್ರಾ ಮತ್ತೊಂದು ದಾಖಲೆಯ ಹೊಸ್ತಿಲಲ್ಲಿದ್ದಾರೆ. ಅದು ಕೂಡ ಮೈಸೂರ್ ಎಕ್ಸ್​ಪ್ರೆಸ್ ಖ್ಯಾತಿಯ ಜಾವಗಲ್ ಶ್ರೀನಾಥ್ ಅವರ ದಾಖಲೆಯನ್ನು ಮುರಿಯುವ ಸನಿಹದಲ್ಲಿ ಎಂಬುದು ವಿಶೇಷ.

3 / 7
ಅಂದರೆ ಟೀಮ್ ಇಂಡಿಯಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ಬಾರಿ 5 ವಿಕೆಟ್ ಕಬಳಿಸಿದ ವೇಗದ ಬೌಲರ್​ಗಳ ಪಟ್ಟಿಯಲ್ಲಿ ಜಾವಗಲ್ ಶ್ರೀನಾಥ್ ದ್ವಿತೀಯ ಸ್ಥಾನದಲ್ಲಿದ್ದಾರೆ. ಒಟ್ಟು 13 ಬಾರಿ ಐದು ವಿಕೆಟ್ ಕಬಳಿಸಿ ಕನ್ನಡಿಗ ಈ ವಿಶೇಷ ದಾಖಲೆ ಬರೆದಿಟ್ಟಿದ್ದಾರೆ.

4 / 7
ಇತ್ತ ಜಸ್​ಪ್ರೀತ್ ಬುಮ್ರಾ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 12 ಬಾರಿ ಐದು ವಿಕೆಟ್​ಗಳನ್ನು ಕಬಳಿಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಇನಿಂಗ್ಸ್​ನಲ್ಲಿ ಬುಮ್ರಾ 5 ವಿಕೆಟ್ ಪಡೆದರೆ ಜಾವಗಲ್ ಶ್ರೀನಾಥ್ ಅವರ ದಾಖಲೆಯನ್ನು ಸರಿಗಟ್ಟಬಹುದು.

5 / 7
ಒಂದು ವೇಳೆ ಎರಡೂ ಇನಿಂಗ್ಸ್​ಗಳಲ್ಲಿ ಐದೈದು ವಿಕೆಟ್ ಕಬಳಿಸಿದ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ಬಾರಿ 5 ವಿಕೆಟ್ ಕಬಳಿಸಿದ ಟೀಮ್ ಇಂಡಿಯಾದ 2ನೇ ವೇಗಿ ಎಂಬ ದಾಖಲೆ ಜಸ್​ಪ್ರೀತ್ ಬುಮ್ರಾ ಪಾಲಾಗಲಿದೆ. ಹೀಗಾಗಿ ಮೂರನೇ ಟೆಸ್ಟ್ ಪಂದ್ಯದಲ್ಲಿ ಬೂಮ್ ಬೂಮ್ ಕಡೆಯಿಂದ ಭರ್ಜರಿ ದಾಖಲೆಯನ್ನು ನಿರೀಕ್ಷಿಸಬಹುದು.

6 / 7
ಇನ್ನು ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಬಾರಿ 5 ವಿಕೆಟ್ ಕಬಳಿಸಿದ ಟೀಮ್ ಇಂಡಿಯಾದ ವೇಗದ ಬೌಲರ್​ ಕಪಿಲ್ ದೇವ್. ಭಾರತ ತಂಡದ ಮಾಜಿ ನಾಯಕ ಒಟ್ಟು 24 ಬಾರಿ 5 ವಿಕೆಟ್​ಗಳ ಸಾಧನೆ ಮಾಡಿದ್ದಾರೆ.

7 / 7

Published On - 11:23 am, Wed, 14 February 24

Follow us