ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಆರಂಭಿಕ ಆಟಗಾರ ಶುಭ್ಮನ್ ಗಿಲ್ ವಿಕೆಟ್ ಕಬಳಿಸುವ ಮೂಲಕ ಮೊದಲ ಯಶಸ್ಸು ಪಡೆದ ಮಿಚೆಲ್ ಸ್ಟಾರ್ಕ್, ಆ ಬಳಿಕ ರೋಹಿತ್ ಶರ್ಮಾಗೆ ಪೆವಿಲಿಯನ್ ಹಾದಿ ತೋರಿಸಿದ್ದರು. ಇದರ ಬೆನ್ನಲ್ಲೇ ಸೂರ್ಯಕುಮಾರ್ ಯಾದವ್ ಅವರನ್ನು ಎಲ್ಬಿ ಬಲೆಗೆ ಬೀಳಿಸಿದ್ದರು. ಆ ಬಳಿಕ ಕೆಎಲ್ ರಾಹುಲ್ ಹಾಗೂ ಮೊಹಮ್ಮದ್ ಸಿರಾಜ್ ವಿಕೆಟ್ ಪಡೆದರು. 8 ಓವರ್ ಬೌಲಿಂಗ್ ಮಾಡಿದ್ದ ಸ್ಟಾರ್ಕ್ 53 ರನ್ ನೀಡಿ 5 ವಿಕೆಟ್ ಕಬಳಿಸಿ ಮಿಂಚಿದ್ದರು.