Mitchell Starc: ಟೀಮ್ ಇಂಡಿಯಾ ವಿರುದ್ಧ 5 ವಿಕೆಟ್ ಉರುಳಿಸಿ ಟಾಪ್-3 ಗೆ ಎಂಟ್ರಿ ಕೊಟ್ಟ ಮಿಚೆಲ್ ಸ್ಟಾರ್ಕ್​

| Updated By: ಝಾಹಿರ್ ಯೂಸುಫ್

Updated on: Mar 19, 2023 | 10:08 PM

Most five-wicket haul in ODI: ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಆರಂಭಿಕ ಆಟಗಾರ ಶುಭ್​ಮನ್ ಗಿಲ್ ವಿಕೆಟ್ ಕಬಳಿಸುವ ಮೂಲಕ ಮೊದಲ ಯಶಸ್ಸು ಪಡೆದ ಮಿಚೆಲ್ ಸ್ಟಾರ್ಕ್​, ಆ ಬಳಿಕ ರೋಹಿತ್ ಶರ್ಮಾಗೆ ಪೆವಿಲಿಯನ್ ಹಾದಿ ತೋರಿಸಿದ್ದರು.

1 / 9
ಭಾರತದ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯ 2ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು 10 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಕಲೆಹಾಕಿದ್ದು ಕೇವಲ 117 ರನ್​ ಮಾತ್ರ. ಆಸೀಸ್ ವೇಗಿ ಮಿಚೆಲ್ ಸ್ಟಾರ್ಕ್ ಅವರ ಮಾರಕ ದಾಳಿಗೆ ತತ್ತರಿಸಿದ ಭಾರತ ತಂಡವು ಅತ್ಯಲ್ಪ ಮೊತ್ತಕ್ಕೆ ಆಲೌಟ್ ಆಯಿತು.

2 / 9
ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಆರಂಭಿಕ ಆಟಗಾರ ಶುಭ್​ಮನ್ ಗಿಲ್ ವಿಕೆಟ್ ಕಬಳಿಸುವ ಮೂಲಕ ಮೊದಲ ಯಶಸ್ಸು ಪಡೆದ ಮಿಚೆಲ್ ಸ್ಟಾರ್ಕ್​, ಆ ಬಳಿಕ ರೋಹಿತ್ ಶರ್ಮಾಗೆ ಪೆವಿಲಿಯನ್ ಹಾದಿ ತೋರಿಸಿದ್ದರು. ಇದರ ಬೆನ್ನಲ್ಲೇ ಸೂರ್ಯಕುಮಾರ್ ಯಾದವ್ ಅವರನ್ನು ಎಲ್​ಬಿ ಬಲೆಗೆ ಬೀಳಿಸಿದ್ದರು. ಆ ಬಳಿಕ ಕೆಎಲ್ ರಾಹುಲ್ ಹಾಗೂ ಮೊಹಮ್ಮದ್ ಸಿರಾಜ್ ವಿಕೆಟ್ ಪಡೆದರು. 8 ಓವರ್​ ಬೌಲಿಂಗ್ ಮಾಡಿದ್ದ ಸ್ಟಾರ್ಕ್​ 53 ರನ್ ನೀಡಿ 5 ವಿಕೆಟ್ ಕಬಳಿಸಿ ಮಿಂಚಿದ್ದರು.

3 / 9
ಈ 5 ವಿಕೆಟ್​ಗಳೊಂದಿಗೆ ಏಕದಿನ ಕ್ರಿಕೆಟ್​ನಲ್ಲಿ ಅತ್ಯಧಿಕ ಬಾರಿ ಐದು ವಿಕೆಟ್​ಗಳನ್ನು ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಮಿಚೆಲ್ ಸ್ಟಾರ್ಕ್​ 3ನೇ ಸ್ಥಾನಕ್ಕೇರಿದ್ದಾರೆ. ಅಲ್ಲದೆ ಆಸೀಸ್ ತಂಡದ ಮಾಜಿ ವೇಗಿ ಬ್ರೆಟ್ ಲೀ ಅವರ ದಾಖಲೆಯನ್ನು ಕೂಡ ಸರಿಗಟ್ಟಿದ್ದಾರೆ. ಏಕದಿನ ಕ್ರಿಕೆಟ್​ನಲ್ಲಿ ಅತ್ಯಧಿಕ ಬಾರಿ 5 ವಿಕೆಟ್ ಪಡೆದ ಬೌಲರ್​ಗಳ ಪಟ್ಟಿ ಈ ಕೆಳಗಿನಂತಿದೆ...

4 / 9
1- ವಾಖರ್ ಯೂನಿಸ್ (ಪಾಕಿಸ್ತಾನ್): ಪಾಕ್ ತಂಡದ ಮಾಜಿ ನಾಯಕ ವಾಖರ್ ಯೂನಿಸ್ 262 ಏಕದಿನ ಪಂದ್ಯಗಳನ್ನಾಡಿದ್ದರು. ಈ ವೇಳೆ 13 ಬಾರಿ 5 ವಿಕೆಟ್ ಕಬಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

5 / 9
2- ಮುತ್ತಯ್ಯ ಮುರಳೀಧರನ್ (ಶ್ರೀಲಂಕಾ): ಲಂಕಾ ತಂಡದ ಮಾಜಿ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ 350 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 10 ಬಾರಿ 5 ವಿಕೆಟ್ ಕಬಳಿಸಿ ಮಿಂಚಿದ್ದರು.

6 / 9
3- ಮಿಚೆಲ್ ಸ್ಟಾರ್ಕ್​ (ಆಸ್ಟ್ರೇಲಿಯಾ): ಟೀಮ್ ಇಂಡಿಯಾ ವಿರುದ್ಧ 5 ವಿಕೆಟ್ ಕಬಳಿಸುವ ಮೂಲಕ ಆಸೀಸ್ ವೇಗಿ ಸ್ಟಾರ್ಕ್​ ಈ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದ್ದಾರೆ. ಒಟ್ಟು 109 ಏಕದಿನ ಪಂದ್ಯಗಳನ್ನಾಡಿರುವ ಮಿಚೆಲ್ ಸ್ಟಾರ್ಕ್​ 9 ಬಾರಿ 5 ವಿಕೆಟ್​ಗಳನ್ನು ಕಬಳಿಸಿದ್ದಾರೆ.

7 / 9
4- ಬ್ರೇಟ್ ಲೀ (ಆಸ್ಟ್ರೇಲಿಯಾ): 221 ಏಕದಿನ ಪಂದ್ಯಗಳನ್ನಾಡಿರುವ ಆಸ್ಟ್ರೇಲಿಯಾ ಮಾಜಿ ವೇಗಿ ಬ್ರೇಟ್ ಲೀ ಒಟ್ಟು 9 ಬಾರಿ 5 ವಿಕೆಟ್​ಗಳ ಸಾಧನೆ ಮಾಡಿದ್ದಾರೆ.

8 / 9
5- ಶಾಹಿದ್ ಅಫ್ರಿದಿ (ಪಾಕಿಸ್ತಾನ್): ಪಾಕ್ ತಂಡದ ಮಾಜಿ ನಾಯಕ ಶಾಹಿದ್ ಅಫ್ರಿದಿ 398 ಏಕದಿನ ಪಂದ್ಯಗಳನ್ನಾಡಿದ್ದು, ಈ ವೇಳೆ 9 ಬಾರಿ 5 ವಿಕೆಟ್ ಕಬಳಿಸಿ ಮಿಂಚಿದ್ದರು.

9 / 9
ಇದೀಗ ಕೇವಲ 109 ಏಕದಿನ ಪಂದ್ಯಗಳ ಮೂಲಕ 9 ಬಾರಿ 5 ವಿಕೆಟ್​​ಗಳ ಸಾಧನೆ ಮಾಡಿರುವ ಮಿಚೆಲ್ ಸ್ಟಾರ್ಕ್​ಗೆ ವಾಖರ್ ಯೂನಿಸ್ ಅವರ ವಿಶ್ವ ದಾಖಲೆ ಮುರಿಯಲು ಬೇಕಿರುವುದು 5 ವಿಕೆಟ್​ಗಳ ಐದು ಗುಚ್ಛಗಳು ಮಾತ್ರ. ಹೀಗಾಗಿ ಮುಂಬರುವ ಏಕದಿನ ವಿಶ್ವಕಪ್​ನಲ್ಲಿ ಈ ದಾಖಲೆಯನ್ನು ಮುರಿಯಲಿದ್ದಾರಾ ಕಾದು ನೋಡಬೇಕಿದೆ.