Updated on: May 30, 2023 | 2:14 AM
IPL 2023: ಐಪಿಎಲ್ನ 16ನೇ ಆವೃತ್ತಿಗೆ ತೆರೆ ಬಿದ್ದಿದೆ. ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮಣಿಸಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ.
ಇದರೊಂದಿಗೆ ಕಳೆದ 2 ತಿಂಗಳಿಂದ ಮನರಂಜನೆಯ ರಸದೌತಣ ಒದಗಿಸಿದ್ದ ಐಪಿಎಲ್ ಮುಕ್ತಾಯಗೊಂಡಿದೆ. ವಿಶೇಷ ಎಂದರೆ ಈ ಬಾರಿಯ ಐಪಿಎಲ್ ಸಿಡಿಲಬ್ಬರದ ಬ್ಯಾಟಿಂಗ್ಗೆ ಸಾಕ್ಷಿಯಾಗಿತ್ತು.
ಅದರಲ್ಲೂ ಅನುಭವಿ ಆಟಗಾರರೊಂದಿಗೆ ಯುವ ಆಟಗಾರರು ಕೂಡ ಅಬ್ಬರಿಸಿದ್ದರು. ಹೀಗೆ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ಅತೀ ಹೆಚ್ಚು ಫೋರ್ಗಳನ್ನು ಬಾರಿಸಿದ ಆಟಗಾರರ ಪಟ್ಟಿ ಇಲ್ಲಿದೆ....
1- ಶುಭ್ಮನ್ ಗಿಲ್: ಈ ಬಾರಿ 17 ಪಂದ್ಯಗಳಲ್ಲಿ ಬ್ಯಾಟ್ ಬೀಸಿರುವ ಗುಜರಾತ್ ಟೈಟಾನ್ಸ್ ತಂಡದ ಆರಂಭಿಕ ಆಟಗಾರ ಶುಭ್ಮನ್ ಗಿಲ್ ಒಟ್ಟು 85 ಫೋರ್ಗಳನ್ನು ಬಾರಿಸಿದ್ದಾರೆ. ಈ ಮೂಲಕ ಐಪಿಎಲ್ 2023 ರಲ್ಲಿ ಅತೀ ಹೆಚ್ಚು ಫೋರ್ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.
2- ಯಶಸ್ವಿ ಜೈಸ್ವಾಲ್: ರಾಜಸ್ಥಾನ್ ರಾಯಲ್ಸ್ ತಂಡದ ಸ್ಪೋಟಕ ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್ 14 ಪಂದ್ಯಗಳಲ್ಲಿ 82 ಫೋರ್ಗಳನ್ನು ಬಾರಿಸಿದ್ದಾರೆ.
3- ಡೆವೊನ್ ಕಾನ್ವೆ: ಸಿಎಸ್ಕೆ ತಂಡದ ಆರಂಭಿಕ ಆಟಗಾರ ಡೆವೊನ್ ಕಾನ್ವೆ 15 ಇನಿಂಗ್ಸ್ಗಳಲ್ಲಿ ಒಟ್ಟು 77 ಫೋರ್ಗಳನ್ನು ಬಾರಿಸಿದ್ದಾರೆ.
4- ಡೇವಿಡ್ ವಾರ್ನರ್: ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ವಾರ್ನರ್ 14 ಪಂದ್ಯಗಳಲ್ಲಿ ಒಟ್ಟು 69 ಫೋರ್ಸ್ ಬಾರಿಸಿದ್ದಾರೆ.
5- ಸೂರ್ಯಕುಮಾರ್ ಯಾದವ್: ಮುಂಬೈ ಇಂಡಿಯನ್ಸ್ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್ ಸೂರ್ಯಕುಮಾರ್ ಯಾದವ್ 16 ಇನಿಂಗ್ಸ್ಗಳಲ್ಲಿ 65 ಫೋರ್ಗಳನ್ನು ಬಾರಿಸಿ ಮಿಂಚಿದ್ದಾರೆ.