ಶುಭ್​ಮನ್ ಗಿಲ್​ಗೆ ಅಗ್ರಸ್ಥಾನ, ದ್ವಿತೀಯ ಸ್ಥಾನದಲ್ಲಿ ವಿರಾಟ್ ಕೊಹ್ಲಿ

| Updated By: ಝಾಹಿರ್ ಯೂಸುಫ್

Updated on: Jan 07, 2024 | 10:44 AM

Virat Kohli: ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ 2023 ರಲ್ಲಿ ಕೇವಲ 36 ಅಂತಾರಾಷ್ಟ್ರೀಯ ಇನಿಂಗ್ಸ್ ಆಡಿದ್ದಾರೆ. ಈ ವೇಳೆ 8 ಭರ್ಜರಿ ಶತಕ ಹಾಗೂ 10 ಅರ್ಧಶತಕಗಳನ್ನು ಬಾರಿಸಿ ಅಬ್ಬರಿಸಿದ್ದಾರೆ. ಈ ಮೂಲಕ ಕಳೆದ ವರ್ಷ ಅತೀ ಹೆಚ್ಚು ಶತಕ ಸಿಡಿಸಿದ ಸೆಂಚುರಿ ಸರದಾರ ಎನಿಸಿಕೊಂಡಿದ್ದಾರೆ.

1 / 6
2023 ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್​ಗಳ ಪಟ್ಟಿ ಬಿಡುಗಡೆಯಾಗಿದೆ. ಈ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳಲ್ಲಿರುವುದು ಟೀಮ್ ಇಂಡಿಯಾ ಆಟಗಾರರು ಎಂಬುದು ವಿಶೇಷ. ಹಾಗಿದ್ರೆ ಕಳೆದ ವರ್ಷ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್ ಗಳಿಸಿದ ಬ್ಯಾಟರ್​ಗಳು ಯಾರೆಲ್ಲಾ ಎಂದು ನೋಡೋಣ...

2 / 6
1- ಶುಭ್​ಮನ್ ಗಿಲ್: ಭಾರತ ತಂಡದ ಯುವ ಆರಂಭಿಕ ಆಟಗಾರ ಕಳೆದ ವರ್ಷ ಒಟ್ಟು 52 ಇನಿಂಗ್ಸ್​ ಆಡಿದ್ದಾರೆ. ಈ ವೇಳೆ 7 ಶತಕ ಹಾಗೂ 10 ಅರ್ಧಶತಕಗಳೊಂದಿಗೆ ಒಟ್ಟು 2154 ರನ್​ ಕಲೆಹಾಕಿ 2023ರ ಟಾಪ್ ಸ್ಕೋರರ್ ಎನಿಸಿಕೊಂಡಿದ್ದಾರೆ.

3 / 6
2- ವಿರಾಟ್ ಕೊಹ್ಲಿ: ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ 2023 ರಲ್ಲಿ 36 ಇನಿಂಗ್ಸ್ ಆಡಿದ್ದಾರೆ. ಈ ವೇಳೆ 8 ಶತಕ ಹಾಗೂ 10 ಅರ್ಧಶತಕಗಳನ್ನು ಬಾರಿಸಿ ಮಿಂಚಿದ್ದಾರೆ. ಈ ಮೂಲಕ ಒಟ್ಟು 2048 ರನ್ ಪೇರಿಸಿ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ.

4 / 6
3- ಡೇರಿಲ್ ಮಿಚೆಲ್: ನ್ಯೂಝಿಲೆಂಡ್ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್ ಡೇರಿಲ್ ಮಿಚೆಲ್ ಕಳೆದ ವರ್ಷ 55 ಇನಿಂಗ್ಸ್​ ಆಡಿದ್ದು, ಈ ವೇಳೆ 6 ಶತಕ ಹಾಗೂ 9 ಅರ್ಧಶತಕಗಳೊಂದಿಗೆ 1989 ರನ್ ಪೇರಿಸಿದ್ದಾರೆ.

5 / 6
4- ರೋಹಿತ್ ಶರ್ಮಾ: ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ 2023 ರಲ್ಲಿ 39 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 4 ಶತಕ ಹಾಗೂ 11 ಅರ್ಧಶತಕಗಳೊಂದಿಗೆ ಒಟ್ಟು 1800	ರನ್ ಕಲೆಹಾಕಿದ್ದಾರೆ.

6 / 6
5- ಟ್ರಾವಿಸ್ ಹೆಡ್: ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ ಕಳೆದ ವರ್ಷ 42 ಇನಿಂಗ್ಸ್​ಗಳನ್ನಾಡಿದ್ದಾರೆ. ಈ ವೇಳೆ 3 ಶತಕ ಹಾಗೂ 9 ಅರ್ಧಶತಕಗಳೊಂದಿಗೆ ಒಟ್ಟು 1698 ರನ್​ಗಳಿಸಿದ್ದಾರೆ.