Updated on:Sep 11, 2022 | 6:55 PM
ಅಫ್ಘಾನಿಸ್ತಾನ್ ವಿರುದ್ಧ ಚೊಚ್ಚಲ ಅಂತಾರಾಷ್ಟ್ರೀಯ ಟಿ20 ಶತಕ ಸಿಡಿಸಿ ಮಿಂಚಿದ್ದ ವಿರಾಟ್ ಕೊಹ್ಲಿ ಹಲವು ದಾಖಲೆಗಳನ್ನು ಕೂಡ ನಿರ್ಮಿಸಿದ್ದರು. ಕೇವಲ 61 ಎಸೆತಗಳಲ್ಲಿ 122 ರನ್ ಬಾರಿಸುವ ಮೂಲಕ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಕೂಡ ತಮ್ಮದಾಗಿಸಿಕೊಂಡಿದ್ದರು.
ವಿಶೇಷ ಎಂದರೆ ಈ ಪಂದ್ಯಶ್ರೇಷ್ಠ ಪ್ರಶಸ್ತಿಯೊಂದಿಗೆ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸುವತ್ತ ದಾಪುಗಾಲಿಟ್ಟಿದ್ದಾರೆ. ಅಂದರೆ ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದ ಆಟಗಾರರ ಪಟ್ಟಿಯಲ್ಲಿ ಕೊಹ್ಲಿ ಅಗ್ರಸ್ಥಾನ ಅಲಂಕರಿಸಿದ್ದಾರೆ.
ಅದು ಕೂಡ ಅಫ್ಘಾನಿಸ್ತಾನ್ ತಂಡದ ನಾಯಕ ಮೊಹಮ್ಮದ್ ನಬಿ ಅವರ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ. ಹಾಗಿದ್ರೆ ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದ ಆಟಗಾರರು ಯಾರೆಲ್ಲಾ ನೋಡೋಣ...
ವಿರಾಟ್ ಕೊಹ್ಲಿ: ಕಿಂಗ್ ಕೊಹ್ಲಿ ಇದುವರೆಗೆ ಟಿ20 ಕ್ರಿಕೆಟ್ನಲ್ಲಿ 13 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದು ವಿಶ್ವ ದಾಖಲೆ ನಿರ್ಮಿಸಿದ್ದಾರೆ.
ಮೊಹಮ್ಮದ್ ನಬಿ: ಅಫ್ಘಾನಿಸ್ತಾನ್ ತಂಡದ ನಾಯಕ ಮೊಹಮ್ಮದ್ ನಬಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 13 ಬಾರಿ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದು ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಕೊಹ್ಲಿ ಸರಿಗಟ್ಟಿರುವುದು ವಿಶೇಷ.
ರೋಹಿತ್ ಶರ್ಮಾ: ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಹಿಟ್ಮ್ಯಾನ್ ಟಿ20 ಕ್ರಿಕೆಟ್ನಲ್ಲಿ 11 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ.
ಶಾಹಿದ್ ಅಫ್ರಿದಿ: ಪಾಕಿಸ್ತಾನ್ ತಂಡದ ಮಾಜಿ ನಾಯಕ ಅಫ್ರಿದಿ ಕೂಡ ಟಿ20 ಕ್ರಿಕೆಟ್ನಲ್ಲಿ 11 ಬಾರಿ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿಯನ್ನು ಪಡೆದಿದ್ದರು.
ಮೊಹಮ್ಮದ್ ಹಫೀಜ್: ಪಾಕಿಸ್ತಾನ್ ತಂಡದ ಮಾಜಿ ಆಲ್ರೌಂಡರ್ ಹಫೀಜ್ ಕೂಡ ಟಿ20 ಕ್ರಿಕೆಟ್ನಲ್ಲಿ 11 ಬಾರಿ ಪಂದ್ಯ ಶ್ರೇಷ್ಠರಾಗಿ ಹೊರಹೊಮ್ಮಿದ್ದರು.
ಸದ್ಯ 13 ಬಾರಿ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆಯುವ ಮೂಲಕ ವಿರಾಟ್ ಕೊಹ್ಲಿ ಅಫ್ಘಾನ್ ಆಟಗಾರ ಮೊಹಮ್ಮದ್ ನಬಿ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಮುಂಬರುವ ಸರಣಿಯಲ್ಲಿ ಕೊಹ್ಲಿ ಒಂದು ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರೆ ಹೊಸ ವಿಶ್ವ ದಾಖಲೆ ನಿರ್ಮಾಣವಾಗಲಿದೆ.
Published On - 6:54 pm, Sun, 11 September 22