ಇನ್ನು ಸೌತ್ ಆಫ್ರಿಕಾ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಶತಕ ಬಾರಿಸಿ ಮಿಂಚಿದ್ದರು. ಈ ಶತಕದೊಂದಿಗೆ ಒಂದು ವರ್ಷದಲ್ಲಿ ಅತ್ಯಧಿಕ ಸೆಂಚುರಿ ಬಾರಿಸಿದ ತಂಡವೆಂಬ ಹಿರಿಮೆಗೂ ಟೀಮ್ ಇಂಡಿಯಾ ಪಾತ್ರವಾಗಿದೆ. ಭಾರತೀಯ ಬ್ಯಾಟರ್ಗಳು ಈ ವರ್ಷ ಬರೋಬ್ಬರಿ 19 ಶತಕಗಳನ್ನು ಬಾರಿಸಿ ಈ ದಾಖಲೆ ನಿರ್ಮಿಸಿದ್ದಾರೆ.