Year Ender: ಆಸ್ಟ್ರೇಲಿಯಾದ ದಾಖಲೆ ಮುರಿದ ಟೀಮ್ ಇಂಡಿಯಾ

| Updated By: ಝಾಹಿರ್ ಯೂಸುಫ್

Updated on: Dec 23, 2023 | 2:38 PM

Team India: ಸೌತ್ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 2 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಈ ಎರಡು ಗೆಲುವುಗಳೊಂದಿಗೆ ಒಂದು ಕ್ಯಾಲೆಂಡರ್ ವರ್ಷದಲ್ಲಿ ಅತ್ಯಧಿಕ ಏಕದಿನ ಪಂದ್ಯಗಳನ್ನು ಗೆದ್ದ ವಿಶ್ವದ 2ನೇ ತಂಡವೆಂಬ ದಾಖಲೆ ಟೀಮ್ ಇಂಡಿಯಾ ಪಾಲಾಗಿದೆ.

1 / 7
ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಯನ್ನು ಟೀಮ್ ಇಂಡಿಯಾ 2-1 ಅಂತರದಿಂದ ಗೆದ್ದುಕೊಂಡಿದೆ. ಈ ಗೆಲುವಿನೊಂದಿಗೆ ಭಾರತ ತಂಡವು ವಿಶೇಷ ದಾಖಲೆಯೊಂದನ್ನು ಕೂಡ ತನ್ನದಾಗಿಸಿಕೊಂಡಿದೆ. ಆ ದಾಖಲೆ ಯಾವುದು? ವಿಶ್ವ ದಾಖಲೆ ಯಾವ ತಂಡದ ಹೆಸರಿನಲ್ಲಿದೆ ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ...

2 / 7
ಸೌತ್ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಸರಣಿಯಲ್ಲಿ ಟೀಮ್ ಇಂಡಿಯಾ 2 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಈ ಎರಡು ಗೆಲುವುಗಳೊಂದಿಗೆ ಒಂದು ಕ್ಯಾಲೆಂಡರ್ ವರ್ಷದಲ್ಲಿ ಅತ್ಯಧಿಕ ಏಕದಿನ ಪಂದ್ಯಗಳನ್ನು ಗೆದ್ದ ವಿಶ್ವದ 2ನೇ ತಂಡವೆಂಬ ಹಿರಿಮೆ ಭಾರತ ತಂಡದ ಪಾಲಾಗಿದೆ.

3 / 7
ಭಾರತ ತಂಡವು ಈ ವರ್ಷ ಬರೋಬ್ಬರಿ 27 ಏಕದಿನ ಪಂದ್ಯಗಳನ್ನು ಗೆದ್ದುಕೊಂಡಿದೆ. ಇದಕ್ಕೂ ಮುನ್ನ 1999 ರಲ್ಲಿ ಆಸ್ಟ್ರೇಲಿಯಾ 26 ಏಕದಿನ ಪಂದ್ಯಗಳನ್ನು ಗೆದ್ದು ದಾಖಲೆ ಬರೆದಿತ್ತು. ಇದೀಗ ಈ ದಾಖಲೆಯನ್ನು ಮುರಿದು ಭಾರತ ತಂಡ 2ನೇ ಸ್ಥಾನಕ್ಕೇರಿದೆ.

4 / 7
ಇನ್ನು ಒಂದು ವರ್ಷದೊಳಗೆ ಅತ್ಯಧಿಕ ಏಕದಿನ ಪಂದ್ಯಗಳನ್ನು ಗೆದ್ದ ವಿಶ್ವ ದಾಖಲೆ ಆಸ್ಟ್ರೇಲಿಯಾ ತಂಡದ ಹೆಸರಿನಲ್ಲಿದೆ. 2003 ರಲ್ಲಿ ರಿಕಿ ಪಾಂಟಿಂಗ್ ನಾಯಕತ್ವದ ಆಸ್ಟ್ರೇಲಿಯಾ ಪಡೆ ಬರೋಬ್ಬರಿ 30 ಪಂದ್ಯಗಳಲ್ಲಿ ಜಯ ಸಾಧಿಸಿತ್ತು. ಈ ಮೂಲಕ ವಿಶ್ವ ದಾಖಲೆ ಬರೆದಿದ್ದರು.

5 / 7
ಇದೀಗ 2023 ರಲ್ಲಿ ಒಟ್ಟು 27 ಏಕದಿನ ಪಂದ್ಯಗಳನ್ನು ಗೆಲ್ಲುವ ಮೂಲಕ ಟೀಮ್ ಇಂಡಿಯಾ ಈ ವಿಶೇಷ ದಾಖಲೆಯ ಪಟ್ಟಿಗೆ ಸೇರ್ಪಡೆಯಾಗಿರುವುದು ವಿಶೇಷ.

6 / 7
ಇನ್ನು ಸೌತ್ ಆಫ್ರಿಕಾ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಶತಕ ಬಾರಿಸಿ ಮಿಂಚಿದ್ದರು. ಈ ಶತಕದೊಂದಿಗೆ ಒಂದು ವರ್ಷದಲ್ಲಿ ಅತ್ಯಧಿಕ ಸೆಂಚುರಿ ಬಾರಿಸಿದ ತಂಡವೆಂಬ ಹಿರಿಮೆಗೂ ಟೀಮ್ ಇಂಡಿಯಾ ಪಾತ್ರವಾಗಿದೆ. ಭಾರತೀಯ ಬ್ಯಾಟರ್​ಗಳು ಈ ವರ್ಷ ಬರೋಬ್ಬರಿ 19 ಶತಕಗಳನ್ನು ಬಾರಿಸಿ ಈ ದಾಖಲೆ ನಿರ್ಮಿಸಿದ್ದಾರೆ.

7 / 7
ಅಂದಹಾಗೆ ಈ ವರ್ಷ ಏಕದಿನ ಕ್ರಿಕೆಟ್​ನಲ್ಲಿ ಭಾರತದ ಪರ ಅತ್ಯಧಿಕ ಶತಕ ಸಿಡಿಸಿದ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ಕಿಂಗ್ ಕೊಹ್ಲಿ 2023 ರಲ್ಲಿ ಒಟ್ಟು 6 ಸೆಂಚುರಿಗಳನ್ನು ಸಿಡಿಸಿದ್ದಾರೆ. ಹಾಗೆಯೇ 2ನೇ ಸ್ಥಾನದಲ್ಲಿರುವ ಶುಭ್​ಮನ್ ಗಿಲ್ ಒಟ್ಟು 5 ಶತಕಗಳನ್ನು ಬಾರಿಸಿದ್ದಾರೆ.