ಟಿ20 ಕ್ರಿಕೆಟ್ನಲ್ಲಿ ಆಸ್ಟ್ರೇಲಿಯಾ ದಾಂಡಿಗ ಟ್ರಾವಿಸ್ ಹೆಡ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ಚುಟುಕು ಕ್ರಿಕೆಟ್ನ ಪವರ್ಪ್ಲೇನಲ್ಲಿ ಪವರ್ಫುಲ್ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಎಂಬುದು ವಿಶೇಷ. ಅಂದರೆ 2024 ರಲ್ಲಿ ಟಿ20 ಕ್ರಿಕೆಟ್ನ ಮೊದಲ 6 ಓವರ್ಗಳಲ್ಲಿ ಅತ್ಯಧಿಕ ರನ್ ಬಾರಿಸಿದ ಬ್ಯಾಟರ್ ಎಂಬ ದಾಖಲೆ ಹೆಡ್ ಪಾಲಾಗಿದೆ.