AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ತಂಡದಲ್ಲಿ ಇರದ ವಿರಾಟ್ ಕೊಹ್ಲಿಯೇ ನಂಬರ್ ೧

Virat Kohli Records: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಟಿ20 ಸರಣಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ಭರ್ಜರಿ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ಪ್ರಸ್ತುತ ಭಾರತ ಟಿ20 ತಂಡದಲ್ಲಿ ಇರದಿದ್ದರೂ, ಕಿಂಗ್ ಕೊಹ್ಲಿ ಇಂಡೊ-ಆಸೀಸ್ ರನ್ ಸರದಾರರ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on:Oct 28, 2025 | 12:03 PM

Share
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 12ನೇ ಟಿ20 ಸರಣಿಗೆ ವೇದಿಕೆ ಸಿದ್ಧವಾಗಿದೆ. ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಈ ಬಾರಿಯ ಟಿ20 ಸರಣಿಯಲ್ಲಿ ಒಟ್ಟು 5 ಪಂದ್ಯಗಳನ್ನಾಡಲಾಗುತ್ತದೆ. ಈ ಪಂದ್ಯಗಳ ಮೂಲಕ ಅತ್ಯಧಿಕ ರನ್​ ಗಳಿಸಿದರೆ ಗ್ಲೆನ್​ ಮ್ಯಾಕ್ಸ್​ವೆಲ್ ವಿರಾಟ್ ಕೊಹ್ಲಿಯ ದಾಖಲೆ ಮುರಿಯಬಹುದು.

1 / 5
ಅಂದರೆ ಭಾರತ ಮತ್ತು ಆಸ್ಟ್ರೇಲಿಯಾ ನಟುವಣ ಟಿ20 ಸರಣಿಯಲ್ಲಿ ಅತ್ಯಧಿಕ ರನ್​ ಕಲೆಹಾಕಿದ ದಾಖಲೆ ವಿರಾಟ್ ಕೊಹ್ಲಿಯ ಹೆಸರಿನಲ್ಲಿದೆ. ಕಿಂಗ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧ 23 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 22 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಅವರು ಒಟ್ಟು 794 ರನ್ ಕಲೆಹಾಕಿದ್ದಾರೆ.

2 / 5
ಆದರೆ ಈ ಬಾರಿಯ ಸರಣಿಯಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿಯುವುದಿಲ್ಲ. ಏಕೆಂದರೆ 2024ರ ಟಿ20 ವಿಶ್ವಕಪ್​ ಬೆನ್ನಲ್ಲೇ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯಲ್ಲಿ ಕಿಂಗ್ ಕೊಹ್ಲಿ ಕಾಣಿಸಿಕೊಳ್ಳುವುದಿಲ್ಲ.

3 / 5
ಇತ್ತ ವಿರಾಟ್ ಕೊಹ್ಲಿ ನಿವೃತ್ತಿಯಾಗಿರುವ ಕಾರಣ ಮುಂಬರುವ ಪಂದ್ಯಗಳ ಮೂಲಕ ಭಾರತ-ಆಸ್ಟ್ರೇಲಿಯಾ ಟಿ20 ಸರಣಿಯ ರನ್ ಸರದಾರ ಪಟ್ಟಿಯಲ್ಲಿ ಗ್ಲೆನ್​ ಮ್ಯಾಕ್ಸ್​ವೆಲ್​ಗೆ ಅಗ್ರಸ್ಥಾನಕ್ಕೇರಬಹುದು. ಅದಕ್ಕಾಗಿ ಅವರು ಬರೋಬ್ಬರಿ 221 ರನ್​ಗಳನ್ನು ಕಲೆಹಾಕಬೇಕಿದೆ.

4 / 5
ಭಾರತದ ವಿರುದ್ಧ ಈವರೆಗೆ 22 ಟಿ20 ಪಂದ್ಯಗಳನ್ನಾಡಿರುವ ಗ್ಲೆನ್ ಮ್ಯಾಕ್ಸ್​ವೆಲ್ ಒಟ್ಟು 574 ರನ್ ಕಲೆಹಾಕಿದ್ದಾರೆ. ಈ ವೇಳೆ 2 ಭರ್ಜರಿ ಶತಕ ಹಾಗೂ 2 ಅರ್ಧಶತಕಗಳನ್ನು ಸಹ ಸಿಡಿಸಿದ್ದಾರೆ. ಅದರಂತೆ ಮುಂಬರುವ ಪಂದ್ಯಗಳಲ್ಲಿ ಮ್ಯಾಕ್ಸ್​ವೆಲ್ ಭರ್ಜರಿ ಪ್ರದರ್ಶನ ನೀಡಿ 221 ರನ್​ಗಳಿಸಿದರೆ ಇಂಡೊ-ಆಸೀಸ್ ಟಿ20 ಸರಣಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ.

5 / 5

Published On - 12:03 pm, Tue, 28 October 25