ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಟೀಮ್ ಇಂಡಿಯಾದ ಯುವ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ ವಿಶೇಷ ದಾಖಲೆ ಬರೆದಿದ್ದಾರೆ. ಇದಾಗ್ಯೂ ವಿರಾಟ್ ಕೊಹ್ಲಿ ಹೆಸರಿನಲ್ಲಿರುವ ದಾಖಲೆ ಮುರಿಯುವ ಅವಕಾಶವನ್ನು ತಪ್ಪಿಸಿಕೊಂಡರು.
ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯಲ್ಲಿ ಒಂದು ಶತಕದೊಂದಿಗೆ ರುತುರಾಜ್ ಗಾಯಕ್ವಾಡ್ ಒಟ್ಟು 223 ರನ್ ಕಲೆಹಾಕಿದರು. ಈ ಮೂಲಕ ದ್ವಿಪಕ್ಷೀಯ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ರನ್ ಕಲೆಹಾಕಿದ ಮೂರನೇ ಬ್ಯಾಟರ್ ಎನಿಸಿಕೊಂಡರು.
ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿ ಕೆಎಲ್ ರಾಹುಲ್ ಇದ್ದು, ನ್ಯೂಝಿಲೆಂಡ್ ವಿರುದ್ಧದ ಸರಣಿಯಲ್ಲಿ ಕೆಎಲ್ಆರ್ 224 ರನ್ ಬಾರಿಸುವ ಮೂಲಕ ಈ ಸಾಧನೆ ಮಾಡಿದ್ದರು.
ಇನ್ನು ದ್ವಿಪಕ್ಷೀಯ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. 2021 ರಲ್ಲಿ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯಲ್ಲಿ ಕಿಂಗ್ ಕೊಹ್ಲಿ ಒಟ್ಟು 231 ರನ್ ಕಲೆಹಾಕಿದ್ದರು. ಈ ಮೂಲಕ ವಿಶೇಷ ದಾಖಲೆ ಬರೆದಿದ್ದರು.
ಈ ದಾಖಲೆಯನ್ನು ಮುರಿಯುವ ಉತ್ತಮ ಅವಕಾಶ ರುತುರಾಜ್ ಗಾಯಕ್ವಾಡ್ ಮುಂದಿತ್ತು. ಆದರೆ ಆಸ್ಟ್ರೇಲಿಯಾ ವಿರುದ್ದದ ಕೊನೆಯ ಟಿ20 ಪಂದ್ಯದಲ್ಲಿ ಕೇವಲ 10 ರನ್ಗಳಿಸಿ ಔಟ್ ಆಗುವ ಮೂಲಕ 8 ರನ್ಗಳಿಂದ ವಿಶೇಷ ದಾಖಲೆ ಬರೆಯುವ ಅವಕಾಶವನ್ನು ಕೈಚೆಲ್ಲಿಕೊಂಡರು.
Published On - 11:53 pm, Sun, 3 December 23