Team India: ಸೂರ್ಯನ ಸಿಡಿಲಬ್ಬರ: ದಾಖಲೆ ಬರೆದ ಟೀಮ್ ಇಂಡಿಯಾ

| Updated By: ಝಾಹಿರ್ ಯೂಸುಫ್

Updated on: Feb 20, 2022 | 9:06 PM

India vs West Indies 3rd T20: ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 184 ರನ್​ ಕಲೆಹಾಕಿದೆ.

1 / 5
ವೆಸ್ಟ್ ಇಂಡೀಸ್​ ವಿರುದ್ದದ ಕೊನೆಯ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಸೂರ್ಯ ಕುಮಾರ್ ಯಾದವ್ ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದಾರೆ. 15 ಓವರ್​ನಲ್ಲಿ 98 ರನ್​ಗಳಿಸಿದ್ದ ಟೀಮ್ ಇಂಡಿಯಾ ಬ್ಯಾಟ್ಸ್​ಮನ್​ಗಳು ಕೊನೆಯ ಐದು ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ್ದರು.

2 / 5
31 ಎಸೆತಗಳಲ್ಲಿ 65 ರನ್​ ಬಾರಿಸುವ ಮೂಲಕ ಸೂರ್ಯಕುಮಾರ್ ಯಾದವ್ ಟಿ20 ಕ್ರಿಕೆಟ್​ನಲ್ಲಿ ತಮ್ಮ 4ನೇ ಅರ್ಧಶತಕ ಪೂರೈಸಿದ್ದರು. ಈ ಸ್ಪೋಟಕ ಇನಿಂಗ್ಸ್​ನಲ್ಲಿ ಸೂರ್ಯಕುಮಾರ್ ಬ್ಯಾಟ್​ನಿಂದ ಸಿಡಿದದ್ದು ಬರೋಬ್ಬರಿ 7 ಭರ್ಜರಿ ಸಿಕ್ಸರ್​ಗಳು ಮತ್ತು ಏಕೈಕ ಫೋರ್.

3 / 5
ಅದರಲ್ಲೂ ಸೂರ್ಯಕುಮಾರ್ ಅವರ ಅಬ್ಬರಕ್ಕೆ ನಲುಗಿದ ವೆಸ್ಟ್ ಇಂಡೀಸ್ ಬೌಲರುಗಳು ಕೊನೆಯ 5 ಓವರ್​ಗಳಲ್ಲಿ ನೀಡಿದ್ದು ಬರೋಬ್ಬರಿ 86 ರನ್​ಗಳು. ಇದರೊಂದಿಗೆ ಟೀಮ್ ಇಂಡಿಯಾ ವಿಶೇಷ ದಾಖಲೆಯೊಂದನ್ನು ತನ್ನದಾಗಿಸಿಕೊಂಡಿತು.

4 / 5
ಹೌದು, ಡೆತ್​ ಓವರ್​ಗಳಲ್ಲಿ  (16-20) ಟೀಮ್ ಇಂಡಿಯಾ ಕಲೆಹಾಕಿದ ಗರಿಷ್ಠ ಸ್ಕೋರ್ ಇದಾಗಿದೆ. ಇದಕ್ಕೂ ಮುನ್ನ 2007 ರಲ್ಲಿ ಇಂಗ್ಲೆಂಡ್ ವಿರುದ್ದ ಭಾರತ ತಂಡವು ಕೊನೆಯ 5 ಓವರ್​ಗಳಲ್ಲಿ 80 ರನ್ ಬಾರಿಸಿದ್ದರು. ಇದೀಗ ಹಳೆಯ ದಾಖಲೆಯನ್ನು ಮುರಿದು ಹೊಸ ಇತಿಹಾಸ ನಿರ್ಮಿಸಿದ್ದಾರೆ.

5 / 5
 ಅದರಂತೆ ಕೊನೆಯ 30 ಎಸೆತಗಳಲ್ಲಿ 86 ರನ್​ ಬಾರಿಸುವ ಮೂಲಕ ಟೀಮ್ ಇಂಡಿಯಾ ಬ್ಯಾಟ್ಸ್​ಮನ್​ಗಳು ಟಿ20 ಕ್ರಿಕೆಟ್​ನಲ್ಲಿ ಹೊಸ ದಾಖಲೆ ಬರೆದಿದ್ದಾರೆ. ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 184 ರನ್​ ಕಲೆಹಾಕಿದೆ.