AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ತವರಿನಲ್ಲೇ ಟೀಂ ಇಂಡಿಯಾವನ್ನು ಮಣಿಸಿ ವಿಭಿನ್ನ ದಾಖಲೆ ಬರೆದ ಆಫ್ರಿಕನ್ನರು..!

IND vs SA: ಭಾರತದ ವಿರುದ್ಧ ನಡೆದ ಮೊದಲ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಬ್ಯಾಟ್ಸ್​ಮನ್​ಗಳು ಭಾರೀ ಸದ್ದು ಮಾಡಿ ರನ್ ಗಳಿಸಿದರು. ಜೊತೆಗೆ ಒಂದು ಪಂದ್ಯದಲ್ಲಿ ಹಲವು ಸಿಕ್ಸರ್ ಬಾರಿಸಿ ದಾಖಲೆ ನಿರ್ಮಿಸಿದ್ದರು.

ಪೃಥ್ವಿಶಂಕರ
|

Updated on:Jun 10, 2022 | 4:46 PM

Share
ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಗುರುವಾರ ರಾತ್ರಿ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆಯಿತು. ಈ ಪಂದ್ಯದಲ್ಲಿ ನಿರೀಕ್ಷೆಗೆ ವಿರುದ್ಧವಾಗಿ ದಕ್ಷಿಣ ಆಫ್ರಿಕಾ ಏಳು ವಿಕೆಟ್‌ಗಳಿಂದ ಭಾರತವನ್ನು ಸೋಲಿಸಿತು. ರಾಜಧಾನಿಯ ಕ್ರೀಡಾಂಗಣದಲ್ಲಿ ಉಭಯ ತಂಡಗಳಿಂದ ರನ್ ಮಳೆ ಸುರಿಯಿತು. ಆದರೆ ಈ ನಡುವೆ ಭಾರತದ ಬೌಲರ್‌ಗಳು ಮರೆಯಲಾಗದಂತಹ ಕಾರ್ಯವನ್ನು ದಕ್ಷಿಣ ಆಫ್ರಿಕಾ ಮಾಡಿದೆ.

1 / 5
ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಬ್ಯಾಟ್ಸ್‌ಮನ್‌ಗಳು ಭಾರತೀಯ ಬೌಲರ್‌ಗಳ ವಿರುದ್ಧ ತೀವ್ರವಾಗಿ ರನ್ ಗಳಿಸಿದರು. ಐದು ಎಸೆತಗಳು ಬಾಕಿ ಇರುವಂತೆ 212 ರನ್‌ಗಳ ಗುರಿಯನ್ನು ಸಾಧಿಸಿದರು. ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಬ್ಯಾಟ್ಸ್‌ಮನ್‌ಗಳು ಭಾರತೀಯ ಬೌಲರ್‌ಗಳ ಮೇಲೆ 14 ಸಿಕ್ಸರ್‌ಗಳನ್ನು ಬಾರಿಸಿದರು. T20 ಪಂದ್ಯದಲ್ಲಿ ಭಾರತದ ವಿರುದ್ಧ ಇನ್ನಿಂಗ್ಸ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳ ವಿಷಯದಲ್ಲಿ ಈ ಅಂಕಿ ಅಂಶವು ಎರಡನೇ ಸ್ಥಾನದಲ್ಲಿದೆ.

2 / 5
IND vs SA: ತವರಿನಲ್ಲೇ ಟೀಂ ಇಂಡಿಯಾವನ್ನು ಮಣಿಸಿ ವಿಭಿನ್ನ ದಾಖಲೆ ಬರೆದ ಆಫ್ರಿಕನ್ನರು..!

ವೆಸ್ಟ್ ಇಂಡೀಸ್ ತಂಡ ಮೊದಲ ಸ್ಥಾನದಲ್ಲಿದೆ. 2019ರಲ್ಲಿ ಭಾರತದ ವಿರುದ್ಧ ಆಡಿದ ಪಂದ್ಯದಲ್ಲಿ ವಿಂಡೀಸ್ 15 ಸಿಕ್ಸರ್‌ಗಳನ್ನು ಬಾರಿಸಿತ್ತು. ಇದು ಭಾರತದ ವಿರುದ್ಧ T20 ಪಂದ್ಯದಲ್ಲಿ ಸಿಡಿದಿರುವ ಅತಿ ಹೆಚ್ಚು ಸಿಕ್ಸರ್‌ಗಳಾಗಿವೆ.

3 / 5
IND vs SA: ತವರಿನಲ್ಲೇ ಟೀಂ ಇಂಡಿಯಾವನ್ನು ಮಣಿಸಿ ವಿಭಿನ್ನ ದಾಖಲೆ ಬರೆದ ಆಫ್ರಿಕನ್ನರು..!

ಈ ವಿಷಯದಲ್ಲಿ ವೆಸ್ಟ್ ಇಂಡೀಸ್ ತಂಡ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿದೆ. ವಿಂಡೀಸ್ 2019 ರಲ್ಲಿ ಸತತ ಎರಡು ಬಾರಿ ಭಾರತದ ವಿರುದ್ಧ ಎರಡು ಪಂದ್ಯಗಳಲ್ಲಿ ತಲಾ 12 ಸಿಕ್ಸರ್ಗಳನ್ನು ಬಾರಿಸಿದ್ದರು.

4 / 5
IND vs SA: ತವರಿನಲ್ಲೇ ಟೀಂ ಇಂಡಿಯಾವನ್ನು ಮಣಿಸಿ ವಿಭಿನ್ನ ದಾಖಲೆ ಬರೆದ ಆಫ್ರಿಕನ್ನರು..!

ಈ ಪಂದ್ಯದಲ್ಲಿ ಭಾರತದ ಬ್ಯಾಟ್ಸ್‌ಮನ್‌ಗಳು ದಕ್ಷಿಣ ಆಫ್ರಿಕಾದ ಬೌಲರ್‌ಗಳ ಮೇಲೆ 14 ಸಿಕ್ಸರ್‌ಗಳನ್ನು ಬಾರಿಸಿದ್ದು ಕಾಕತಾಳೀಯ ಸಂಗತಿಯಾಗಿದೆ. ಅಂದರೆ, ಈ ಪಂದ್ಯದಲ್ಲಿ ಒಟ್ಟು 28 ಸಿಕ್ಸರ್‌ಗಳಿದ್ದವು, ಅದರಲ್ಲಿ ದಕ್ಷಿಣ ಆಫ್ರಿಕಾದ ರಾಸಿ ವ್ಯಾನ್ ಡೆರ್ ದುಸೇನ್ ಮತ್ತು ಡೇವಿಡ್ ಮಿಲ್ಲರ್ ಹೆಚ್ಚು ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ. ಇಬ್ಬರೂ ತಲಾ ಐದು ಸಿಕ್ಸರ್ ಬಾರಿಸಿದರು.

5 / 5

Published On - 4:36 pm, Fri, 10 June 22

ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ