Updated on:Sep 25, 2022 | 5:53 PM
ಆಸ್ಟ್ರೇಲಿಯಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಕೇವಲ 20 ಎಸೆತಗಳಲ್ಲಿ 46 ಬಾರಿಸಿದ್ದ ಹಿಟ್ಮ್ಯಾನ್ 4 ಭರ್ಜರಿ ಸಿಕ್ಸ್ಗಳನ್ನು ಕೂಡ ಸಿಡಿಸಿದ್ದರು.
ವಿಶೇಷ ಎಂದರೆ ಈ 4 ಸಿಕ್ಸ್ಗಳೊಂದಿಗೆ ರೋಹಿತ್ ಶರ್ಮಾ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ನಾಯಕನಾಗಿ ಎಂಬುದು ವಿಶೇಷ. ಅಂದರೆ ಟಿ20 ಕ್ರಿಕೆಟ್ನಲ್ಲಿ ನಾಯಕನಾಗಿ ಒಂದು ವರ್ಷದಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ಆಟಗಾರ ಎಂಬ ವಿಶ್ವ ದಾಖಲೆ ಇದೀಗ ರೋಹಿತ್ ಶರ್ಮಾ ಪಾಲಾಗಿದೆ.
ಇದಕ್ಕೂ ಮುನ್ನ ಈ ದಾಖಲೆ ಆಸ್ಟ್ರೇಲಿಯಾ ನಾಯಕ ಆರೋನ್ ಫಿಂಚ್ ಹೆಸರಿನಲ್ಲಿತ್ತು. 2018 ರಲ್ಲಿ ಫಿಂಚ್ ಬರೋಬ್ಬರಿ 25 ಸಿಕ್ಸ್ ಸಿಡಿಸಿದ್ದರು. ಇದೀಗ ಈ ದಾಖಲೆಯನ್ನು ಮುರಿದು ರೋಹಿತ್ ಶರ್ಮಾ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಹಾಗಿದ್ರೆ ಟಿ20 ಕ್ರಿಕೆಟ್ನಲ್ಲಿ ಒಂದು ವರ್ಷದಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ನಾಯಕರುಗಳು ಯಾರೆಲ್ಲಾ ನೋಡೋಣ...
1- ರೋಹಿತ್ ಶರ್ಮಾ: ಹಿಟ್ಮ್ಯಾನ್ ಈ ವರ್ಷ ಟಿ20 ಕ್ರಿಕೆಟ್ನಲ್ಲಿ ಬರೋಬ್ಬರಿ 26 ಸಿಕ್ಸ್ ಸಿಡಿಸಿದ್ದಾರೆ. ಈ ಮೂಲಕ ಚುಟುಕು ಕ್ರಿಕೆಟ್ನಲ್ಲಿ ಒಂದು ವರ್ಷದಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿ ಕ್ಯಾಪ್ಟನ್ ಎಂಬ ವಿಶ್ವ ದಾಖಲೆ ನಿರ್ಮಿಸಿದ್ದಾರೆ.
2- ಆರೋನ್ ಫಿಂಚ್: ಆಸ್ಟ್ರೇಲಿಯಾ ನಾಯಕ ಆರೋನ್ ಫಿಂಚ್ 2018 ರಲ್ಲಿ 25 ಸಿಕ್ಸ್ ಬಾರಿಸುವ ಮೂಲಕ ಮಿಂಚಿದ್ದರು.
3- ವಿರಾಟ್ ಕೊಹ್ಲಿ: ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ 2019 ರಲ್ಲಿ ಟಿ20 ಕ್ರಿಕೆಟ್ನಲ್ಲಿ 23 ಸಿಕ್ಸ್ ಬಾರಿಸಿ ದಾಖಲೆ ಬರೆದಿದ್ದರು.
4- ದಸುನ್ ಶನಕ: ಶ್ರೀಲಂಕಾ ತಂಡದ ನಾಯಕ ದುಸನ್ ಶನಕ ಈ ವರ್ಷ ಟಿ20 ಕ್ರಿಕೆಟ್ನಲ್ಲಿ ಬರೋಬ್ಬರಿ 21 ಸಿಕ್ಸ್ ಸಿಡಿಸಿ ಮಿಂಚಿದ್ದಾರೆ.
5- ಕ್ವಿಂಟನ್ ಡಿಕಾಕ್: ಸೌತ್ ಆಫ್ರಿಕಾ ತಂಡದ ಮಾಜಿ ನಾಯಕ ಡಿಕಾಕ್ 2020 ರಲ್ಲಿ 21 ಸಿಕ್ಸ್ ಬಾರಿಸುವ ಮೂಲಕ ಗಮನ ಸೆಳೆದಿದ್ದರು.
ಇದೀಗ ಈ ವರ್ಷ 26 ಸಿಕ್ಸ್ ಸಿಡಿಸುವ ಮೂಲಕ ರೋಹಿತ್ ಶರ್ಮಾ ಟಿ20 ಕ್ರಿಕೆಟ್ನಲ್ಲಿ ಹೊಸ ಇತಿಹಾಸವನ್ನು ನಿರ್ಮಿಸಿದ್ದಾರೆ.
Published On - 3:55 pm, Sun, 25 September 22