World Record: ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ್ದು ಯಾರು ಗೊತ್ತಾ?
TV9 Web | Updated By: ಝಾಹಿರ್ ಯೂಸುಫ್
Updated on:
Aug 07, 2022 | 11:37 PM
Most Sixes In International Cricket: ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ಬ್ಯಾಟ್ಸ್ಮನ್ಗಳ ಟಾಪ್ 5 ಪಟ್ಟಿಯಲ್ಲಿ ಟೀಮ್ ಇಂಡಿಯಾದ ಏಕೈಕ ಆಟಗಾರ ಕಾಣಿಸಿಕೊಂಡಿದ್ದಾರೆ.
1 / 8
ವೆಸ್ಟ್ ಇಂಡೀಸ್ ವಿರುದ್ದದ 4ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ 16 ಎಸೆತಗಳಲ್ಲಿ 33 ರನ್ ಬಾರಿಸಿ ಮಿಂಚಿದ್ದರು. ಈ ವೇಳೆ 3 ಸಿಕ್ಸ್ ಹಾಗೂ 2 ಫೋರ್ ಬಾರಿಸಿದ್ದರು. ವಿಶೇಷ ಎಂದರೆ ಈ 3 ಸಿಕ್ಸ್ನೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ 2ನೇ ಬ್ಯಾಟ್ಸ್ಮನ್ ಎಂಬ ದಾಖಲೆಯನ್ನು ರೋಹಿತ್ ಶರ್ಮಾ ಬರೆದಿದ್ದಾರೆ.
2 / 8
ಅಷ್ಟೇ ಅಲ್ಲದೆ ಟೀಮ್ ಇಂಡಿಯಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ದಾಖಲೆಯನ್ನು ಕೂಡ ನಿರ್ಮಿಸಿದ್ದಾರೆ. ವಿಂಡೀಸ್ ವಿರುದ್ದ 3 ಸಿಕ್ಸ್ ಬಾರಿಸುವ ಮೂಲಕ ರೋಹಿತ್ ಶರ್ಮಾ ಪಾಕಿಸ್ತಾನದ ಶಾಹಿದ್ ಅಫ್ರಿದಿ ಹೆಸರಿನಲ್ಲಿದ್ದ 476 ಸಿಕ್ಸ್ಗಳ ದಾಖಲೆ ಮುರಿದಿದ್ದಾರೆ.
3 / 8
ಇದೀಗ 477 ಸಿಕ್ಸ್ಗಳೊಂದಿಗೆ ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ವಿಶ್ವದ 2ನೇ ಬ್ಯಾಟ್ಸ್ಮನ್ ಎಂಬ ದಾಖಲೆ ಬರೆದಿದ್ದಾರೆ. ಹಾಗಿದ್ರೆ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ಬ್ಯಾಟ್ಸ್ಮನ್ಗಳು ಯಾರೆಲ್ಲಾ ನೋಡೋಣ...
4 / 8
1- ಕ್ರಿಸ್ ಗೇಲ್ (ವೆಸ್ಟ್ ಇಂಡೀಸ್): 553 ಸಿಕ್ಸ್
5 / 8
2- ರೋಹಿತ್ ಶರ್ಮಾ (ಭಾರತ): 477 ಸಿಕ್ಸ್
6 / 8
3- ಶಾಹಿದ್ ಅಫ್ರಿದಿ (ಪಾಕಿಸ್ತಾನ್): 476 ಸಿಕ್ಸ್
7 / 8
4- ಬ್ರೆಂಡನ್ ಮೆಕಲಂ (ನ್ಯೂಜಿಲೆಂಡ್): 398 ಸಿಕ್ಸ್
8 / 8
5- ಮಾರ್ಟಿನ್ ಗಪ್ಟಿಲ್ (ನ್ಯೂಜಿಲೆಂಡ್): 379 ಸಿಕ್ಸ್
Published On - 6:04 pm, Sun, 7 August 22