Cricket Records: ಭಾರತದಲ್ಲಿನ ಸಿಕ್ಸರ್ ಕಿಂಗ್ ಯಾರು ಗೊತ್ತಾ?
Most Sixes In ODI: ಏಕದಿನ ಕ್ರಿಕೆಟ್ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ವಿಶ್ವ ದಾಖಲೆ ಪಾಕಿಸ್ತಾನದ ಶಾಹಿದ್ ಅಫ್ರಿದಿ ಹೆಸರಿನಲ್ಲಿದೆ. ಅಫ್ರಿದಿ 369 ಇನಿಂಗ್ಸ್ನಲ್ಲಿ ಒಟ್ಟು 351 ಸಿಕ್ಸ್ ಬಾರಿಸಿದ್ದಾರೆ.
Updated on: Jan 18, 2023 | 8:29 PM

ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ 38 ಎಸೆತಗಳಲ್ಲಿ 4 ಫೋರ್ ಹಾಗೂ 2 ಸಿಕ್ಸ್ನೊಂದಿಗೆ 34 ರನ್ ಬಾರಿಸಿದ್ದರು. ವಿಶೇಷ ಎಂದರೆ ಈ 2 ಸಿಕ್ಸ್ನೊಂದಿಗೆ ಏಕದಿನ ಕ್ರಿಕೆಟ್ನಲ್ಲಿ ಭಾರತದಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ದಾಖಲೆ ಕೂಡ ರೋಹಿತ್ ಶರ್ಮಾ ಪಾಲಾಗಿದೆ.

ಈ ಹಿಂದೆ ಈ ರೆಕಾರ್ಡ್ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿತ್ತು. ಇದೀಗ ಈ ದಾಖಲೆಯನ್ನು ಮುರಿದು ಹಿಟ್ಮ್ಯಾನ್ ನಂಬರ್ 1 ಎನಿಸಿಕೊಂಡಿದ್ದಾರೆ. ಹಾಗಿದ್ರೆ ಭಾರತದಲ್ಲಿ ಏಕದಿನ ಕ್ರಿಕೆಟ್ನಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ಬ್ಯಾಟ್ಸ್ಮನ್ಗಳು ಯಾರೆಲ್ಲಾ ನೋಡೋಣ...

1- ರೋಹಿತ್ ಶರ್ಮಾ: ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಭಾರತದಲ್ಲಿ ಏಕದಿನ ಕ್ರಿಕೆಟ್ನಲ್ಲಿ ಬರೋಬ್ಬರಿ 125 ಸಿಕ್ಸ್ಗಳನ್ನು ಸಿಡಿಸಿದ್ದಾರೆ. ಅಷ್ಟೇ ಅಲ್ಲದೆ ಒಟ್ಟಾರೆ ಏಕದಿನ ಕ್ರಿಕೆಟ್ನಲ್ಲಿ ಭಾರತದ ಪರ ಅತ್ಯಧಿಕ ಸಿಕ್ಸ್ ಬಾರಿಸಿದ ದಾಖಲೆ ಕೂಡ ಹಿಟ್ಮ್ಯಾನ್ ಹೆಸರಿನಲ್ಲಿದೆ. ರೋಹಿತ್ ಶರ್ಮಾ 239 ಇನಿಂಗ್ಸ್ಗಳಲ್ಲಿ ಒಟ್ಟು 265 ಸಿಕ್ಸ್ ಬಾರಿಸಿದ್ದಾರೆ.

2- ಮಹೇಂದ್ರ ಸಿಂಗ್ ಧೋನಿ: ಭಾರತದಲ್ಲಿ ಏಕದಿನ ಕ್ರಿಕೆಟ್ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ದಾಖಲೆ ಪಟ್ಟಿಯಲ್ಲಿ ಇದೀಗ ಧೋನಿ 2ನೇ ಸ್ಥಾನಕ್ಕಿಳಿದಿದ್ದಾರೆ. ಎಂಎಸ್ಡಿ ಭಾರತದಲ್ಲಿ ಒಟ್ಟು 123 ಸಿಕ್ಸ್ ಸಿಡಿಸಿ ಈ ಹಿಂದೆ ದಾಖಲೆ ನಿರ್ಮಿಸಿದ್ದರು.

3- ಸಚಿನ್ ತೆಂಡೂಲ್ಕರ್: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಭಾರತದಲ್ಲಿ ಒಟ್ಟು 71 ಸಿಕ್ಸ್ ಬಾರಿಸಿದ್ದಾರೆ.

4- ವಿರಾಟ್ ಕೊಹ್ಲಿ: ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಕೂಡ ಇದ್ದಾರೆ. ಕಿಂಗ್ ಕೊಹ್ಲಿ ಭಾರತದಲ್ಲಿ ಕಣಕ್ಕಿಳಿದ ಏಕದಿನ ಪಂದ್ಯಗಳಲ್ಲಿ ಒಟ್ಟು 66 ಸಿಕ್ಸ್ ಬಾರಿಸಿದ್ದಾರೆ.

5- ಯುವರಾಜ್ ಸಿಂಗ್: ಸಿಕ್ಸರ್ ಕಿಂಗ್ ಖ್ಯಾತಿಯ ಯುವರಾಜ್ ಸಿಂಗ್ ಏಕದಿನ ಕ್ರಿಕೆಟ್ನಲ್ಲಿ ಭಾರತದಲ್ಲಿ ಒಟ್ಟು 65 ಸಿಕ್ಸ್ಗಳನ್ನು ಬಾರಿಸಿದ್ದರು.
























