T20 World Cup 2022: ಈ ವಿಶ್ವಕಪ್‌ನಲ್ಲಿ ಸಿಕ್ಸರ್​ಗಳ ಮಳೆಗರೆದ ಟಾಪ್ 5 ಬ್ಯಾಟರ್​ಗಳಿವರು

| Updated By: ಪೃಥ್ವಿಶಂಕರ

Updated on: Nov 14, 2022 | 11:39 AM

T20 World Cup 2022: ಸೂರ್ಯ ಒಟ್ಟು ಆರು ಇನ್ನಿಂಗ್ಸ್‌ಗಳಲ್ಲಿ ಒಂಬತ್ತು ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಟೀಂ ಇಂಡಿಯಾ ಫೈನಲ್ ತಲುಪಲು ಸಾಧ್ಯವಾಗಲಿಲ್ಲ, ಇಲ್ಲದಿದ್ದರೆ ಅವರು ಅಗ್ರಸ್ಥಾನಕ್ಕೇರುವ ಅವಕಾಶವಿತ್ತು.

1 / 5
 ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ವಿಶ್ವಕಪ್‌ಗೆ ಅದ್ಧೂರಿ ತೆರೆಬಿದ್ದಿದೆ. ಫೈನಲ್​ನಲ್ಲಿ ಪಾಕಿಸ್ತಾನವನ್ನು ಮಣಿಸುವುದರೊಂದಿಗೆ ಇಂಗ್ಲೆಂಡ್ ತಂಡ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಕಳೆದ ಎಲ್ಲಾ ಸೀಸನ್​​ಗಳಿಗಿಂತ ಈ ಸೀಸನ್ ಹಲವು ವಿಚಾರಗಳಲ್ಲಿ ಪ್ರೇಕ್ಷಕರಿಗೆ ಮನರಂಜನೆಯ ರಸದೌತಣವನ್ನೇ ನೀಡಿತು. ಈ ಟೂರ್ನಿಯಲ್ಲಿ ಹಲವು ಕ್ರಿಕೆಟಿಗರು ತಮ್ಮ ಅದ್ಭುತ ಪ್ರದರ್ಶನದ ಮೂಲಕ ಹಲವು ದಾಖಲೆಗಳನ್ನು ಬರೆದರು. ಅದರಲ್ಲೂ ಬ್ಯಾಟಿಂಗ್​ನಲ್ಲಿ ತಮ್ಮ ಪರಾಕ್ರಮ ತೋರಿದ ಬ್ಯಾಟ್ಸ್‌ಮನ್​ಗಳು ಬೌಂಡರಿ ಸಿಕ್ಸರ್​ಗಳ ಮಳೆಯನ್ನೇ ಸುರಿಸಿದರು. ಅಂತಹವರಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಟಾಪ್ 5 ಆಟಗಾರರು ಯಾರು ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ

2 / 5
ಜಿಂಬಾಬ್ವೆಯ ಮಾಜಿ ನಾಯಕ ಹಾಗೂ ಸ್ಟಾರ್ ಆಲ್ ರೌಂಡರ್ ಸಿಕಂದರ್ ರಾಝಾ ಈ ಬಾರಿಯ ಸಿಕ್ಸರ್ ಕಿಂಗ್ ಎನಿಸಿಕೊಂಡಿದ್ದಾರೆ. ಅರ್ಹತಾ ಹಾಗೂ ಸೂಪರ್ 12 ಸುತ್ತಿನಲ್ಲಿ ಒಟ್ಟು 11 ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ಪಂದ್ಯಾವಳಿಯಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಆಟಗಾರ ಎನಿಸಿಕೊಂಡರು. ಹಾಗೆಯೇ ರಾಝಾ ಅತಿ ಹೆಚ್ಚು ರನ್ ಗಳಿಸಿದ ವಿಚಾರದಲ್ಲಿ ಆರನೇ ಸ್ಥಾನ ಪಡೆದರು.

3 / 5
ಶ್ರೀಲಂಕಾದ ಕುಸಾಲ್ ಮೆಂಡಿಸ್ ಜೊತೆಗೆ ಇಂಗ್ಲೆಂಡ್‌ನ ಅಲೆಕ್ಸ್ ಹೇಲ್ಸ್ ಕೂಡ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಕೇವಲ ಐದು ಇನ್ನಿಂಗ್ಸ್‌ಗಳಲ್ಲಿ ಈ ಆಟಗಾರ 10 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

4 / 5
ಈ ಪಟ್ಟಿಯಲ್ಲಿ ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ನಾಲ್ಕನೇ ಸ್ಥಾನದಲ್ಲಿದ್ದಾರೆ. ಅವರು ಒಟ್ಟು ಆರು ಇನ್ನಿಂಗ್ಸ್‌ಗಳಲ್ಲಿ ಒಂಬತ್ತು ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಟೀಂ ಇಂಡಿಯಾ ಫೈನಲ್ ತಲುಪಲು ಸಾಧ್ಯವಾಗಲಿಲ್ಲ, ಇಲ್ಲದಿದ್ದರೆ ಅವರು ಅಗ್ರಸ್ಥಾನಕ್ಕೇರುವ ಅವಕಾಶವಿತ್ತು.

5 / 5
ಆಂಡ್ರ್ಯೂ ಬಲ್ಬಿರ್ನಿ ಸಿಕ್ಸರ್ ಬಾರಿಸುವ ವಿಷಯದಲ್ಲಿ ಐದನೇ ಸ್ಥಾನ ಪಡೆದಿದ್ದಾರೆ. ಈ ಐರ್ಲೆಂಡ್ ಬ್ಯಾಟ್ಸ್‌ಮನ್ ಏಳು ಪಂದ್ಯಗಳಲ್ಲಿ ಒಂಬತ್ತು ಸಿಕ್ಸರ್‌ಗಳನ್ನು ಒಳಗೊಂಡಂತೆ 153 ರನ್ ಗಳಿಸಿದರು. ಇವರಲ್ಲದೆ ದಕ್ಷಿಣ ಆಫ್ರಿಕಾದ ರಿಲೆ ರುಸ್ಸೋ ಮತ್ತು ಆಸ್ಟ್ರೇಲಿಯಾದ ಮಾರ್ಕಸ್ ಸ್ಟೊಯಿನಿಸ್ ಕೂಡ ತಲಾ ಒಂಬತ್ತು ಸಿಕ್ಸರ್​ಗಳನ್ನು ಬಾರಿಸಿದ್ದಾರೆ.

Published On - 11:39 am, Mon, 14 November 22