Asia Cup 2022: ಏಷ್ಯಾಕಪ್ ಇತಿಹಾಸದಲ್ಲಿ ಪಾಕಿಸ್ತಾನ ಪರ ಮಿಂಚಿದ ಬೌಲರ್​ಗಳಿವರು

| Updated By: ಪೃಥ್ವಿಶಂಕರ

Updated on: Aug 27, 2022 | 5:38 PM

Asia Cup 2022: ಸಯೀದ್ 12 ಇನ್ನಿಂಗ್ಸ್‌ಗಳಲ್ಲಿ 25 ವಿಕೆಟ್ ಪಡೆದ ದಾಖಲೆ ಹೊಂದಿದ್ದಾರೆ. 2014ರ ಆವೃತ್ತಿಯಲ್ಲಿ ಐದು ಪಂದ್ಯಗಳಲ್ಲಿ 11 ವಿಕೆಟ್‌ಗಳನ್ನು ಉರುಳಿಸಿದ್ದರು.

1 / 5
ಏಷ್ಯಾಕಪ್ ಟೂರ್ನಿಯಲ್ಲಿ ಪಾಕಿಸ್ತಾನ ಬಲಿಷ್ಠ ತಂಡಗಳಲ್ಲಿ ಒಂದಾಗಿದೆ. ಆ ದೇಶದ ಬೌಲರ್‌ಗಳು ಏಷ್ಯಾಕಪ್​ನಲ್ಲಿ ತಮ್ಮ ಮಾರಕ ಬೌಲಿಂಗ್​ನಿಂದಾಗಿ ಎದುರಾಳಿ ತಂಡದಲ್ಲಿ ನಡುಕ ಹುಟ್ಟಿಸಿದ್ದಾರೆ. ಏಷ್ಯಾಕಪ್ ಪ್ರದರ್ಶನದಲ್ಲಿ ಮಾಜಿ ಸ್ಪಿನ್ನರ್ ಸಯೀದ್ ಅಜ್ಮಲ್ ಪಾಕಿಸ್ತಾನದ ಅತ್ಯುತ್ತಮ ಬೌಲರ್‌ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಸಯೀದ್ 12 ಇನ್ನಿಂಗ್ಸ್‌ಗಳಲ್ಲಿ 25 ವಿಕೆಟ್ ಪಡೆದ ದಾಖಲೆ ಹೊಂದಿದ್ದಾರೆ. 2014ರ ಆವೃತ್ತಿಯಲ್ಲಿ ಐದು ಪಂದ್ಯಗಳಲ್ಲಿ 11 ವಿಕೆಟ್‌ಗಳನ್ನು ಉರುಳಿಸಿದ್ದರು. 2012ರಲ್ಲಿ ಪಾಕಿಸ್ತಾನ ಏಷ್ಯಾಕಪ್ ಗೆಲ್ಲುವಲ್ಲಿ ಅಜ್ಮಲ್ ಪ್ರಮುಖ ಪಾತ್ರ ವಹಿಸಿದ್ದರು. ನಾಲ್ಕು ಪಂದ್ಯಗಳಲ್ಲಿ ಎಂಟು ವಿಕೆಟ್ ಕಬಳಿಸಿದ್ದರು.

2 / 5
ಪಾಕಿಸ್ತಾನದ ಮತ್ತೊಬ್ಬ ಸ್ಪಿನ್ನರ್ ಅಬ್ದುಲ್ ಖಾದಿರ್ ಖಾನ್ ಎರಡನೇ ಸ್ಥಾನದಲ್ಲಿದ್ದಾರೆ.  ಎಪ್ಪತ್ತು, ಎಂಬತ್ತರ ದಶಕದ ಈ ಕ್ರಿಕೆಟಿಗ 8 ಇನ್ನಿಂಗ್ಸ್‌ಗಳಲ್ಲಿ 17 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

3 / 5
ಪಾಕಿಸ್ತಾನದ ದಿಗ್ಗಜ ವೇಗದ ಬೌಲರ್ ವಾಸಿಂ ಅಕ್ರಮ್ 12 ಇನ್ನಿಂಗ್ಸ್‌ಗಳಲ್ಲಿ 16 ವಿಕೆಟ್‌ಗಳೊಂದಿಗೆ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

4 / 5
ಪಾಕ್ ಆಲ್ ರೌಂಡರ್ ಅಬ್ದುಲ್ ರಜಾಕ್ ನಾಲ್ಕನೇ ಸ್ಥಾನದಲ್ಲಿದ್ದಾರೆ. ರಜಾಕ್ ತಮ್ಮ 10 ವರ್ಷಗಳ ವೃತ್ತಿಜೀವನದ ಏಷ್ಯಾಕಪ್‌ನಲ್ಲಿ 11 ಇನ್ನಿಂಗ್ಸ್‌ಗಳಲ್ಲಿ 16 ವಿಕೆಟ್ ಪಡೆದಿದ್ದಾರೆ.

5 / 5
ಏಷ್ಯಾಕಪ್‌ನಲ್ಲಿ ಅತ್ಯಂತ ಯಶಸ್ವಿ ಬೌಲರ್‌ಗಳ ಪಟ್ಟಿಯಿಂದ ದೂರವಿದ್ದರೂ, ಪಾಕಿಸ್ತಾನದ ವೇಗಿ ಅಕಿಬ್ ಜಾವೇದ್ 1995 ರ ಏಷ್ಯಾಕಪ್‌ನಲ್ಲಿ ವಿಶಿಷ್ಟ ಸಾಧನೆ ಮಾಡಿದರು. ಭಾರತದ ವಿರುದ್ಧದ ಪಂದ್ಯದಲ್ಲಿ ಜಾವೇದ್ 19 ರನ್ ನೀಡಿ 5 ವಿಕೆಟ್ ಪಡೆದಿದ್ದರು

Published On - 5:38 pm, Sat, 27 August 22