Steve Smith: ಕ್ಯಾಚ್ ಹಿಡಿದು ದಾಖಲೆ ಬರೆದ ಸ್ಟೀವ್ ಸ್ಮಿತ್

| Updated By: ಝಾಹಿರ್ ಯೂಸುಫ್

Updated on: Mar 03, 2024 | 9:54 AM

Most catches in Test: ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಕ್ಯಾಚ್ ಹಿಡಿದ ವಿಶ್ವ ದಾಖಲೆ ಇರುವುದು ಟೀಮ್ ಇಂಡಿಯಾ ಆಟಗಾರ ರಾಹುಲ್ ದ್ರಾವಿಡ್ (Rahul Dravid) ಹೆಸರಿನಲ್ಲಿ ಎಂಬುದು ವಿಶೇಷ. ಇದೀಗ ಆಸ್ಟ್ರೇಲಿಯಾ ತಂಡದ ಸ್ಟೀವ್ ಸ್ಮಿತ್ ಮಾಜಿ ಆಟಗಾರ ಮಾರ್ಕ್ ವಾ ಅವರನ್ನು ಹಿಂದಿಕ್ಕಿ ಈ ಪಟ್ಟಿಯಲ್ಲಿ 6ನೇ ಸ್ಥಾನಕ್ಕೇರಿದ್ದಾರೆ.

1 / 9
ವೆಲ್ಲಿಂಗ್ಟನ್​ನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ 2ನೇ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ (Steve Smith) ಅತ್ಯುತ್ತಮ ಫೀಲ್ಡಿಂಗ್ ಪ್ರದರ್ಶಿಸಿದ್ದರು. ಅದರಲ್ಲೂ ಸ್ಲಿಪ್​ನಲ್ಲಿ ಫೀಲ್ಡ್​ ಮಾಡಿದ್ದ ಸ್ಮಿತ್ ಮೂರು ಕ್ಯಾಚ್​ಗಳನ್ನು ಹಿಡಿದರು. ಈ ಮೂಲಕ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಕ್ಯಾಚ್​ಗಳನ್ನು ಹಿಡಿದ ಆಸ್ಟ್ರೇಲಿಯಾದ 2ನೇ ಆಟಗಾರ ಎನಿಸಿಕೊಂಡಿದ್ದಾರೆ.

2 / 9
ಇದಕ್ಕೂ ಮುನ್ನ ಮಾಜಿ ಆಟಗಾರ ಮಾರ್ಕ್​ ವಾ 2ನೇ ಸ್ಥಾನದಲ್ಲಿದ್ದರು. 245 ಟೆಸ್ಟ್​ಗಳಲ್ಲಿ ಕಣಕ್ಕಿಳಿದಿದ್ದ ಮಾರ್ಕ್​ ವಾ ಒಟ್ಟು 181 ಕ್ಯಾಚ್​ಗಳನ್ನು ಹಿಡಿದಿದ್ದರು. ಇದೀಗ ಈ ದಾಖಲೆಯನ್ನು ಮುರಿದು ಸ್ಟೀವ್ ಸ್ಮಿತ್ ಇದೀಗ ಆಸ್ಟ್ರೇಲಿಯಾ ಪರ ಅತ್ಯಧಿಕ ಟೆಸ್ಟ್ ಕ್ಯಾಚ್ ಹಿಡಿದ 2ನೇ ಫೀಲ್ಡರ್ ಎನಿಸಿಕೊಂಡಿದ್ದಾರೆ.

3 / 9
205 ಟೆಸ್ಟ್ ಇನಿಂಗ್ಸ್​ಗಳಲ್ಲಿ ಫೀಲ್ಡಿಂಗ್ ಮಾಡಿರುವ ಸ್ಟೀವ್ ಸ್ಮಿತ್ ಇದುವರೆಗೆ 183 ಕ್ಯಾಚ್​ಗಳನ್ನು ಹಿಡಿದಿದ್ದಾರೆ. ಈ ಮೂಲಕ ಟೆಸ್ಟ್​ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಕ್ಯಾಚ್ ಹಿಡಿದ ವಿಶ್ವದ 6ನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

4 / 9
ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಟೀಮ್ ಇಂಡಿಯಾದ ಮಾಜಿ ಆಟಗಾರ ರಾಹುಲ್ ದ್ರಾವಿಡ್. 301 ಟೆಸ್ಟ್ ಇನಿಂಗ್ಸ್​ಗಳಲ್ಲಿ ಫೀಲ್ಡಿಂಗ್ ಮಾಡಿರುವ ದ್ರಾವಿಡ್ ಒಟ್ಟು 210 ಕ್ಯಾಚ್​ಗಳನ್ನು ಹಿಡಿದು ಟೆಸ್ಟ್ ಕ್ರಿಕೆಟ್​ನಲ್ಲಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

5 / 9
ಇನ್ನು ಮಹೇಲ ಜಯವರ್ಧನೆ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದ್ದಾರೆ. ಶ್ರೀಲಂಕಾ ತಂಡದ ಮಾಜಿ ನಾಯಕ 270 ಟೆಸ್ಟ್ ಇನಿಂಗ್ಸ್​ಗಳಲ್ಲಿ ಒಟ್ಟು 205 ಕ್ಯಾಚ್​ಗಳನ್ನು ಹಿಡಿದಿದ್ದಾರೆ.

6 / 9
ಹಾಗೆಯೇ ಸೌತ್ ಆಫ್ರಿಕಾ ತಂಡದ ಮಾಜಿ ಆಲ್​ರೌಂಡರ್ ಜಾಕ್ಸ್ ಕಾಲಿಸ್ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದು, 315 ಟೆಸ್ಟ್​ ಇನಿಂಗ್ಸ್​ಗಳಲ್ಲಿ ಒಟ್ಟು 200 ಕ್ಯಾಚ್​ಗಳನ್ನು ಹಿಡಿದಿದ್ದಾರೆ.

7 / 9
ನಂತರದ ಸ್ಥಾನದಲ್ಲಿ ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್ ಇದ್ದು, ಪಂಟರ್ ಖ್ಯಾತಿಯ ಪಾಂಟಿಂಗ್ 328 ಟೆಸ್ಟ್ ಇನಿಂಗ್ಸ್​ಗಳಲ್ಲಿ 196 ಕ್ಯಾಚ್​ಗಳನ್ನು ಹಿಡಿದಿದ್ದಾರೆ.

8 / 9
ಹಾಗೆಯೇ ಇಂಗ್ಲೆಂಡ್​ನ ಜೋ ರೂಟ್ ಈ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದಾರೆ. ರೂಟ್ 264 ಟೆಸ್ಟ್ ಇನಿಂಗ್ಸ್​ಗಳಿಂದ 192 ಕ್ಯಾಚ್​ಗಳನ್ನು ಹಿಡಿದು ಮಿಂಚಿದ್ದಾರೆ.

9 / 9
ಇದೀಗ 205 ಟೆಸ್ಟ್ ಇನಿಂಗ್ಸ್​ಗಳ ಮೂಲಕ ಸ್ಟೀವ್ ಸ್ಮಿತ್ 183 ಕ್ಯಾಚ್​ಗಳನ್ನು ಹಿಡಿದಿದ್ದು, ಈ ಮೂಲಕ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಕ್ಯಾಚ್​ಗಳನ್ನು ಹಿಡಿದ ಆಟಗಾರರ ಪಟ್ಟಿಯಲ್ಲಿ 6ನೇ ಸ್ಥಾನ ಅಲಂಕರಿಸಿದ್ದಾರೆ.