IND vs ENG: ಟೀಮ್ ಇಂಡಿಯಾ ಗೆದ್ದರೆ ಹೊಸ ಇತಿಹಾಸ
TV9 Web | Updated By: ಝಾಹಿರ್ ಯೂಸುಫ್
Updated on:
Feb 14, 2024 | 8:26 AM
India vs England 3rd Test: ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯ ಮೂರನೇ ಪಂದ್ಯವು ಗುರುವಾದಿಂದ (ಫೆ.15) ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಗೆದ್ದರೆ, ದ್ವಿತೀಯ ಟೆಸ್ಟ್ನಲ್ಲಿ ಟೀಮ್ ಇಂಡಿಯಾ ಜಯಭೇರಿ ಬಾರಿಸಿತ್ತು. ಇದೀಗ ಮೂರನೇ ಪಂದ್ಯದಲ್ಲಿ ಗೆಲ್ಲುವ ಮೂಲಕ ಮುನ್ನಡೆ ಸಾಧಿಸುವ ಇರಾದೆಯಲ್ಲಿದೆ ಉಭಯ ತಂಡಗಳು.
1 / 8
ಭಾರತ ಮತ್ತು ಇಂಗ್ಲೆಂಡ್ ನಡುವಣ 3ನೇ ಟೆಸ್ಟ್ ಪಂದ್ಯವು ನಾಳೆಯಿಂದ (ಫೆ.15) ಶುರುವಾಗಲಿದೆ. ರಾಜ್ಕೋಟ್ನ ಸೌರಾಷ್ಟ್ರ ಕ್ರಿಕೆಟ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ.
2 / 8
ಅಂದರೆ ಭಾರತ ತಂಡವು ಟೆಸ್ಟ್ ಕ್ರಿಕೆಟ್ನಲ್ಲಿ ಒಂದೇ ತಂಡದ ವಿರುದ್ಧ ಅತ್ಯಧಿಕ ಗೆಲುವು ದಾಖಲಿಸಿದ ದಾಖಲೆ ಬರೆಯಲು ಇಂಗ್ಲೆಂಡ್ ವಿರುದ್ಧ ಗೆದ್ದರೆ ಸಾಕು. ಸದ್ಯ ಭಾರತ ತಂಡವು ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ವಿರುದ್ಧ 32 ಪಂದ್ಯಗಳಲ್ಲಿ ಜಯ ಸಾಧಿಸಿದೆ.
3 / 8
ಭಾರತ ಮತ್ತು ಇಂಗ್ಲೆಂಡ್ ತಂಡಗಳು ಟೆಸ್ಟ್ ಕ್ರಿಕೆಟ್ನಲ್ಲಿ ಒಟ್ಟು 133 ಪಂದ್ಯಗಳನ್ನಾಡಿದೆ. ಈ ವೇಳೆ ಇಂಗ್ಲೆಂಡ್ 51 ಮ್ಯಾಚ್ಗಳಲ್ಲಿ ಜಯ ಸಾಧಿಸಿದರೆ ಟೀಮ್ ಇಂಡಿಯಾ 32 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ.
4 / 8
ಹಾಗೆಯೇ ಭಾರತ ಮತ್ತು ಆಸ್ಟ್ರೇಲಿಯಾ 107 ಟೆಸ್ಟ್ ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಆಸ್ಟ್ರೇಲಿಯಾ 45 ಮ್ಯಾಚ್ಗಳಲ್ಲಿ ಗೆಲುವಿನ ನಗೆ ಬೀರಿದರೆ, ಟೀಮ್ ಇಂಡಿಯಾ 32 ಪಂದ್ಯಗಳಲ್ಲಿ ಜಯಭೇರಿ ಬಾರಿಸಿದೆ.
5 / 8
ಅಂದರೆ ಭಾರತ ತಂಡವು ಟೆಸ್ಟ್ ಕ್ರಿಕೆಟ್ನಲ್ಲಿ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ತಂಡಗಳ ವಿರುದ್ಧ ತಲಾ 32 ಬಾರಿ ಗೆಲುವು ದಾಖಲಿಸಿದೆ. ಇದೀಗ ರಾಜ್ಕೋಟ್ ಟೆಸ್ಟ್ನಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದರೆ, ಟೆಸ್ಟ್ನಲ್ಲಿ ಭಾರತ ತಂಡವು ತಂಡವೊಂದರ ವಿರುದ್ಧ 33 ಪಂದ್ಯಗಳಲ್ಲಿ ಗೆಲುವು ದಾಖಲಿಸಿದ ವಿಶೇಷ ದಾಖಲೆಯೊಂದು ನಿರ್ಮಾಣವಾಗಲಿದೆ.
6 / 8
ಹೀಗಾಗಿ ಸೌರಾಷ್ಟ್ರ ಕ್ರಿಕೆಟ್ ಅಸೋಷಿಯೇಷನ್ ಮೈದಾನದಲ್ಲಿ ನಡೆಯಲಿರುವ 3ನೇ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಪಡೆಯಿಂದ ಕಡೆಯಿಂದ ಭರ್ಜರಿ ಪ್ರದರ್ಶನ ನಿರೀಕ್ಷಿಸಬಹುದು.
7 / 8
ಇಂಗ್ಲೆಂಡ್ ಟೆಸ್ಟ್ ತಂಡ: ಬೆನ್ ಸ್ಟೋಕ್ಸ್ (ನಾಯಕ), ರೆಹಾನ್ ಅಹ್ಮದ್, ಜೇಮ್ಸ್ ಅ್ಯಂಡರ್ಸನ್, ಗಸ್ ಅಟ್ಕಿನ್ಸನ್ , ಜಾನಿ ಬೈರ್‌ಸ್ಟೋವ್, ಶೋಯೆಬ್ ಬಶೀರ್, ಡ್ಯಾನ್ ಲಾರೆನ್ಸ್, ಝಾಕ್ ಕ್ರಾಲಿ, ಬೆನ್ ಡಕೆಟ್, ಬೆನ್ ಫೋಕ್ಸ್, ಟಾಮ್ ಹಾರ್ಟ್ಲಿ, ಒಲ್ಲಿ ಪೋಪ್, ಆಲಿ ರಾಬಿನ್ಸನ್ , ಜೋ ರೂಟ್ , ಮಾರ್ಕ್ ವುಡ್.
8 / 8
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್, ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ಆರ್ ಅಶ್ವಿನ್, ರವೀಂದ್ರ ಜಡೇಜಾ*, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್.