Team India: ಅಮೋಘ ಗೆಲುವಿನೊಂದಿಗೆ ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ

| Updated By: ಝಾಹಿರ್ ಯೂಸುಫ್

Updated on: Jul 15, 2023 | 2:58 PM

India vs West Indies 1st Test: ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು ಪ್ರಥಮ ಇನಿಂಗ್ಸ್​ನಲ್ಲಿ ಕೇವಲ 150 ರನ್​ಗಳಿಗೆ ಆಲೌಟ್ ಆಗಿತ್ತು.

1 / 5
India vs West Indies 1st Test: ಡೊಮಿನಿಕಾದ ವಿಂಡ್ಸರ್ ಪಾರ್ಕ್​ನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಅಮೋಘ ಗೆಲುವು ದಾಖಲಿಸಿದೆ.

2 / 5
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು ಪ್ರಥಮ ಇನಿಂಗ್ಸ್​ನಲ್ಲಿ ಕೇವಲ 150 ರನ್​ಗಳಿಗೆ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಯಶಸ್ವಿ ಜೈಸ್ವಾಲ್ (171) ಹಾಗೂ ರೋಹಿತ್ ಶರ್ಮಾರ (103) ಶತಕದೊಂದಿಗೆ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ 5 ವಿಕೆಟ್ ನಷ್ಟಕ್ಕೆ 421 ರನ್​ಗಳಿಸಿ ಡಿಕ್ಲೇರ್​ ಘೋಷಿಸಿತು.

3 / 5
ಅದರಂತೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ವೆಸ್ಟ್ ಇಂಡೀಸ್ ಬ್ಯಾಟರ್​​ಗಳು ಅಶ್ವಿನ್ ಅವರ ಸ್ಪಿನ್ ಮೋಡಿ ಮುಂದೆ ಮಂಡಿಯೂರಿದ್ದಾರೆ. ಕೇವಲ 71 ರನ್ ನೀಡಿ 7 ವಿಕೆಟ್ ಕಬಳಿಸಿ ಅಶ್ವಿನ್, ವೆಸ್ಟ್ ಇಂಡೀಸ್​ ತಂಡವನ್ನು 130 ರನ್​ಗಳಿಗೆ ಆಲೌಟ್ ಮಾಡಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಇನಿಂಗ್ಸ್ ಹಾಗೂ 141 ರನ್​ಗಳ ಅಮೋಘ ಗೆಲುವು ತನ್ನದಾಗಿಸಿಕೊಂಡಿತು.

4 / 5
ಈ ಗೆಲುವಿನೊಂದಿಗೆ ಐದು ತಂಡಗಳ ವಿರುದ್ಧ 22 ಕ್ಕೂ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಗೆದ್ದ ವಿಶೇಷ ದಾಖಲೆಯನ್ನು ಟೀಮ್ ಇಂಡಿಯಾ ತನ್ನದಾಗಿಸಿಕೊಂಡಿತು.

5 / 5
ಭಾರತ ತಂಡವು ಆಸ್ಟ್ರೇಲಿಯಾ (32), ಇಂಗ್ಲೆಂಡ್ (31), ವೆಸ್ಟ್ ಇಂಡೀಸ್ (23), ನ್ಯೂಝಿಲೆಂಡ್ (22) ಹಾಗೂ ಶ್ರೀಲಂಕಾ (22) ಇಪ್ಪತ್ತಕ್ಕೂ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಗೆದ್ದುಕೊಂಡಿದೆ.