- Kannada News Photo gallery Cricket photos Most wins by a team in a calendar year: India Creates New Record Kannada News zp
India vs Pakistan: ಪಾಕ್ನ ಬಗ್ಗು ಬಡಿದು ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ
India vs Pakistan: ವಿಶೇಷ ಎಂದರೆ ಪಾಕಿಸ್ತಾನ್ ವಿರುದ್ಧ ಈ ಗೆಲುವಿನೊಂದಿಗೆ ಭಾರತ ತಂಡವು ಹೊಸ ವಿಶ್ವ ದಾಖಲೆಯನ್ನು ಬರೆದಿದೆ.
Updated on: Oct 23, 2022 | 9:05 PM

ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್ನಲ್ಲಿ ನಡೆದ ಪಾಕಿಸ್ತಾನದ ವಿರುದ್ಧದ ರಣರೋಚಕ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ಮೂಲಕ ಭಾರತ ತಂಡವು 2021 ರ ಟಿ20 ವಿಶ್ವಕಪ್ ಸೋಲಿನ ಸೇಡನ್ನು ತೀರಿಸಿಕೊಂಡಿದೆ.

ವಿಶೇಷ ಎಂದರೆ ಪಾಕಿಸ್ತಾನ್ ವಿರುದ್ಧ ಈ ಗೆಲುವಿನೊಂದಿಗೆ ಭಾರತ ತಂಡವು ಹೊಸ ವಿಶ್ವ ದಾಖಲೆಯನ್ನು ಬರೆದಿದೆ. ಅದು ಕೂಡ ದಶಕಗಳ ಹಳೆಯ ಆಸ್ಟ್ರೇಲಿಯಾ ತಂಡದ ವಿಶ್ವ ದಾಖಲೆಯನ್ನು ಮುರಿದು ಎಂಬುದು ವಿಶೇಷ.

ಅಂದರೆ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ವರ್ಷ ಅತೀ ಹೆಚ್ಚು ಪಂದ್ಯಗಳನ್ನು ಗೆದ್ದ ದಾಖಲೆ ಆಸ್ಟ್ರೇಲಿಯಾ ತಂಡದ ಹೆಸರಿನಲ್ಲಿತ್ತು. ಸ್ಟೀವ್ ವಾ ನಾಯಕತ್ವದ ಆಸೀಸ್ ಪಡೆಯು 2003 ರಲ್ಲಿ ಬರೋಬ್ಬರಿ 38 ಪಂದ್ಯಗಳನ್ನು ಗೆದ್ದು ಇತಿಹಾಸ ನಿರ್ಮಿಸಿತ್ತು.

ಅಂದು 8 ಟೆಸ್ಟ್ ಹಾಗೂ 30 ಏಕದಿನ ಪಂದ್ಯಗಳನ್ನು ಗೆಲ್ಲುವ ಮೂಲಕ ಆಸ್ಟ್ರೇಲಿಯಾ ತಂಡವು ಕ್ರಿಕೆಟ್ ಇತಿಹಾಸದಲ್ಲಿ ಹೊಸ ಅಧ್ಯಾಯವನ್ನು ಬರೆದಿತ್ತು. ಆದರೆ ಇದಾದ ಬಳಿಕ ಯಾವುದೇ ತಂಡ ಒಂದೇ ವರ್ಷ ಇಷ್ಟೊಂದು ಪಂದ್ಯಗಳನ್ನು ಗೆಲ್ಲಲು ಸಾಧ್ಯವಾಗಿರಲಿಲ್ಲ.

ಆದರೆ ಈ ವರ್ಷ ಟೀಮ್ ಇಂಡಿಯಾ ಗೆಲುವಿನ ನಾಗಾಲೋಟ ಮುಂದುವರೆಸಿದೆ. ಒಟ್ಟು 39 ಪಂದ್ಯಗಳಲ್ಲಿ ಜಯ ಸಾಧಿಸುವ ಮೂಲಕ ಭಾರತ ತಂಡವು ಹೊಸ ಇತಿಹಾಸ ಬರೆದಿದೆ. ಅಲ್ಲದೆ ಆಸ್ಟ್ರೇಲಿಯಾ ತಂಡವು ಬರೆದಿದ್ದ ವಿಶ್ವ ದಾಖಲೆಯನ್ನು ಅಳಿಸಿ ಹಾಕಿದೆ.

2022 ರಲ್ಲಿ ಟೀಮ್ ಇಂಡಿಯಾ 2 ಟೆಸ್ಟ್, 13 ಏಕದಿನ ಹಾಗೂ 24 ಟಿ20 ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಒಟ್ಟು 39 ಪಂದ್ಯಗಳನ್ನು ಗೆದ್ದಿರುವ ಟೀಮ್ ಇಂಡಿಯಾ ಕ್ರಿಕೆಟ್ ಇತಿಹಾಸದಲ್ಲಿ ಹೊಸ ಮೈಲುಗಲ್ಲು ನೆಟ್ಟಿದೆ.
























