IPL 2023: ಐಪಿಎಲ್​ನಲ್ಲಿ ಐತಿಹಾಸಿಕ ದಾಖಲೆ ಬರೆದ ಎಂಎಸ್ ಧೋನಿ

| Updated By: ಝಾಹಿರ್ ಯೂಸುಫ್

Updated on: Apr 12, 2023 | 9:24 PM

MS Dhoni: ಈ ಪಟ್ಟಿಯಲ್ಲಿ ಮುಂಬೈ ಇಂಡಿಯನ್ಸ್ ಕ್ಯಾಪ್ಟನ್ ರೋಹಿತ್ ಶರ್ಮಾ 2ನೇ ಸ್ಥಾನದಲ್ಲಿದ್ದಾರೆ. ಹಿಟ್​ಮ್ಯಾನ್ ಒಟ್ಟು 146 ಪಂದ್ಯಗಳಲ್ಲಿ ಮುಂಬೈ ತಂಡವನ್ನು ಮುನ್ನಡೆಸಿದ್ದಾರೆ.

1 / 6
IPL 2023: ಚೆನ್ನೈನ ಎಂಎ ಚಿದರಂಬರಂ ಕ್ರಿಕೆಟ್ ಸ್ಟೇಡಿಯಂನಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಸಿಎಸ್​ಕೆ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಐತಿಹಾಸಿಕ ದಾಖಲೆ ಬರೆದಿದ್ದಾರೆ. ಅದು ಕೂಡ ಐಪಿಎಲ್ ಇತಿಹಾಸದಲ್ಲೇ ಯಾರು ಮಾಡದ ದಾಖಲೆ ಎಂಬುದು ವಿಶೇಷ.

2 / 6
ಈ ಪಂದ್ಯದಲ್ಲಿ ಸಂಜು ಸ್ಯಾಮ್ಸನ್​ ಜೊತೆ ಟಾಸ್​ಗೆ ಆಗಮಿಸುತ್ತಿದ್ದಂತೆ ಮಹೇಂದ್ರ ಸಿಂಗ್ ಧೋನಿ ಸಿಎಸ್​ಕೆ ತಂಡವನ್ನು 200 ಪಂದ್ಯಗಳಲ್ಲಿ ಮುನ್ನಡೆಸಿದ ವಿಶೇಷ ದಾಖಲೆ ಬರೆದರು. ಐಪಿಎಲ್​ನಲ್ಲಿ ಯಾವುದೇ ನಾಯಕ ಒಂದೇ ತಂಡವನ್ನು 200 ಪಂದ್ಯಗಳಲ್ಲಿ ಮುನ್ನಡೆಸಿಲ್ಲ.

3 / 6
ಹಾಗೆಯೇ 200 ಪಂದ್ಯಗಳಲ್ಲಿ ಯಾರು ಕೂಡ ನಾಯಕರಾಗಿ ಕಾಣಿಸಿಕೊಂಡಿಲ್ಲ. ಇದೀಗ 200 ಪಂದ್ಯಗಳಲ್ಲಿ ಸಿಎಸ್​ಕೆ ತಂಡದ ಕಪ್ತಾನನಾಗಿ ಕಾಣಿಸಿಕೊಳ್ಳುವ ಮೂಲಕ ಧೋನಿ ಇತಿಹಾಸ ನಿರ್ಮಿಸಿದ್ದಾರೆ. ಅಂದಹಾಗೆ ಧೋನಿ ಐಪಿಎಲ್​ನಲ್ಲಿ 2 ತಂಡಗಳ ನಾಯಕರಾಗಿ ಕಾಣಿಸಿಕೊಂಡಿದ್ದರು.

4 / 6
ಸಿಎಸ್​ಕೆ ಕ್ಯಾಪ್ಟನ್ ಆಗಿ ಐಪಿಎಲ್ ಕೆರಿಯರ್ ಆರಂಭಿಸಿದ್ದ ಧೋನಿ, ಆ ಬಳಿಕ ಚೆನ್ನೈ ಸೂಪರ್ ಕಿಂಗ್ಸ್​ ತಂಡವು ಬ್ಯಾನ್ ಆಗಿದ್ದ ವೇಳೆ   ರೈಸಿಂಗ್ ಪುಣೆ ಜೈಂಟ್ಸ್ ತಂಡವನ್ನು ಮುನ್ನಡೆಸಿದ್ದರು. ಒಟ್ಟು 214 ಪಂದ್ಯಗಳಲ್ಲಿ ಎಂಎಸ್​ಡಿ ನಾಯಕರಾಗಿ ಕಾಣಿಸಿಕೊಂಡಿದ್ದು, ಈ ವೇಳೆ 125 ಗೆಲುವು ಹಾಗೂ 87 ಸೋಲು ಕಂಡಿದ್ದಾರೆ.

5 / 6
ಇನ್ನು ಐಪಿಎಲ್​ನಲ್ಲಿ ಅತೀ ಹೆಚ್ಚು ಪಂದ್ಯಗಳಲ್ಲಿ ನಾಯಕರಾಗಿ ಕಾಣಿಸಿಕೊಂಡ ಆಟಗಾರ ಪಟ್ಟಿಯಲ್ಲಿ ಮುಂಬೈ ಇಂಡಿಯನ್ಸ್ ಕ್ಯಾಪ್ಟನ್ ರೋಹಿತ್ ಶರ್ಮಾ 2ನೇ ಸ್ಥಾನದಲ್ಲಿದ್ದಾರೆ. ಹಿಟ್​ಮ್ಯಾನ್ ಒಟ್ಟು 146 ಪಂದ್ಯಗಳಲ್ಲಿ ಮುಂಬೈ ತಂಡವನ್ನು ಮುನ್ನಡೆಸಿದ್ದಾರೆ.

6 / 6
ಹಾಗೆಯೇ ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ 3ನೇ ಸ್ಥಾನದಲ್ಲಿದ್ದು, ಕಿಂಗ್ ಕೊಹ್ಲಿ ಒಟ್ಟು 140 ಪಂದ್ಯಗಳಲ್ಲಿ ಆರ್​ಸಿಬಿ ತಂಡದ ಸಾರಥ್ಯವಹಿಸಿದ್ದರು.

Published On - 9:24 pm, Wed, 12 April 23