MS Dhoni IPL 2023 Final: ನಿವೃತ್ತಿ ಹೇಳಲು ಇದು ಸರಿಯಾದ ಸಮಯ, ಆದರೆ: ಪಂದ್ಯದ ಬಳಿಕ ಧೋನಿಯಿಂದ ಶಾಕಿಂಗ್ ಹೇಳಿಕೆ

CSK vs GT, IPL 2023 Final: ಐಪಿಎಲ್ 2023 ಫೈನಲ್​ನಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಗೆದ್ದ ಬಳಿಕ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್ ವೇಳೆ ಮಾತನಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ಏನು ಹೇಳಿದ್ದಾರೆ ನೋಡಿ.

Vinay Bhat
|

Updated on: May 30, 2023 | 9:03 AM

ಚೆನ್ನೈ ಸೂಪರ್ ಕಿಂಗ್ಸ್ ತಂಡ ಐದನೇ ಬಾರಿ ಐಪಿಎಲ್ ಟ್ರೋಫಿಗೆ ಮುತ್ತಿಕ್ಕಿದೆ. ಈ ಮೂಲಕ ಅತಿ ಹೆಚ್ಚು ಬಾರಿ ಚಾಂಪಿಯನ್ ಆದವರ ಸಾಲಿನಲ್ಲಿ ಮುಂಬೈ ಇಂಡಿಯನ್ಸ್ ಜೊತೆ ಸ್ಥಾನ ಪಡೆದುಕೊಂಡಿದೆ. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಸಿಎಸ್​ಕೆ ಡಕ್ವರ್ತ್ ಲುಯಿಸ್ ನಿಯಮದ ಅನ್ವಯ 5 ವಿಕೆಟ್​ಗಳ ಜಯ ಸಾಧಿಸಿತು.

1 / 7
ಐಪಿಎಲ್ 2023 ಟೂರ್ನಿ ಆರಂಭವಾದಾಗಿನಿಂದ ಇದು ಸಿಎಸ್​ಕೆ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಕೊನೆಯ ಐಪಿಎಲ್ ಎಂದು ಹೇಳಲಾಗುತ್ತಿತ್ತು. ಆದರೆ, ಈ ಬಗ್ಗೆ ಧೋನಿ ಬಳಿ ಕೇಳಿದಾಗ ಸ್ಪಷ್ಟ ಉತ್ತರ ಬಂದಿರಲಿಲ್ಲ. ಇದೀಗ ಫೈನಲ್ ಪಂದ್ಯ ಮುಗಿದ ಬಳಿಕ ಎಲ್ಲ ಗೊಂದಲಗಳಿಗೆ ಧೋನಿ ತೆರೆ ಎಳೆದಿದ್ದಾರೆ.

2 / 7
ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್ ವೇಳೆ ಮಾತನಾಡಿದ ಧೋನಿ, ಈಗಿನ ಪರಿಸ್ಥಿತಿಯನ್ನು ಗಮನಿಸಿದರೆ, ನನಗೆ ನಿವೃತ್ತಿ ಘೋಷಿಸಲು ಇದು ನನಗೆ ಸರಿಯಾದ ಸಮಯ. ಆದರೆ, ಈ ವರ್ಷ ನಾನು ಎಲ್ಲೇ ಹೋಗಿದ್ದರು ನನ್ನ ಮೇಲೆ ಪ್ರೀತಿ ಮತ್ತು ವಾತ್ಸಲ್ಯ ತೋರಿಸಿದರು. ಎಲ್ಲರಿಗೂ ತುಂಬಾ ಧನ್ಯವಾದಗಳು ಎಂದು ಹೇಳುವುದು ಸುಲಭದ ವಿಷಯ, ಆದರೆ ಕಠಿಣ ವಿಷಯವೆಂದರೆ ಇನ್ನೂ 9 ತಿಂಗಳು ಕಷ್ಟಪಟ್ಟು ಮುಂದಿನ ಐಪಿಎಲ್ ಆಡುವುದು. ಇದು ನನ್ನ ದೇಹಕ್ಕೆ ಸುಲಭವಾಗುವುದಿಲ್ಲ. ಆದರೆ, ಅಭಿಮಾನಿಗಳಿಗೆ ನನ್ನಿಂದ ಉಡುಗೊರೆಯಾಗಲಿದೆ ಎಂದು ಹೇಳಿದ್ದಾರೆ.

3 / 7
ನಾನು ಈ ಬಾರಿ ಮೊದಲ ಪಂದ್ಯ ಆಡುವಾಗ ಎಲ್ಲರೂ ನನ್ನ ಹೆಸರನ್ನು  ಕೂಗುತ್ತಿದ್ದರು. ನಿಜ ಹೇಳಬೇಕೆಂದರೆ ಆಗ ನನ್ನ ಕಣ್ಣುಗಳು ಒದ್ದೆಯಾಗಿದ್ದವು. ಹಾಗಾಗಿ ಡಗೌಟ್‌ನಲ್ಲಿ ಸ್ವಲ್ಪ ಸಮಯ ತೆಗೆದುಕೊಂಡಿದ್ದೆ- ಎಂಎಸ್ ಧೋನಿ.

4 / 7
ಅಭಿಮಾನಿಗಳ ಈ ಪ್ರೀತಿಯನ್ನು ಆನಂದಿಸಬೇಕು ಎಂದು ನಾನು ಅರಿತುಕೊಂಡಿದ್ದೇನೆ. ಇಂದು ನಾನು ಏನಾಗಿದ್ದೇನೆ ಅದಕ್ಕೆ ಮೂಲ ಕಾರಣವೇ ಅಭಿಮಾನಿಗಳ ಪ್ರೀತಿ. ಅಭಿಮಾನಿಗಳು ನನ್ನ ವೃತ್ತಿ ಜೀವನದ ಪ್ರಮುಖ ಭಾಗ ಎಂದು ಧೋನಿ ಹೇಳಿದ್ದಾರೆ.

5 / 7
ಚಾಂಪಿಯನ್ ಆದ ಬಗ್ಗೆ ಮಾತನಾಡಿದ ಎಂಎಸ್​ಡಿ, ಪ್ರತಿಯೊಂದು ಟ್ರೋಫಿಯೂ ವಿಶೇಷ, ಆದರೆ ಐಪಿಎಲ್‌ನ ವಿಶೇಷತೆ ಏನೆಂದರೆ ಇಲ್ಲಿ ನೀವು ಯಾವುದೇ ಸಂದರ್ಭದಲ್ಲಿ  ಕಠಿಣ ಪಂದ್ಯಕ್ಕೆ ಸಿದ್ಧರಾಗಿರಬೇಕು. ಇಂದು ನಮ್ಮ ಕಡೆಯಿಂದ ಹಲವು ತಪ್ಪುಗಳಾಗಿವೆ. ಬೌಲಿಂಗ್ ವಿಭಾಗ ಸರಿಯಾಗಿ ಕೆಲಸ ಮಾಡಲಿಲ್ಲ. ಆದರೆ ನಮ್ಮ ಬ್ಯಾಟರ್​ಗಳು ಉತ್ತಮ ಪ್ರದರ್ಶನ ತೋರಿದರು ಎಂದಿದ್ದಾರೆ.

6 / 7
ಇದೇವೇಳೆ ಎಂಎಸ್ ಧೋನಿ ಅವರು ಇಡೀ ಟೂರ್ನಿಯಲ್ಲಿ ಸಿಎಸ್​ಕೆ ಆಟಗಾರರು ನೀಡಿದ ಪ್ರದರ್ಶನವನ್ನು ಕೊಂಡಾಡಿದರು. ಮುಖ್ಯವಾಗಿ ಅಜಿಂಕ್ಯ ರಹಾನೆ ಅವರ ಪ್ರಬುದ್ಧತೆಯನ್ನು ಶ್ಲಾಘಿಸಿದರು. ನಿವೃತ್ತರಾದ ಅಂಬಟಿ ರಾಯುಡು ಅವರನ್ನೂ ಹೊಗಳಿದರು.

7 / 7
Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ