AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: CSK ಅಭಿಮಾನಿಗಳಿಗೆ ಬಿಗ್ ಶಾಕ್: ಎಂಎಸ್​ ಧೋನಿ ಅಲಭ್ಯ..!

IPL 2026 MS Dhoni: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಇಂದಿನಿಂದ (ಮಾ.28) ಶುರುವಾಗಲಿದೆ. ಮೊದಲ ಪಂದ್ಯದಲ್ಲಿ ಆರ್​ಸಿಬಿ ಮತ್ತು ಎಸ್​ಆರ್​ಹೆಚ್ ತಂಡಗಳು ಮುಖಾಮುಖಿಯಾದರೆ, ನಾಳೆ ನಡೆಯಲಿರುವ ದ್ವಿತೀಯ ಮ್ಯಾಚ್​ನಲ್ಲಿ ಕೆಕೆಆರ್ ಮತ್ತು ಮುಂಬೈ ಇಂಡಿಯನ್ಸ್ ಸೆಣಸಲಿದೆ. ಇನ್ನು ಮಾರ್ಚ್ 30 ರಂದು ನಡೆಯಲಿರುವ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದ ಮೂಲಕ ಸಿಎಸ್​ಕೆ ಐಪಿಎಲ್ ಅಭಿಯಾನ ಆರಂಭಿಸಲಿದೆ. ಆದರೆ ಈ ಪಂದ್ಯಕ್ಕೆ ಮಹೇಂದ್ರ ಸಿಂಗ್ ಧೋನಿ ಅಲಭ್ಯರಾಗುವುದು ಖಚಿತವಾಗಿದೆ.

ಝಾಹಿರ್ ಯೂಸುಫ್
|

Updated on: Mar 28, 2026 | 10:58 AM

Share
IPL 2026:  ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೂ ಮುನ್ನವೇ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಟಗಾರ ಮಹೇಂದ್ರ ಸಿಂಗ್ ಧೋನಿ (MS Dhoni) ಐಪಿಎಲ್​ನ ಆರಂಭಿಕ ಪಂದ್ಯಗಳಿಂದ ಹೊರಗುಳಿಯುವುದು ಖಚಿತವಾಗಿದೆ.

1 / 5
ಎಂ.ಎಸ್. ಧೋನಿ ಅವರು ಸ್ನಾಯು ಸೆಳೆತದ ಸಮಸ್ಯೆಯಿಂದ  ಬಳಲುತ್ತಿದ್ದು, ಈ ಕಾರಣದಿಂದ ಐಪಿಎಲ್​ನ ಮೊದಲ ಎರಡು ವಾರಗಳ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ. ಅಂದರೆ ರಾಜಸ್ಥಾನ್ ರಾಯಲ್ಸ್, ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯಗಳಿಗೆ ಧೋನಿ ಅಲಭ್ಯರಾಗುವುದು ಬಹುತೇಕ ಖಚಿತ.

2 / 5
ಮಹೇಂದ್ರ ಸಿಂಗ್ ಧೋನಿ ಅನುಪಸ್ಥಿತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿಕೆಟ್ ಕೀಪರ್ ಆಗಿ ಸಂಜು ಸ್ಯಾಮ್ಸನ್ ಕಾಣಿಸಿಕೊಳ್ಳಲಿದ್ದಾರೆ. ಕಳೆದ ಎರಡು ದಿನಗಳಿಂದ ಸಂಜು ಸ್ಯಾಮ್ಸನ್ ವಿಕೆಟ್ ಕೀಪಿಂಗ್ ಅಭ್ಯಾಸ ನಡೆಸುತ್ತಿದ್ದು, ಹೀಗಾಗಿ ಅವರೇ ಕೀಪಿಂಗ್ ಗ್ಲೌಸ್ ತೊಡಲಿದ್ದಾರೆ ಎನ್ನಬಹುದು.

3 / 5
ಇನ್ನು ಸಂಪೂರ್ಣ ಫಿಟ್​ನೆಸ್ ಸಾಧಿಸಿದರೆ ಮಹೇಂದ್ರ ಸಿಂಗ್ ಧೋನಿ ಏಪ್ರಿಲ್ 19 ರಂದು ನಡೆಯಲಿರುವ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯಬಹುದು. ಅಂದರೆ ಏಪ್ರಿಲ್ 15ರ ತನಕ ಧೋನಿ ವಿಶ್ರಾಂತಿ ಪಡೆಯಲಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆರಂಭಿಕ ಪಂದ್ಯಗಳಲ್ಲಿ 'ಥಲಾ' ವನ್ನು ಎದುರು ನೋಡುವಂತಿಲ್ಲ. ಇತ್ತ ಧೋನಿ ಹೊರಗುಳಿದರೆ ಸರ್ಫರಾಝ್ ಖಾನ್​ಗೆ ಚಾನ್ಸ್ ಸಿಗುವ ಸಾಧ್ಯತೆಯಿದೆ.

4 / 5
ಚೆನ್ನೈ ಸೂಪರ್ ಕಿಂಗ್ಸ್ ತಂಡ: ರುತುರಾಜ್ ಗಾಯಕ್‌ವಾಡ್ (ನಾಯಕ), ಆಯುಷ್ ಮ್ಹಾತ್ರೆ, ಎಂಎಸ್ ಧೋನಿ, ಸಂಜು ಸ್ಯಾಮ್ಸನ್, ಡೆವಾಲ್ಡ್ ಬ್ರೆವಿಸ್, ಉರ್ವಿಲ್ ಪಟೇಲ್, ಶಿವಂ ದುಬೆ, ಜೇಮಿ ಓವರ್‌ಟನ್, ರಾಮಕೃಷ್ಣ ಘೋಷ್, ನೂರ್ ಅಹ್ಮದ್, ಖಲೀಲ್ ಅಹ್ಮದ್, ಅನ್ಶುಲ್ ಕಂಬೋಜ್, ಗುರ್ಜಪ್ನೀತ್ ಸಿಂಗ್, ಶ್ರೇಯಸ್ ಗೋಪಾಲ್, ಮುಖೇಶ್ ಚೌಧರಿ, ಅಕೇಲ್ ಹೊಸೈನ್, ಪ್ರಶಾಂತ್ ವೀರ್, ಕಾರ್ತಿಕ್ ಶರ್ಮಾ, ಮ್ಯಾಥ್ಯೂ ಶಾರ್ಟ್, ಅಮನ್ ಖಾನ್, ಸರ್ಫರಾಝ್ ಖಾನ್, ಮ್ಯಾಟ್ ಹೆನ್ರಿ, ರಾಹುಲ್ ಚಹರ್, ಝಾಕ್ ಫೌಲ್ಕ್ಸ್, ಸ್ಪೆನ್ಸರ್ ಜಾನ್ಸನ್.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಕಾಜಿರಂಗದಲ್ಲಿ ಕಂಡಿತು ಹಾಲಿನ ಬಣ್ಣದ ಜಿಂಕೆ; ವಿಡಿಯೋ ವೈರಲ್

ಡಿಕೆಶಿ ಕರೆದೊಯ್ಯಲು ಬಂದ ಹೊಸ ಬೆಂಜ್ ಕಾರು ಹೇಗಿದೆ ನೋಡಿ

ವೈಭವ್ ಸಿಕ್ಸರ್​ಗಳ ಸುನಾಮಿಗೆ ಗೇಲ್ ದಾಖಲೆ ಧ್ವಂಸ

‘ಸಿಟಿ ಲೈಟ್ಸ್’ ಸಿನಿಮಾ: ದುನಿಯಾ ವಿಜಯ್ ನಿರ್ದೇಶನ ಮಾಡುವ ಸ್ಟೈಲ್ ನೋಡಿ..

ಸಿದ್ದರಾಮಯ್ಯ ಮನೆ ಮುಂದೆ ಭುಗಿಲೆದ್ದ ಆಕ್ರೋಶ: ಅಭಿಮಾನಿಗಳು ಪೊಲಿಸ್ ವಶಕ್ಕೆ

ಹಂಪಿಯಿಂದ ಕೋಲಾರಕ್ಕೆ ಶಿಫ್ಟ್: ಸ್ಥಳ ಬದಲಾಗಿದ್ದಕ್ಕೆ ವಿಚಲಿತಗೊಂಡ ಆನೆ

ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!

ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ

ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ

ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ